Home Karnataka State Politics Updates ಮಂಗಳೂರು: ದೈವಗಳ ಹರಕೆ ಕೋಲ ನೆರವೇರಿಸಿದ ಯು ಟಿ ಖಾದರ್‌; ಮುಸ್ಲಿಂ ಧಾರ್ಮಿಕ ಮುಖಂಡನೋರ್ವರ ಆಕ್ರೋಶದ...

ಮಂಗಳೂರು: ದೈವಗಳ ಹರಕೆ ಕೋಲ ನೆರವೇರಿಸಿದ ಯು ಟಿ ಖಾದರ್‌; ಮುಸ್ಲಿಂ ಧಾರ್ಮಿಕ ಮುಖಂಡನೋರ್ವರ ಆಕ್ರೋಶದ ಪೋಸ್ಟ್‌!!!

UT Khader

Hindu neighbor gifts plot of land

Hindu neighbour gifts land to Muslim journalist

UT Khader: ವಿಧಾನ ಸಭಾಧ್ಯಕ್ಷ ಯು ಟಿ ಖಾದರ್‌ ಅವರು ಬಂಟ್ವಾಳ ತಾಲೂಕಿನ ಶ್ರೀ ಕ್ಷೇತ್ರ ಪನೋಲಿ ಬೈಲ್‌ನಲ್ಲಿ ಕಲ್ಕುಡ ದೈವಗಳ ಹರಕೆ ಕೋಲದಲ್ಲಿ ಭಾಗವಹಿಸಿದ್ದು, ಕಲ್ಲುರ್ಟಿ ದೈವಗಳ ಆಶೀರ್ವಾದ ಪಡೆದಿದ್ದಾರೆ. ಇದೀಗ ಈ ದೈವಗಳ ಹರಕೆ ಕೋಲ (Kola) ನೆರವೇರಿಸಿದ ಯು ಟಿ ಖಾದರ್‌ ಅವರಿಗೆ ಮುಸ್ಲಿಂ ಮುಖಂಡನೋರ್ವ ಆಕ್ಷೇಪಿಸಿ, ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್‌ ಮಾಡಿದ್ದಾರೆ.

ಇದನ್ನೂ ಓದಿ: Dakshina Kannada: ಪಣಂಬೂರು ಬೀಚ್‌ನಲ್ಲಿ ನೈತಿಕ ಗೂಂಡಾಗಿರಿ; ಹಲ್ಲೆ ಯತ್ನ, ರಾಮಸೇನೆ ಕಾರ್ಯಕರ್ತರ ಸೆರೆ

‘ಕೊರಗಜ್ಜನ ಭಕ್ತ ಯು.ಟಿ ಖಾದರ್ ನನ್ನು ಮುಸ್ಲಿಮರು ಬರೀ ರಾಜಕಾರಣಿಯಾಗಿ ಕಂಡರೆ ಸಾಕು. ಧಾರ್ಮಿಕ ಮುಖಂಡರಾಗಿ ಕಾಣುವುದು ಬೇಡ. ಉಲೆಮಾ, ಸಾತ್ವಿಕರು ತುಂಬಿದ ಧಾರ್ಮಿಕ ವೇದಿಕೆಗೆ ಮುಸ್ಲಿಂ ನಾಯಕನಾಗಿ ಹತ್ತಿಸುವುದು ತರವಲ್ಲ. ಅದು ಆತನ ಭೂತಾರಾಧನೆಗೆ ನಾವು ಕೊಡುವ ಅಂಗೀಕಾರವಾಗಿತ್ತೆ. ಖಾದರ್ ಕೊರಗಜ್ಜನಿಗೂ ಕಲ್ಲುರ್ಟಿ, ಪಂಜುರ್ಲಿಗೂ ಆರಾಧಿಸಲಿ‌. ಪ್ರಸಾದ ಪಡೆದು ತಲೆಗೆ ಮತ್ತಿಕೊಂಡು ನರಕಕ್ಕೆ ಹೋಗಲಿ‌. ಅದು ಆತನ ವೈಯಕ್ತಿಕ ಸ್ವತಂತ್ರ‌. ಅದು ಭಾರತದಲ್ಲಿ ಎಲ್ಲರಿಗೂ ಇರುವ ಸಂವಿಧಾನಿಕ ಸ್ವಾತಂತ್ರ. ಅದನ್ನು ತಡೆಯುವ ಹಕ್ಕು ನನಗಿಲ್ಲ. ಆದರೆ ಧಾರ್ಮಿಕ ನಾಯಕನಾಗಿ ನಾವು ಅಂಗೀಕರಿಸುವುದು, ಆತನ ಭೂತಾರಾಧನೆಯನ್ನು ನಾವು ಒಪ್ಪಿಕೊಂಡಂತಾಗುತ್ತದೆ. ಉಲಮಾಗಳು ಅವನಿಗೆ ಗೌರವ ಕೊಡುವುದು ಮುಸ್ಲಿಂ ಸಮುದಾಯಕ್ಕೆ ಕೆಟ್ಟ ಸಂದೇಶವಾಗಿ ಪರಿಣಮಿಸುತ್ತದೆ ಎಂದು ಯು.ಟಿ.ಖಾದರ್ ನಡವಳಿಕೆ ಆಕ್ಷೇಪಿಸಿ ಸಾಲೆತ್ತೂರು ಫೈಝಿ ಪೋಸ್ಟ್ ಹಂಚಿಕೊಂಡಿದ್ದಾರೆ.