Home Travel Subramanya: ಫೆ.1 ರಿಂದ ಕುಮಾರ ಪರ್ವತ ಚಾರಣಕ್ಕೆ ನಿಷೇಧ-ಅರಣ್ಯ ಇಲಾಖೆ

Subramanya: ಫೆ.1 ರಿಂದ ಕುಮಾರ ಪರ್ವತ ಚಾರಣಕ್ಕೆ ನಿಷೇಧ-ಅರಣ್ಯ ಇಲಾಖೆ

Subramanya

Hindu neighbor gifts plot of land

Hindu neighbour gifts land to Muslim journalist

Subramanya: ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದ ಹಿಂಭಾಗದಲ್ಲಿರುವ ಕುಮಾರಪರ್ವತ ಚಾರಣವನ್ನು ಫೆ.1 ರಿಂದ ನಿಷೇಧ ಮಾಡಲಾಗಿದೆ.

ಬಿರುಬಿಸಿಲಿನ ವಾತಾವರಣ, ನೀರಿನ ಸಮಸ್ಯೆ ಪರ್ವತದಲ್ಲಿ ಎದುರಾಗುವ ಕಾರಣ ಚಾರಣಿಗರ ಹಿತದೃಷ್ಟಿಯಿಂದ ಈ ಕ್ರಮ ಕೈಗೊಳ್ಳಲಾಗಿದೆ. ಹಾಗಾಗಿ ಫೆ.1 ರಿಂದ ಅಕ್ಟೋಬರ್‌ ತನಕ ಅಥವಾ ಮುಂದಿನ ಆದೇಶದ ತನಕ ಕುಮಾರಪರ್ವತ ಚಾರಣ ನಿಷೇಧ ಮಾಡಲಾಗಿದೆ ಎಂದು ಅರಣ್ಯ ಇಲಾಖೆಯ ಅಧಿಕಾರಿಗಳು ಮಾಧ್ಯಮಕ್ಕೆ ತಿಳಿಸಿರುವುದಾಗಿ ವರದಿಯಾಗಿದೆ.

ಇದನ್ನೂ ಓದಿ: Indian Student: ಅಮೆರಿಕಾದಲ್ಲಿ ಭಾರತೀಯ ವಿದ್ಯಾರ್ಥಿಯ ಭೀಕರ ಹತ್ಯೆ; 50 ಬಾರಿ ಸುತ್ತಿಗೆಯಿಂದ ಹೊಡೆದು ಹತ್ಯೆ!

ಪರ್ವತದ ಹುಲ್ಲುಗಾವಲು ಸಂಪೂರ್ಣ ಒಣಗಿದೆ, ಜೊತೆಗೆ ಈ ವರ್ಷದ ಕುಮಾರಪರ್ವತ ಚಾರಣದ ಅವಧಿ ಮುಗಿದಿದೆ. ಬಿಸಿಲಿನ ಬೇಗೆಗೆ ಪರ್ವತದ ಹುಲ್ಲುಗಾವಲು ಬೆಂಕಿಗೆ ತುತ್ತಾಗದಂತೆ ಕ್ರಮ ಕೈಗೊಳ್ಳುವ ಅವಶ್ಯಕತೆ ಇದೆ. ನೀರಿನ ಮೂಲ ಬತ್ತಿ ಹೋಗಿದೆ. ಗಿರಿಗದ್ದೆಯಲ್ಲಿ ಕುಡಿಯುವ ನೀರು ಮತ್ತು ಶೌಚಾಲಯಕ್ಕೆ ನೀರಿನ ವ್ಯವಸ್ಥೆ ಒದಗಿಸಲು ತೊಂದರೆಯಾಗಿದೆ ಎಂದು ಅರಣ್ಯ ಇಲಾಖೆ ತಿಳಿಸಿದೆ.