Karnataka Congress : ರಾಜ್ಯದ 12 ಲೋಕಸಭಾ ಕ್ಷೇತ್ರಗಳಿಗೆ ಒಬ್ಬನೇ ಅಭ್ಯರ್ಥಿಯನ್ನು ಆಯ್ಕೆಮಾಡಿದ ಕಾಂಗ್ರೆಸ್ !!

Karnataka Congress: ಲೋಕಸಭಾ ಚುನಾವಣೆ ಪ್ರಯುಕ್ತ ರಾಜ್ಯದಲ್ಲಿ ಪಕ್ಷಗಳು ಸಾಕಷ್ಟು ತಯಾರಿ ನಡೆಸುತ್ತಿದ್ದು, ಅಭ್ಯರ್ಥಿಗಳ ಆಯ್ಕೆಯಲ್ಲಿ ನಿರತವಾಗಿವೆ. ಈ ನಡುವೆ ಕಾಂಗ್ರೆಸ್(Karnataka Congress)ನಿಂದ ಅಭ್ಯರ್ಥಿಗಳ ಆಯ್ಕೆ ವಿಚಾರವಾಗಿ ಬಿಗ್ ಅಪ್ಡೇಟ್ ಒಂದು ದೊರಕಿದ್ದು ಮುಂದಿನ ಲೋಕಸಭಾ ಚುನಾವಣೆಯಲ್ಲಿ ಕನಿಷ್ಠ ಒಂದು ಡಜನ್‌ ಕ್ಷೇತ್ರಗಳಲ್ಲಿ “ಏಕ ಅಭ್ಯರ್ಥಿ’ಯ ಹೆಸರುಗಳನ್ನು ಹೈಕಮಾಂಡ್‌ಗೆ ಶಿಫಾರಸು ಮಾಡಲು ಚಿಂತನೆ ನಡೆಸಿದೆ. ಕೆಲವೆಡೆ ಹೊಸ ಮುಖಗಳನ್ನು ಕಣಕ್ಕಿಳಿಸಲಿಕ್ಕೂ ಸಿದ್ಧತೆ ನಡೆಸಿದೆ ಎಂಬ ಸುದ್ದಿ ಹೊರಬಿದ್ದಿದೆ.

 

ಇದನ್ನೂ ಓದಿ: SSLC ಪರೀಕ್ಷೆಗೆ ಈ ಬಾರಿ ಕೂಡಾ 50:30:20 ಸೂತ್ರ

ಹೌದು, ಕಳೆದ ಗುರುವಾರ ಮುಖ್ಯಮಂತ್ರಿ ಸಿದ್ದರಾಮಯ್ಯ(CM Siddaramaiah)ಅವರು ಏರ್ಪಡಿಸಿದ್ದ ಔತಣಕೂಟದಲ್ಲ ಉಸ್ತುವಾರಿ ಸಚಿವರು, ಪಕ್ಷದ ಹಿರಿಯ ನಾಯಕರು ಭಾಗವಹಿಸಿದ್ದರು. ಈ ಸಮಯದಲ್ಲಿ ಅಭ್ಯರ್ಥಿಗಳ ಆಯ್ಕೆ ಕುರಿತು ಸುದೀರ್ಘ‌ ಚರ್ಚೆ ನಡೆಯಿತು. ಆಗ 12ರಿಂದ 15 ಲೋಕಸಭಾ ಕ್ಷೇತ್ರಗಳಲ್ಲಿ ತಲಾ ಓರ್ವ ಅಭ್ಯರ್ಥಿಯ ಹೆಸರನ್ನು ಮಾತ್ರ ಶಿಫಾರಸು ಮಾಡುವ ಬಗ್ಗೆ ಪ್ರಸ್ತಾವವಾಗಿದೆ ಎನ್ನಲಾಗಿದೆ.

ಈಗಾಗಲೇ ಹೈಕಮಾಂಡ್‌ ಸೂಚಿಸಿರುವಂತೆ ಆದಷ್ಟು ಬೇಗ ಅಭ್ಯರ್ಥಿಗಳ ಪಟ್ಟಿ ಅಂತಿಮಗೊಳಿಸಬೇಕು. ಎರಡು-ಮೂರು ಹೆಸರುಗಳ ಬದಲಿಗೆ ತಲಾ ಒಂದು ಹೆಸರನ್ನು ಶಿಫಾರಸ್ಸು ಮಾಡಲು ಉದ್ದೇಶಿಸಲಾಗಿ.

ಸಾಧ್ಯವಾದರೆ 2-3 ದಿನಗಳಲ್ಲಿ ಉಸ್ತುವಾರಿ ಸಚಿವರು ಅಭ್ಯರ್ಥಿಗಳ ಪಟ್ಟಿ ಸಿದ್ಧಗೊಳಿಸಿ ತಮಗೆ ನೀಡಬೇಕು ಎಂದು ನಾಯಕರು ಸೂಚಿಸಿದ್ದಾರೆ ಎನ್ನಲಾಗಿದೆ.

1 Comment
  1. child porn says
Leave A Reply

Your email address will not be published.