Crime News: 10 ವರ್ಷದ ಪ್ರೀತಿ ಕೊಲೆಯಲ್ಲಿ ಅಂತ್ಯ; ಓಯೋ ಹೋಟೆಲ್‌ಗೆ ಕರೆದುಕೊಂಡು ಹೋಗಿ ಕೊಂದ ಪ್ರಿಯತಮ!

Crime News: ಇನ್ಫೋಸಿಸ್‌ನಲ್ಲಿ ಕೆಲಸ ಮಾಡುತ್ತಿದ್ದ ಸಾಫ್ಟ್‌ವೇರ್‌ ಇಂಜಿನಿಯರ್‌ ಓರ್ವಳನ್ನು ಪುಣೆ ಹೊರವಲಯದಲ್ಲಿ ಶನಿವಾರ ರಾತ್ರಿ ಹೋಟೆಲ್‌ವೊಂದರಲ್ಲಿ ಗುಂಡಿಕ್ಕಿ ಹತ್ಯೆ ಮಾಡಿರುವ ಕುರಿತು ಪೊಲೀಸರು ಹೇಳಿದ್ದಾರೆ. ಈ ಘಟನೆ ಸಂಬಂಧ ಮಹಿಳೆಯ ಗೆಳೆಯನನ್ನು ಪೊಲೀಸರು ಬಂಧಿಸಿದ್ದಾರೆ.

ಉತ್ತರಪ್ರದೇಶ ಮೂಲದ ವಂದನಾ ದ್ವಿವೇದಿ ಎಂಬಾಕೆಯೇ ಮೃತ ಮಹಿಳೆ.

ಸಾಫ್ಟ್‌ವೇರ್‌ ಇಂಜಿನಿಯರ್‌ ಆಗಿ ಇನ್ಫೋಸಿಸ್‌ನಲ್ಲಿ ಕೆಲಸ ಮಾಡುತ್ತಿದ್ದರು ಎನ್ನಲಾಗಿದೆ. ಶನಿವಾರ ರಾತ್ರಿ ಪಿಂಪ್ರಿ ಚಿಂಚ್‌ವಾಡ್‌ನ ಹಿಂಜೆವಾರಿ ಪ್ರದೇಶದ ಓಯೋ ಹೋಟೆಲ್‌ನ ಕೊಠಡಿಯಲ್ಲಿ ರಕ್ತದ ಮಡುವಿನಲ್ಲಿ ಮಹಿಳೆಯ ಶವ ಪತ್ತೆಯಾಗಿದೆ. ನಂತರ ಶವವನ್ನು ಮರಣೋತ್ತರ ಪರೀಕ್ಷೆಗಾಗಿ ಆಸ್ಪತ್ರೆಗೆ ರವಾನಿಸಲಾಗಿದೆ.

ಸಿಸಿ ಕ್ಯಾಮೆರಾ ಪರಿಶೀಲನೆ ಮಾಡಿದಾಗ ಮಹಿಳೆಯ ಜೊತೆ ಓರ್ವ ವ್ಯಕ್ತಿ ಇರುವುದು ಪತ್ತೆಯಾಗಿದೆ. ಆಕೆಯ ಗೆಳೆಯ ರಿಷಬ್‌ ನಿಗಮ್‌ ಎಂದು ಗೊತ್ತಾಗಿದ್ದು ಈತ ಉತ್ತರ ಪ್ರದೇಶದ ಮೂಲದವನು. ಇವರಿಬ್ಬರ ನಡುವೆ ಪರಸ್ಪರ ಸಂಬಂಧವಿದ್ದು, ಜಗಳವೇ ಕೊಲೆಗೆ ಕಾರಣ ಎಂಬುವುದು ತನಿಖೆಯಿಂದ ತಿಳಿದು ಬಂದಿದೆ. ರಿಷಬ್‌ ನಿಗಮ್‌ನನ್ನು ವಶಕ್ಕೆ ಪಡೆದಿದ್ದು, ವಿಚಾರಣೆ ನಡೆಸಲಾಗುತ್ತಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.

 

ವಂದನಾ ಮತ್ತು ರಿಷಬ್‌ ಇಬ್ಬರ ಹೆಸರಿನಲ್ಲಿ ಹೋಟೆಲ್‌ ರೂಂ ಬುಕ್ಕಿಂಗ್‌ ಮಾಡಲಾಗಿದೆ. ರಿಷಬ್‌ ನಮ್ಮ ಪ್ರಮುಖ ಶಂಕಿತ ಎಂದು ಹಿರಿಯ ಪೊಲೀಸರು ಮಾಧ್ಯಮಗಳಿಗೆ ತಿಳಿಸಿದ್ದಾರೆ.

Leave A Reply

Your email address will not be published.