Belthangady: ಬಸ್ಸಿನ ಅತಿ ವೇಗದ ಚಾಲನೆ; ಸ್ಕೂಟರ್‌ ಸವಾರ ಯುವಕ ಸಾವು

Belthangady: ಖಾಸಗಿ ಬಸ್ಸಿನ ವೇಗದಿಂದಾಗಿ ದ್ವಿಚಕ್ರ ವಾಹನವೊಂದಕ್ಕೆ ಡಿಕ್ಕಿ ಹೊಡೆದ ಪರಿಣಾಮ ಸವಾರನೋರ್ವರು ಸಾವನ್ನಪ್ಪಿದ ಘಟನೆಯೊಂದು ಬೆಳ್ತಂಗಡಿ ತಾಲೂಕಿ ಮಂಜೊಟ್ಟಿ ಸಮೀಪ ಇಂದು (ಫೆ.4) ರಂದು ಸಂಜೆ ನಡೆದಿರುವ ಕುರಿತು ವರದಿಯಾಗಿದೆ.

 

ಮಂಜೊಟ್ಟಿ ಸಮೀಪದ ಪರಾರಿ ನಿವಾಸಿ ಧರಣೇಂದ್ರ (24) ಮೃತ ವ್ಯಕ್ತಿ. ಬೆಳ್ತಂಗಡಿ ಕಡೆಯಿಂದ ತನ್ನ ಮನೆ ಮಂಜೊಟ್ಟಿ ಕಡೆಗೆ ದ್ವಿಚಕ್ರ ವಾಹನದಲ್ಲಿ ಹೋಗುತ್ತಿದ್ದಾಗ ಬೆಳ್ತಂಗಡಿ ಕಡೆಗೆ ವೇಗವಾಗಿ ಬಂದ ಶ್ರೀ ದುರ್ಗಾ ಬಸ್‌ವೊಂದು ಡಿಕ್ಕಿ ಹೊಡೆದಿದ್ದು, ಸ್ವಲ್ಪ ದೂರದವರೆಗೂ ಸ್ಕೂಟರನ್ನು ಎಳೆದುಕೊಂಡು ಹೋಗಿರುವ ಕುರಿತು ವರದಿಯಾಗಿದೆ.

ಈ ದುರ್ಘಟನೆಯಲ್ಲಿ ಸವಾರನ ತಲೆಗೆ ಗಂಭೀರ ಗಾಯವಾಗಿದ್ದು, ಕೂಡಲೇ ಸ್ಥಳೀಯರು ಉಜಿರೆ ಖಾಸಗಿ ಆಸ್ಪತ್ರೆಗೆ ಚಿಕಿತ್ಸೆಗೆಂದು ದಾಖಲು ಮಾಡಿದ್ದು, ನಂತರ ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರಿನ ಆಸ್ಪತ್ರೆಗೆ ಸಾಗಿಸುವಾಗ ದಾರಿ ಮಧ್ಯೆ ಸಾವಿಗೀಡಾಗಿದ್ದಾರೆ. ಬೆಳ್ತಂಗಡಿ ಸಂಚಾರಿ ಪೊಲೀಸರು ಘಟನಾ ಸ್ಥಳಕ್ಕೆ ಆಗಮನಿಸಿ ತನಿಖೆ ನಡೆಸಿರುವ ಕುರಿತು ವರದಿಯಾಗಿದೆ.

Leave A Reply

Your email address will not be published.