State in-charges of BJP : ಲೋಕ ಸಮರಕ್ಕೆ ರಾಜ್ಯ ಉಸ್ತುವಾರಿಗಳನ್ನು ನೇಮಿಸಿದ ಬಿಜೆಪಿ- ಕರ್ನಾಟಕಕ್ಕೆ ಯಾರು ಹೊಸ ಸಾರಥಿ ?!

 

State in-charges of BJP ಮುಂಬರುವ ಲೋಕಸಭಾ ಚುನಾವಣೆಯ ಸಂಭಾವನೀಯ ದಿನಾಂಕ ಪ್ರಕಟವಾಗಿದೆ. ಈ ಹಿನ್ನೆಲೆಯಲ್ಲಿ ಎಲ್ಲಾ ಪಕ್ಷಗಳು ಚುನಾವಣಾ ನಡೆಸುತ್ತಿವೆ. ಅಂತೆಯೇ ಇದೀಗ ಬಿಜೆಪಿಯು ಎಲ್ಲ ರಾಜ್ಯಗಳಿಗೆ ಲೋಕಸಭಾ ಚುನಾವಣೆಯ ಪ್ರಯುಕ್ತ ರಾಜ್ಯ ಉಸ್ತುವಾರಿಗಳನ್ನು(State in-charges of BJP) ನೇಮಿಸಿದೆ.

ಹೌದು, ಲೋಕಸಭೆ ಚುನಾವಣೆಗೆ(Parliament election)23 ಚುನಾವಣಾ ಉಸ್ತುವಾರಿಗಳು ಮತ್ತು ಸಹ ಉಸ್ತುವಾರಿಗಳ ಪಟ್ಟಿಯನ್ನು ಬಿಜೆಪಿ ಬಿಡುಗಡೆ ಮಾಡಿದೆ. ಸಂಸದ ರಾಧಾ ಮೋಹನ್ ದಾಸ್ ಅಗರ್ವಾಲ್(Radha Mohan Das Agarwal) ಅವರನ್ನು ಕರ್ನಾಟಕದ ಉಸ್ತುವಾರಿಯನ್ನಾಗಿ ಮತ್ತು ಆಂಧ್ರಪ್ರದೇಶದ ವಿಧಾನ ಪರಿಷತ್ ಸದಸ್ಯ ಪೊಂಗುಲೇಟಿ ಸುಧಾಕರ್ ರೆಡ್ಡಿ(Sudhakar reddy)ಅವರನ್ನು ಕರ್ನಾಟಕದ ಸಹ ಉಸ್ತುವಾರಿಯನ್ನಾಗಿ ನೇಮಕ ಮಾಡಿ ಬಿಜೆಪಿ ಆದೇಶ ಹೊರಡಿಸಿದೆ.

ಯಾವ ಯಾವ ರಾಜ್ಯಕ್ಕೆ ಯಾರು ಉಸ್ತುವಾರಿ:
ಒಟ್ಟು 23 ಮಂದಿಯನ್ನು ಉಸ್ತುವಾರಿ ಮತ್ತು ಸಹ ಉಸ್ತುವಾರಿಗಳನ್ನಾಗಿ ನೇಮಕ ಮಾಡಲಾಗಿದೆಕೇರಳಕ್ಕೆ ಪ್ರಕಾಶ್‌ ಜಾವ್ಡೇಕರ್‌, ಪುದುಚೇರಿಗೆ ನಿರ್ಮಲ್ ಕುಮಾರ್ ಸುರಾನ, ಬೈಜಯಂತ್ ಪಾಂಡಾ ಉತ್ತರ ಪ್ರದೇಶದ ನೂತನ ಉಸ್ತುವಾರಿಯಾಗಲಿದ್ದಾರೆ. ಬಿಹಾರದ ಚುನಾವಣಾ ಉಸ್ತುವಾರಿಯಾಗಿ ವಿನೋದ್ ತಾವ್ಡೆ ನೇಮಕ ಅವರನ್ನು ನೇಮಕ ಮಾಡಲಾಗಿದೆ. ವಿಜಯಪಾಲ್ ತೋಮರ್ ಅವರನ್ನು ಒಡಿಶಾ ಹಾಗೂ ಶ್ರೀಕಾಂತ್ ಶರ್ಮಾ ಅವರನ್ನು ಹಿಮಾಚಲದ ಉಸ್ತುವಾರಿಯನ್ನಾಗಿ ಮಾಡಲಾಗಿದೆ. ಜಮ್ಮು-ಕಾಶ್ಮೀರದ ಉಸ್ತುವಾರಿಯಾಗಿ ತರುಣ್ ಚುಗ್ ಹಾಗೂ ಆಶಿಶ್ ಸೂದ್ ಅವರನ್ನು ಆಯ್ಕೆ ಮಾಡಲಾಗಿದೆ.

 

 

Leave A Reply

Your email address will not be published.