HD Devegowda: ಕುಮಾರಸ್ವಾಮಿ ಕೇಸರಿ ಶಾಲು ಹಾಕಬಾರದು, ಮುಂದೆ ನಾನು ಹಾಕಲ್ಲ – ದೇವೇಗೌಡರಿಂದ ಶಾಕಿಂಗ್ ಸ್ಟೇಟ್ಮೆಂಟ್!!

HD Devegowda: ಮಂಡ್ಯದ ಕೆರಗೋಡು ಹನುಮ ಧ್ವಜ ವಿವಾದಕ್ಕೆ ಸಂಬಂಧಿಸಿದಂತೆ ಬಿಜೆಪಿ ನೇತೃತ್ವದ ಹೋರಾಟದಲ್ಲಿ ಭಾಗಿಯಾಗಿದ್ದ ಮಾಜಿ ಮುಖ್ಯಮಂತ್ರಿ ಹೆಚ್‌.ಡಿ ಕುಮಾರಸ್ವಾಮಿ ಕೇಸರಿ ಶಾಲು (Saffron Stoles) ಧರಿಸಿ ಎಲ್ಲರಿಗೂ ಅಚ್ಚರಿ ಮೂಡಿಸಿದ್ದರು. ಆದರೀಗ ಈ ನಡೆಯನ್ನು ಮಾಜಿ ಪ್ರಧಾನಿ ಹೆಚ್.ಡಿ ದೇವೇಗೌಡ (HD Devewowda) ಅವರು ಖಂಡಿಸಿದ್ದು ಶಾಕಿಂಗ್ ಸ್ಟೇಟ್ಮೆಂಟ್ ನೀಡಿದ್ದಾರೆ.

ಇದನ್ನೂ ಓದಿ: Soil Fertility: ಮಣ್ಣಿನ ಫಲವತ್ತತೆಯನ್ನು ಹೆಚ್ಚಿಸಲು ಇಲ್ಲಿದೆ ಸುಲಭ ಮಾರ್ಗ; 200 ರೂ. ಖರ್ಚು ಮಾಡಿದರೆ ಸಾಕು!

ಹೌದು, ನವದೆಹಲಿಯಲ್ಲಿ ಮಾತನಾಡಿದ ಅವರು, ಕುಮಾರಸ್ವಾಮಿ (HD Kumaraswamy) ಅವರು ಕೇಸರಿ ಶಾಲು ಧರಿಸಿದ್ದು ಹೆಚ್ಚು ಚರ್ಚೆಯಾಗುತ್ತಿದೆ. ಕುಮಾರಸ್ವಾಮಿ ಅವರು ಆ ಕೇಸರಿ ಶಾಲು ಧರಿಸಬಾರದಿತ್ತು, ಮೋದಿ ಜೊತೆ ಇದ್ದರೂ ನಾನೂ ಕೂಡ ಯಾವುದೇ ಕಾರಣಕ್ಕೂ ಕೇಸರಿ ಶಾಲು ಧರಿಸುವುದಿಲ್ಲ. ಈಗ ಆಖಿರುವುದು ಅಕಸ್ಮಾತ್‌ ಆಗಿ ನಡೆದಿರುವ ಘಟನೆ. ಕಾಂಗ್ರೆಸ್ ವಿರುದ್ಧ ಹೋರಾಟ ಮಾಡಲು ನಾವು ಬಿಜೆಪಿ ಜೊತೆಗೆ ಮೈತ್ರಿ ಮಾಡಿಕೊಂಡಿದ್ದೇವೆ, ಜೊತೆಯಾಗಿ ಹೋರಾಟ ಮಾಡುತ್ತಿದ್ದೇವೆ ಅಷ್ಟೇ ಎಂದರು.

ಅಂದಹಾಗೆ ಬಿಜೆಪಿ ಜೊತೆಗಿನ ಮೈತ್ರಿಯ ಬೆನ್ನಲ್ಲೇ ಮಾಜಿ ಸಿಎಂ ಕುಮಾರಸ್ವಾಮಿ ಅವರು ಕೇಸರಿ ಶಾಲನ್ನು ಹೆಗಲಿಗೆ ಹಾಕಿಕೊಂಡಿರುವುದು ರಾಜಕೀಯ ವಲಯದಲ್ಲಿ ಭಾರೀ ಚರ್ಚೆಗೆ ಗ್ರಾಸವಾಗಿತ್ತು.

Leave A Reply

Your email address will not be published.