Basavanagouda yatnal: ಬಿಜೆಪಿ ಶಾಸಕ ಬಸವನಗೌಡ ಯತ್ನಾಳ್’ಗೆ ಬಿಗ್ ಶಾಕ್ ಕೊಟ್ಟ ರಾಜ್ಯ ಸರ್ಕಾರ!!

Basavan gouda yatnal: ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್’ಗೆ ರಾಜ್ಯ ಸರ್ಕಾರದ ಅಧಿನ ಸಂಸ್ಥೆ ಬಿಗ್ ಶಾಕ್ ನೀಡಿದ್ದು, ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿಯು ಯತ್ನಾಳ್(Basavanaguda yatnal) ಒಡೆತನದ ಸಕ್ಕರೆ ಕಾರ್ಖಾನೆ ಮುಚ್ಚಲು ಆದೇಶ ಹೊರಡಿಸಿದೆ.

ಇದನ್ನೂ ಓದಿ: Electric Scooter: ಬಜೆಟ್ ಫ್ರೆಂಡ್ಲಿ ಎಲೆಕ್ಟ್ರಿಕ್ ಸ್ಕೂಟರ್‌ಗಳು, ಬೇಗ ಪರ್ಚೇಸ್ ಮಾಡಿ

ಹೌದು, ಕಲಬುರಗಿ(Kalaburagi) ಜಿಲ್ಲೆ ಚಿಂಚೋಳಿಯಲ್ಲಿರುವ ಬಸವನಗೌಡ ಯತ್ನಾಳ್ ಒಡೆತನದ ಸಿದ್ದಶ್ರೀ ಸೌಹಾರ್ದ ಸಹಕಾರ ಸಕ್ಕರೆ ಕಾರ್ಖಾನೆ ಕಳೆದ ಒಂದು ವರ್ಷದಿಂದಲೂ ಮಾಲಿನ್ಯ ನಿಯಂತ್ರಣ ಮಂಡಳಿ ನಿಯಮಗಳನ್ನು ಉಲ್ಲಂಘಿಸಿರುವುದು ಸ್ಪಷ್ಟವಾಗಿ ಗೋಚರಿಸಿದ್ದು, ಈ ಹಿನ್ನಲೆಯಲ್ಲಿ ಕಾರ್ಖಾನೆ ಮುಚ್ಚುವಂತೆ ನೋಟಿಸ್‌ ಜಾರಿ ಮಾಡಲಾಗಿದೆ ಎಂದು ತಿಳಿದು ಬಂದಿದೆ.

ಅಂದಹಾಗೆ ಹುಮ್ನಾಬಾದ್ ನ ಪ್ರಸನ್ನ ಪ್ರಿ ಪ್ರೊಸೆಸಿಂಗ್ ಪ್ರೈವೆಟ್ ಲಿಮಿಟೆಡ್ ನಲ್ಲಿ ಇತ್ತೀಚೆಗೆ ವಿಷಾನೀಲ ಸೋರಿಕೆಯಾಗಿ ಇಬ್ಬರು ಕಾರ್ಮಿಕರು ಬಲಿಯಾಗಿದ್ದರು. ಈ ಹಿನ್ನೆಲೆಯಲ್ಲಿ ಹುಮ್ನಾಬಾದ್ ಕಾರ್ಖಾನೆಯನ್ನು ಹಾಗೂ ಯತ್ನಾಳ್ ಒಡೆತನದ ಚಿಂಚೋಳಿಯ ಸಿದ್ದಶ್ರೀ ಸೌಹಾರ್ದ ಸಹಕಾರಿ ಸಕ್ಕರೆ ಕಾರ್ಖಾನೆಗಳನ್ನು ತಕ್ಷಣ ಮುಚ್ಚುವಂತೆ ಆದೇಶ ನೀಡಲಾಗಿದೆ.

ಈ ಹಿನ್ನೆಲೆಯಲ್ಲಿ ವಾಯು, ಜಲ ಕಾಯ್ದೆ ಉಲ್ಲಂಘನೆ ಆರೋಪ ಹಿನ್ನೆಲೆಯಲ್ಲಿ ಫ್ಯಾಕ್ಟರಿಗೆ ಬೀಗ ಜಡಿಯುವಂತೆ ಹಾಗೂ ಫ್ಯಾಕ್ಟರಿಗೆ ಲಭ್ಯವಿರುವ ನೀರಿನ ಸಂಪರ್ಕ, ವಿದ್ಯುತ್ ಕಡಿತಗೊಳಿಸುವಂತೆ ಮಂಡಳಿ ಆದೇಶ ನೀಡಿದೆ.

ಇದಲ್ಲದೆ ಕಾರ್ಖಾನೆಯ ನೊಂದಣಿಗೆ ಸಹಕರಿಸಿದ ಅಧಿಕಾರಿಗಳ ವಿರುದ್ಧವೂ ಕ್ರಿಮಿನಲ್ ಮೊಕದ್ದಮೆ ದಾಖಲಿಸುವಂತೆ ಕೆಎಸ್‌ಪಿಸಿಬಿ ಸಭೆಯಲ್ಲಿ ಅನುಮೋದನೆ ನೀಡಲಾಗಿದೆ. ಕಾರ್ಖಾನೆ ಪರಿಶೀಲನೆ ವೇಳೆ ಅವೈಜ್ಞಾನಿಕ ನಿರ್ವಹಣೆ ಸೇರಿದಂತೆ ಹಲವು ಗಂಭೀರ ಲೋಪಗಳು ಪತ್ತೆಯಾಗಿವೆ ಎಂದು ಮೂಲಗಳು ತಿಳಿಸಿವೆ.

Leave A Reply

Your email address will not be published.