Guidelines for PGs: ಪೊಲೀಸ್‌ ಇಲಾಖೆಯಿಂದ ಪಿಜಿ ಗಳಿಗೆ ಕಠಿಣ ಮಾರ್ಗಸೂಚಿ; ಪಾಲನೆ ಕಡ್ಡಾಯ!!!

Guidelines for PGs: ಬೆಂಗಳೂರಿನಲ್ಲಿರುವ ಪೇಯಿಂಗ್‌ ಗೆಸ್ಟ್‌ (ಪಿಜಿ) ಗಳಿಗೆ ಪೊಲೀಸ್‌ ಇಲಾಖೆಯಿಂದ ಕೆಲವು ಕಠಿಣ ಮಾರ್ಗಸೂಚಿಗಳನ್ನು ಹೊರಡಿಸಿದೆ. ಕಡ್ಡಾಯವಾಗಿ ಈ ನಿಯಮಗಳನ್ನು ಪಾಲಿಸಲು ಸೂಚನೆ ನೀಡಲಾಗಿದೆ.

ಮಾರ್ಗಸೂಚಿ ಈ ರೀತಿ ಇದೆ;

(ಕರ್ನಾಟಕ ಪೊಲೀಸ್ ಕಾಯ್ದೆ ಕಲಂ. 34(ಡಿ) ಜೊತೆಗೆ ಕಲಂ. 70 ರ ಅನ್ವಯ)

ಅಗತ್ಯವಿರುವ ಪರವಾನಿಗೆಯನ್ನು ಬಿಬಿಎಂಪಿಯಿಂದ ಕಡ್ಡಾಯವಾಗಿ(ಟ್ರೇಡ್ ಲೈಸನ್ಸ್) ಪಡೆಯುವುದು. ವಾಸಕ್ಕೆ ಬರುವ ಎಲ್ಲಾ ವ್ಯಕ್ತಿಗಳ ಗುರುತಿನ ಚೀಟಿ ಮತ್ತು ಇತ್ತೀಚಿನ ಭಾವಚಿತ್ರ ಪಡೆದು, ರಕ್ತ ಸಂಬಂಧಿಕರ ವಿವರಗಳನ್ನು ಮೊಬೈಲ್ ಸಂಖ್ಯೆಗಳೊಂದಿಗೆ ತಂತ್ರಜ್ಞಾನದ ಮೂಲಕ (ಗಣಕೀಕರಣ) ದಾಖಲಿಸುವುದು ಹಾಗೂ ಭೇಟಿ ನೀಡಲು ಬರುವವರ (ಸಂಬಂಧಿಕರು/ಸಾರ್ವಜನಿಕರು ಸೇರಿದಂತೆ) ವಿವರಗಳನ್ನು ಪ್ರತ್ಯೇಕವಾಗಿ ನಿರ್ವಹಿಸುವುದು.

Guidelines for PGs

ಇದನ್ನೂ ಓದಿ: Bhopal News: 49 ವರ್ಷದ ಮಹಿಳೆಯನ್ನು ವರಿಸಿದ 103 ವರ್ಷದ ಸ್ವಾತಂತ್ರ್ಯ ಹೋರಾಟಗಾರ!

ಕರ್ನಾಟಕ ಸಾರ್ವಜನಿಕರ ಸುರಕ್ಷತೆ ಅಧಿನಿಯಮ-2017 ರ ಅನ್ವಯ ಕಡ್ಡಾಯವಾಗಿ ಸಿಸಿ ಕ್ಯಾಮರಾಗಳನ್ನು ಅಳವಡಿಸುವುದು ಹಾಗೂ ಅಗ್ನಿ ಅನಾಹುತದ ಕುರಿತಂತೆ ಅಗತ್ಯ ಸುರಕ್ಷತೆ ಕ್ರಮಗಳನ್ನು ಅನುಸರಿಸುವುದು.

ಮಾದಕ ವಸ್ತುಗಳ ಸೇವನೆ ಮತ್ತು ಸಂಗ್ರಹಣೆಯಿಂದ ಕಾನೂನು ಬಾಹಿರ ಚಟುವಟಿಕೆಗಳಿಗೆ ಅವಕಾಶ ಮಾಡಿಕೊಡತಕ್ಕದಲ್ಲ.

