U.T.Khader: ಶಾಸಕರಿಗೆ ಐಐಎಂನಲ್ಲಿ ತರಬೇತಿ- ಯು.ಟಿ.ಖಾದರ್

U.T.Khader: ಫೆ.9 ರಂದು ಬೆಂಗಳೂರಿನ ಇಂಡಿಯನ್‌ ಇನ್‌ಸ್ಟಿಟ್ಯೂಟ್‌ ಆಫ್‌ ಮ್ಯಾನೇಜ್‌ಮೆಂಟ್‌ (ಐಐಎಂ) ನಲ್ಲಿ ಎಲ್ಲಾ ಶಾಸಕರಿಗೆ ಹಾಗೂ ಪತ್ರಕರ್ತರಿಗೆ ಒಂದು ದಿನದ ವಿಶೇಷ ತರಬೇತಿ ಆಯೋಜಿಸಲಾಗಿದೆ ಎಂದು ವಿಧಾನಸಭೆ ಸ್ಪೀಕರ್‌ ಯು.ಟಿ.ಖಾದರ್‌ ಹೇಳಿದ್ದಾರೆ.

ಇದನ್ನೂ ಓದಿ: Sullia: ಸುಳ್ಯ ಬಿಜೆಪಿ ಕಚೇರಿಗೆ ಕಾರ್ಯಕರ್ತರಿಂದ ಬೀಗ!

ಶಾಸಕರಿಗೆ ಬಜೆಟ್‌ ಅಧಿವೇಶನದ ಸ್ವರೂಪ, ಚರ್ಚೆಗಳ ಬಗ್ಗೆ ಸಂಪನ್ಮೂಲ ವ್ಯಕ್ತಿಗಳಿಂದ ತರಬೇತಿ ನೀಡಲಾಗುವುದು ಎಂದು ಭಾನುವಾರ ಸುದ್ದಿಗಾರರಿಗೆ ಹೇಳಿದ್ದಾರೆ. ಪತ್ರಕರ್ತರಿಗೂ ಕೂಡಾ ಈ ಬಾರಿ ಬಜೆಟ್‌ ಅಧಿವೇಶದನ ವರದಿಗಾರಿಕೆ ಕುರಿತು ವಿಶೇಷ ತರಬೇತಿ ಹಮ್ಮಿಕೊಂಡಿದ್ದಾಗಿಯೂ ಅವರು ಈ ಸಂದರ್ಭದಲ್ಲಿ ಹೇಳಿದರು.

ಈ ತರಬೇತಿಯನ್ನು ಸಭಾಪತಿ ಬಸವರಾಜ ಹೊರಟ್ಟಿ ಉದ್ಘಾಟಿಸಲಿದ್ದು, ಹಿರಿಯ ಸಚಿವರಾದ ಎಚ್‌.ಕೆ.ಪಾಟೀಲ್‌, ಕೃಷ್ಣ ಬೈರೇಗೌಡ, ನಿವೃತ್ತ ಐಎಎಸ್‌ ಅಧಿಕಾರಿ ಎಎಸ್‌ಎ ಪ್ರಸಾದ್‌ ಮತ್ತಿತರರು ಭಾಗವಹಿಸಲಿದ್ದಾರೆ. ಈ ಸಂದರ್ಭ ಶಾಸಕರಿಗೆ ಸಂವಿಧಾನ ಕ್ವಿಜ್‌ ಏರ್ಪಡಿಸಲಾಗಿದ್ದು, ವಿಜೇತರಿಗೆ ಬಹುಮಾನ ನೀಡಲಾಗುವುದು ಎಂಬುವುದಾಗಿ ವರದಿಯಾಗಿದೆ.

ಫೆ.12 ರಂದು ರಾಜ್ಯಪಾಲರು ಜಂಟಿ ಸದನವನ್ನುದ್ದೇಶಿಸಿ ಮಾತನಾಡಲಿದ್ದಾರೆ. ಫೆ.16 ರಂದು ಬಜೆಟ್‌ ಮಂಡನೆಯ ನಿರೀಕ್ಷೆ ಇರುವುದಾಗಿ, ಫೆ.23 ರವರೆಗೆ ವಿಧಾನಮಂಡಲ ಜಂಟಿ ಅಧಿವೇಶನ ನಡೆಯಲಿದೆ ಎಂದು ಅವರು ಹೇಳಿದರು.

ವಿಧಾನ ಮಂಡಲ ಕಲಾಪವನ್ನು ಮುಂದಿನ ದಿನಗಳಲ್ಲಿ ಬೆಳಗ್ಗೆ 9 ರಿಂದಲೇ ಪ್ರಾರಂಭ ಮಾಡುವ ಕುರಿತು ಚಿಂತನೆ ನಡೆಸುತ್ತಿರುವುದಾಗಿ ಖಾದರ್‌ ಹೇಳಿದರು.

Leave A Reply

Your email address will not be published.