SSLC Exam: ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ನಮಾಜ್‌ಗಾಗಿ ಪರೀಕ್ಷೆ ಸಮಯವನ್ನೇ ಬದಲಾವಣೆ ಮಾಡಿತೇ ಇಲಾಖೇ?
SSLC Preparatory Exam: ಎಸ್‌ಎಸ್‌ಎಲ್‌ಸಿ ಪೂರ್ವ ಸಿದ್ಧತಾ ಪರೀಕ್ಷೆಯ ವೇಳಾಪಟ್ಟಿ ಈಗಾಗಲೇ ಪ್ರಕಟವಾಗಿದ್ದು, ಇದರಲ್ಲಿ ಶುಕ್ರವಾರ ಮಾತ್ರ ಬೆಳಗ್ಗೆ ಬದಲಿಗೆ ಮಧ್ಯಾಹ್ನ ಪರೀಕ್ಷೆ ನಡೆಸಲು ಸಮಯ ನಿಗದಿ ಮಾಡಿರುವುದು ವಿವಾದಕ್ಕೆ ಕಾರಣದ ಅಂಶವಾಗಿದೆ. ಪರೀಕ್ಷೆಯಲ್ಲಿ ಅಲ್ಪಸಂಖ್ಯಾತರ ತುಷ್ಟೀಕರಣ ಮಾಡುವ ಕಾಂಗ್ರೆಸ್ ಸರಕಾರು, ಮುಸ್ಲಿಮರ ಓಲೈಕೆಗೆ ಮುಂದಾಗಿದೆ ಎಂದು ಹಿಂದು ಸಂಘಟನೆಗಳು ಆರೋಪ ಮಾಡಿದೆ.
ಇದನ್ನೂ ಓದಿ: Ration Card: ರೇಷನ್ ಕಾರ್ಡ್ ಹೊಂದಿರುವವರೇ ಎಚ್ಚರ!! ಈ ಕೆಲಸ ಮಾಡದಿದ್ದರೆ ನಿಮ್ಮ ಕಾರ್ಡ್ ಬಂದ್!!
ಶುಕ್ರವಾರ ಹೊರತು ಪಡಿಸಿ ಬೆಳಗ್ಗೆ ಎಲ್ಲಾ ವಿಧದ ಪರೀಕ್ಷೆಗಳ ಸಮಯ ನಿಗದಿಯಾಗಿದೆ. ಶುಕ್ರವಾರ ಮಾತ್ರ ಮಧ್ಯಾಹ್ನ 2 ಗಂಟೆಯಿಂದ 5.15ರವರೆಗೆ ಶಿಕ್ಷಣ ಇಲಾಖೆ ಸಮಯ ನಿಗದಿ ಮಾಡಿದ್ದು, ಇದಕ್ಕೆ ಆಕ್ಷೇಪ ವ್ಯಕ್ತವಾಗಿದೆ.
ಮುಸಲ್ಮಾನರನ್ನು ಓಲೈಸಲು ಕಾಂಗ್ರೆಸ್ ಸರ್ಕಾರ ಈ ರೀತಿಯ ಆದೇಶ ಮಾಡಿದೆ. ಶಿಕ್ಷಣ ಇಲಾಖೆಯ ಮೇಲೆ ಒತ್ತಡ ಹೇರಿ ಈ ನಿರ್ದೇಶನ ಹೊರಡಿಸಲಾಗಿದೆ. ಈ ರೀತಿ ವೇಳಪಟ್ಟಿ ಯಾಕೆ ನಿಗದಿ ಮಾಡಲಾಗಿದೆ ಎಂಬುವುದು ಅರ್ಥವಾಗ್ತಿಲ್ಲ ಎಂದು ಶಿಕ್ಷಣ ತಜ್ಞರು ಅಸಮಾಧಾನ ಹೊರಹಾಕಿದ್ದಾರೆ ಎಂದು ವರದಿಯಾಗಿದೆ.