ಸ್ಥಳೀಯ ಪೊಲೀಸ್ ಠಾಣೆ, ತುರ್ತು ಸ್ಪಂದನೆಯ-112. ವೈದ್ಯಕೀಯ ಸೇವೆಯ-103. ಮತ್ತು ಸೈಬರ್ ಅಪರಾಧಕ್ಕೆ ಸಂಬಂಧಪಟ್ಟ ದೂರವಾಣಿ 1930 ಮುಂತಾದ ಅಗತ್ಯ ಸೇವೆಗಳ ಸಂಖ್ಯೆಗಳನ್ನು ಎಲ್ಲರಿಗೂ ಗೋಚರವಾಗುವಂತೆ ಪ್ರದರ್ಶಿಸುವುದು ಹಾಗೂ ಪ್ರಥಮ ಚಿಕಿತ್ಸೆ (First-aid Kits) ಸಲಕರಣೆಗಳನ್ನು ಇಟ್ಟುಕೊಳ್ಳುವುದು.

ಕರ್ತವ್ಯಕ್ಕೆ ನೇಮಿಸಿಕೊಳ್ಳುವ ಎಲ್ಲಾ ವ್ಯಕ್ತಿಗಳ (ಅಡುಗೆ ಕೆಲಸ, ಸೆಕ್ಯೂರಿಟಿ ಗಾರ್ಡ್ ಹಾಗೂ ಇನ್ನಿತರೇ ವ್ಯಕ್ತಿಗಳ) ಪೂರ್ವಾಪರಗಳನ್ನು ಪೊಲೀಸ್ ಪರಿಶೀಲನೆಗೆ ಒಳಪಡಿಸಿದ ನಂತರ ಕರ್ತವ್ಯಕ್ಕೆ ನೇಮಿಸಿಕೊಳ್ಳುವುದು ಹಾಗೂ ಇತರೆ ವಿಳಾಸದ ಧೃಡೀಕರಣ ಸೇರಿದಂತೆ ರಕ್ತ ಸಂಬಂಧಿಕರ ಮಾಹಿತಿಯನ್ನು ಸೂಕ್ತ ದಾಖಲಾತಿಗಳೊಂದಿಗೆ ಪಡೆದು ನಿರ್ವಹಿಸುವುದು.

ವಿದೇಶಿ ಪ್ರಜೆಗಳು ಪಿ.ಜಿ ಯಲ್ಲಿ ನೆಲಿಸಿದ್ದಲ್ಲಿ, ಮಾಹಿತಿಯನ್ನು The Registration of Foreginers Rules 1939 ಅನ್ವಯ ಫಾರಂ ‘ಸಿ’ ಅನ್ವಯ ಸ್ಥಳೀಯ ಪೊಲೀಸ್ ಠಾಣೆಗೆ ನೇರವಾಗಿ ಅಥವಾ ತಂತ್ರಜ್ಞಾನದ ಮೂಲಕ ನೀಡುವುದು.

ವಾಸಕ್ಕೆ ಪ್ರವೇಶ ಪಡೆದಿರುವವರನ್ನು ಹೊರತು ಪಡಿಸಿ ಇತರೇ ಯಾರಿಗೂ ವಾಸ್ತವ್ಯಕ್ಕೆ ಅವಕಾಶ ಮಾಡಿಕೊಡತಕ್ಕದ್ದಲ್ಲ. ಸರ್ವೋಚ್ಛ ನ್ಯಾಯಾಲಯದ ಆದೇಶದ ಅನುಸಾರ ರಾತ್ರಿ 10-00 ಗಂಟೆಯಿಂದ ಬೆಳಿಗ್ಗೆ 6-00 ಗಂಟೆಯವರೆಗೆ ಯಾವುದೇ ಧ್ವನಿವರ್ದಕಗಳನ್ನು ಉಪಯೋಗಿಸತಕ್ಕದಲ್ಲ. ಒಂದು ವೇಳೆ ಸುರಕ್ಷತಾ ಕ್ರಮ, ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳದೇ ಯಾವುದಾದರೂ ಅಹಿತಕರ ಘಟನೆ ಸಂಭವಿಸಿದ್ದಲ್ಲಿ ಸಂಬಂಧಪಟ್ಟ ಪಿ.ಜಿ. ಮಾಲೀಕರು, ವ್ಯವಸ್ಥಾಪಕರೇ ಅದರ ಹೊಣೆಗಾರರಾಗುತ್ತಾರೆ.

ನೇರ ಸಹಾಯಕ್ಕಾಗಿ Helpline Number: 112 ಸಂಪರ್ಕಸಲ ಸೂಚಿಸಲಾಗಿದೆ.

Leave A Reply

Your email address will not be published.