Jharkhand: ಶಿಕ್ಷಕಿಯೊಂದಿಗೆ ಇಬ್ಬರು ಶಿಕ್ಷಕರ ಲವ್‌!! ತ್ರಿಕೋನ ಪ್ರೇಮ ಕಥೆಗೆ ದುರಂತ ಅಂತ್ಯ!!!

ತ್ರಿಕೋನ ಪ್ರೇಮ ಪ್ರಕರಣವೊಂದು ಇದೀಗ ಕೊಲೆಯಲ್ಲಿ ಅಂತ್ಯಗೊಂಡಿರುವ ಘಟನೆಯೊಂದು ಜಾರ್ಖಂಡ್‌ನ ಗೊಡ್ಡಾ ಜಿಲ್ಲೆಯ ಸರ್ಕಾರಿ ಶಾಲೆಯೊಂದರಲ್ಲಿ ನಡೆದಿದೆ.

ಶಿಕ್ಷಕರೊಬ್ಬರು ಪ್ರೇಮ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ಸಹೋದ್ಯೋಗಿಗಳನ್ನು ಗುಂಡಿಕ್ಕಿ ಕೊಂದಿದ್ದಾರೆ. ಬಳಿಕ ಶಿಕ್ಷಕ ತಾನು ಕೂಡಾ ಗುಂಡು ಹಾರಿಸಿಕೊಂಡು ಗಂಭೀರ ಗಾಯ ಮಾಡಿಕೊಂಡಿದ್ದಾರೆ. ಮಂಗಳವಾರ ಬೆಳಗ್ಗೆ 11 ಗಂಟೆ ಸುಮಾರಿಗೆ ರಾಂಚಿಯಿಂದ ಸುಮಾರು 300 ಕಿಮೀ ದೂರದಲ್ಲಿರುವ ಪೊರಿಯಾಹತ್‌ನಲ್ಲಿರುವ ಚಾತ್ರಾ ಉನ್ನತೀಕರಿಸಿದ ಶಾಲೆಯಲ್ಲಿ ಈ ಘಟನೆ ನಡೆದಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಇದನ್ನೂ ಓದಿ: Madrac HC: ದೇವಸ್ಥಾನಗಳಲ್ಲಿ ಹಿಂದೂಯೇತರ ಪ್ರವೇಶ ನಿಷೇಧಿಸಿದ ಹೈಕೋರ್ಟ್‌!!

ಶಾಲೆಯ ಕೊಠಡಿಯೊಂದರಲ್ಲಿ ಮಹಿಳೆ ಸೇರಿದಂತೆ ಇಬ್ಬರು ಶಿಕ್ಷಕರ ಶವಗಳು ರಕ್ತದಲ್ಲಿ ತೊಯ್ದ ಸ್ಥಿತಿಯಲ್ಲಿ ಪತ್ತೆಯಾಗಿವೆ ಎಂದು ಗೊಡ್ಡಾ ಪೊಲೀಸ್ ವರಿಷ್ಠಾಧಿಕಾರಿ ನಾಥು ಸಿಂಗ್ ಮೀನಾ ತಿಳಿಸಿದ್ದಾರೆ. ಆರೋಪಿ ಶಿಕ್ಷಕ ಕೂಡ ಗಂಭೀರವಾಗಿ ಗಾಯಗೊಂಡಿರುವುದು ಕಂಡು ಬಂದಿದೆ. ಗುಂಡೇಟಿನ ಶಬ್ದ ಕೇಳಿ ಶಾಲೆಯ ವಿದ್ಯಾರ್ಥಿಗಳು ಮತ್ತು ಶಿಕ್ಷಕರು ಅಲ್ಲಿಗೆ ತಲುಪಿದಾಗ ಕೊಠಡಿ ಒಳಗಿನಿಂದ ಬೀಗ ಹಾಕಿರುವುದು ಕಂಡು ಬಂದಿದೆ ಎಂದು ಪೊಲೀಸ್ ವರಿಷ್ಠಾಧಿಕಾರಿ ತಿಳಿಸಿದ್ದಾರೆ. ಇದಾದ ಬಳಿಕ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.

ಮೇಲ್ನೋಟಕ್ಕೆ ಇದು ಪ್ರೇಮ ಪ್ರಕರಣ ಎಂದು ತೋರುತ್ತದೆ ಎಂದು ಅಧಿಕಾರಿ ಹೇಳಿದರು. ಗ್ರಾಮಸ್ಥರು ಮತ್ತು ವಿದ್ಯಾರ್ಥಿಗಳ ಪ್ರಕಾರ, ಪುರುಷ ಶಿಕ್ಷಕರಿಬ್ಬರೂ ಮಹಿಳಾ ಶಿಕ್ಷಕಿಯೊಂದಿಗೆ ಪ್ರೇಮ ಸಂಬಂಧ ಹೊಂದಿದ್ದರು. ಮೃತರನ್ನು ಪೊರಿಯಾಹತ್ ನಿವಾಸಿ ಸುಜಾತಾ ಮಿಶ್ರಾ (35) ಮತ್ತು ಉತ್ತರ ಪ್ರದೇಶದ ಚಂದೌಲಿ ನಿವಾಸಿ ಆದರ್ಶ್ ಸಿಂಗ್ (40) ಎಂದು ಗುರುತಿಸಲಾಗಿದೆ. ಗಾಯಗೊಂಡ ಶಿಕ್ಷಕನನ್ನು ಪೊರಿಯಾಹತ್ ಮುಖ್ಯ ಬಜಾರ್ ನಿವಾಸಿ ರವಿ ರಂಜನ್ (42) ಎಂದು ಗುರುತಿಸಲಾಗಿದೆ.

ಆರೋಪಿ ಶಿಕ್ಷಕನು ಗುಂಡು ಹಾರಿಸಲು ಕಂಟ್ರಿ ಮೇಡ್‌ ಪಿಸ್ತೂಲ್‌ ಬಳಸಿರುವುದಾಗಿ ತಿಳಿದು ಬಂದಿದ್ದು, ಗಾಯಾಳು ಶಿಕ್ಷಕ ಗಂಭೀರ ಸ್ಥಿತಿಯಲ್ಲಿ ಗೊಡ್ಡಾದ ಸದರ್‌ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾನೆ ಎಂದು ವರದಿಯಾಗಿದೆ.

Leave A Reply

Your email address will not be published.