Home Karnataka State Politics Updates Parliment election Survey: ಕರ್ನಾಟಕದಲ್ಲಿ ಬಿಜೆಪಿ ಗೆಲ್ಲೋ ಸೀಟುಗಳೆಷ್ಟು ಗೊತ್ತಾ? ಅಚ್ಚರಿ ಮೂಡಿಸಿದ ಸಮೀಕ್ಷಾ ವರದಿ

Parliment election Survey: ಕರ್ನಾಟಕದಲ್ಲಿ ಬಿಜೆಪಿ ಗೆಲ್ಲೋ ಸೀಟುಗಳೆಷ್ಟು ಗೊತ್ತಾ? ಅಚ್ಚರಿ ಮೂಡಿಸಿದ ಸಮೀಕ್ಷಾ ವರದಿ

Parliment election Survey

Hindu neighbor gifts plot of land

Hindu neighbour gifts land to Muslim journalist

Parliment Election Survey: ಲೋಕಸಭಾ ಚುನಾವಣೆಯ ರಂಗು ದಿನದಿಂದ ದಿನಕ್ಕೆ ಕಾವೇರುತ್ತಿದೆ. ಈಗಾಗಲೇ ಚುನಾವಣಾ ಆಯೋಗವು ತಾತ್ಕಾಲಿಕ ದಿನಾಂಕವನ್ನು ಪ್ರಕಟ ಮಾಡಿದ್ದು, ಪಕ್ಷಗಳ ತಯಾರಿ ಬಿರುಸಾಗುತತಿವೆ. ಈ ಹಿನ್ನೆಲೆಯಲ್ಲಿ ಕೆಲವು ಪತ್ರಿಕೆಗಳು, ಮಾಧ್ಯಮಗಳು ಚುನಾವಣಾ ಸಮೀಕ್ಷೆಗಳನ್ನು(parliament Election Survey) ಕೈಗೊಳ್ಳುತ್ತಿವೆ. ಅಂತೆಯೇ ಇದೀಗ ಅಚ್ಚರಿಯ ಸಮೀಕ್ಷೆಯೊಂದು ಹೊರ ಬಿದ್ದಿದ್ದು ಮುಂಬರುವ ಲೋಕ ಸಮರದಲ್ಲಿ ಕರ್ನಾಟಕದಲ್ಲಿ ಬಿಜೆಪಿ  ಎಷ್ಟು ಸೀಟು ಗೆಲ್ಲುತ್ತೆ ಎಂಬುದು ಬಹಿರಂಗವಾಗಿದೆ.

ಇದನ್ನೂ ಓದಿ: Puttur: ಅರುಣ್‌ ಕುಮಾ‌ರ್ ಪುತ್ತಿಲ ಬೆಂಗಳೂರಿನಲ್ಲಿ ಬಿಜೆಪಿ ಸೇರ್ಪಡೆಗೆ ಸಿದ್ಧತೆ- ಹೈಕಮಾಂಡ್ ಒಪ್ಪಿಗೆ

ಹೌದು, 2024ರ ಲೋಕಸಭೆ ಚುನಾವಣೆ ಕುರಿತು Janmatpolls ವಿವಿಧ ರಾಜ್ಯಗಳಲ್ಲಿ ಸಮೀಕ್ಷೆಯನ್ನು ನಡೆಸುತ್ತಿದೆ. ಕರ್ನಾಟಕದಲ್ಲಿಯೂ ಸಮೀಕ್ಷೆ ಮಾಡಿದ್ದು, ಸಮೀಕ್ಷೆಯ ವರದಿ ಬಿಜೆಪಿ ನಾಯಕರ ಚುನಾವಣಾ ಉತ್ಸಾಹವನ್ನು ಹೆಚ್ಚಿಸಿದೆ. ಯಾಕೆಂದರೆ Janmatpolls ಚುನಾವಣಾ ಪೂರ್ವ ಸಮೀಕ್ಷೆಯ ಪ್ರಕಾರ ಕರ್ನಾಟಕದ ಪ್ರತಿಪಕ್ಷ ಬಿಜೆಪಿ 18-20 ಸ್ಥಾನಗಳಲ್ಲಿ ಜಯಗಳಿಸಲಿದೆ. ಈ ಮೂಲಕ ರಾಜ್ಯದಲ್ಲಿ ಅತಿ ಹೆಚ್ಚು ಸ್ಥಾನಗಳನ್ನು ಗೆಲ್ಲುವ ಪಕ್ಷವಾಗಲಿದೆ ಎಂದು ಸಮೀಕ್ಷೆ ಅಂದಾಜಿಸಿದೆ.

ಅಂದಹಾಗೆ ಕಾಂಗ್ರೆಸ್ ಪಕ್ಷ 7-9 ಸ್ಥಾನಗಳಲ್ಲಿ ಜಯಗಳಿಸಲಿದೆ. ಬಿಜೆಪಿ ಜೊತೆ ಮೈತ್ರಿ ಮಾಡಿಕೊಂಡಿರುವ ಜೆಡಿಎಸ್ ಪಕ್ಷವನ್ನು ಬಿಜೆಪಿ ಜೊತೆ ಸೇರಿಸಲಾಗಿದೆ. ಜೆಡಿಎಸ್‌ ಎಷ್ಟು ಸ್ಥಾನಗಳಿಸಲಿದೆ ಎಂದು ಸಮೀಕ್ಷೆ ಪ್ರತ್ಯೇಕವಾಗಿ ಹೇಳಿಲ್ಲ. ಇನ್ನು ಕೆಲ ದಿನಗಳ ಹಿಂದೆ Lok Poll ಚುನಾವಣಾ ಪೂರ್ವ ಸಮೀಕ್ಷೆಯ ಪ್ರಕಾರ ಕರ್ನಾಟಕದ ಆಡಳಿತ ಪಕ್ಷ ಕಾಂಗ್ರೆಸ್ 12-14 ಸ್ಥಾನಗಳಲ್ಲಿ ಜಯಗಳಿಸಲಿದೆ ಎಂಬ ಮಾಹಿತಿ ಬಹಿರಂಗವಾಗಿತ್ತು. ಇದರಿಂದ ಬಿಜೆಪಿ ನಾಯಕರ ಲೆಕ್ಕಾಚಾರ ತಲೆಕೆಳಗುವಂತೆ ಮಾಡಿತ್ತು.