JDS: ಲೋಕಸಭಾ ಚುನಾವಣೆ- ಈ ನಾಲ್ಕು ಕ್ಷೇತ್ರಗಳಿಂದ ಜೆಡಿಎಸ್ ಕಣಕ್ಕೆ?

JDS: ಲೋಕಸಭಾ ಚುನಾವಣೆಯಲ್ಲಾದರೂ ತನ್ನ ಅಸ್ತಿತ್ವವನ್ನು ಉಳಿಸಿಕೊಳ್ಳಲು ಜೆಡಿಎಸ್ ಹೆಣಗಾಡುತ್ತಿದ್ದರೆ, ಇತ್ತ ವಿಧಾನಸಭಾ ಚುನಾವಣೆಯಲ್ಲಿ ಹೋದ ಮಾನವನ್ನು ಮರಳಿ ಪಡೆಯಲು, ಕಳೆದ ಲೋಕಸಭಾ ಚುನಾವಣೆಯಲ್ಲಿ ಪಡೆದ ಪ್ರತಿಷ್ಠೆಯನ್ನು ಉಳಿಸಿಕೊಳ್ಳಲು ರಾಜ್ಯ ಬಿಜೆಪಿ ಭಾರೀ ಕಸರತ್ತು ನಡೆಸುತ್ತಿದೆ. ಈ ಹಿನ್ನೆಲೆಯಲ್ಲಿ ಜೆಡಿಎಸ್ ಹಾಗೂ ಬಿಜೆಪಿ ಮೈತ್ರಿ ಮಾಡಿಕೊಂಡು ಲೋಕಸಮರದಲ್ಲಿ ಸೆಣೆಸಲು ರೆಡಿಯಾಗಿವೆ. ಈ ಹಿನ್ನೆಲೆಯಲ್ಲಿ ರಾಜ್ಯ ಮದ ಈ ನಾಲ್ಕು ಕ್ಷೇತ್ರಗಳಿಂದ ಜೆಡಿಎಸ್ ಸ್ಪರ್ಧೆ ಫಿಕ್ಸ್ ಎನ್ನಲಾಗುತ್ತಿದೆ.

ಇದನ್ನೂ ಓದಿ: Rice: ಒಂದು ತಿಂಗಳು ಅನ್ನ ತಿನ್ನದೇ ಇದ್ದರೆ ಏನಾಗುತ್ತೆ? ಇಲ್ಲಿದೆ ನೋಡಿ ಮಾಹಿತಿ

ಹೌದು, ಕಳೆದ ಸೆಪ್ಟೆಂಬರ್‌ನಲ್ಲಿ ಕರ್ನಾಟಕದಲ್ಲಿ ಲೋಕಸಭೆ ಚುನಾವಣೆಗೆ(Parliament election)ಮೈತ್ರಿಯನ್ನು ಘೋಷಿಸಿದ್ದ ಬಿಜೆಪಿ(BJP) ಹಾಗೂ ಜೆಡಿಎಸ್(JDS) ಇದೀಗ ಸೀಟು ಹಂಚಿಕೆಯನ್ನು ಅಂತಿಮಗೊಳಿಸುವ ಹಂತದಲ್ಲಿದೆ ಎಂದು ವರದಿಯಾಗಿದೆ. ಮೂಲಗಳ ಪ್ರಕಾರ ಬಿಜೆಪಿ 28 ಸ್ಥಾನಗಳ ಪೈಕಿ 24ರಲ್ಲಿ ಸ್ಪರ್ಧಿಸಲಿದೆ. ಜೆಡಿಎಸ್ 4 ಕ್ಷೇತ್ರಗಳಲ್ಲಿ ಅಭ್ಯರ್ಥಿಗಳನ್ನು ಕಣಕ್ಕಿಳಿಸುವ ಸಾಧ್ಯತೆ ಇದೆ ಎಂದು ಮೂಲಗಳು ತಿಳಿಸಿವೆ.

ಜೆಡಿಎಸ್ ಸ್ಪರ್ಧಿಸುವ 4 ಕ್ಷೇತ್ರಗಳು ಯಾವುವು?

ಆರಂಭದಲ್ಲಿ ಬಿಜೆಪಿ ಹೈಕಮಾಂಡ್‌ ಜೊತೆಗೆ ಮಾತುಕತೆ ನಡೆಸಿದ್ದ ಜೆಡಿಎಸ್‌ ನಾಯಕರು ಮಂಡ್ಯ, ಹಾಸನ ಮತ್ತು ಚಿಕ್ಕಬಳ್ಳಾಪುರ ಹೊರತುಪಡಿಸಿ ತುಮಕೂರು ಮತ್ತು ಬೆಂಗಳೂರು ಗ್ರಾಮಾಂತರದಿಂದ ಸ್ಪರ್ಧಿಸಲು ಅವಕಾಶ ಕೋರಿದ್ದರು. ಆದರೆ, ಕೆಲವು ಸರ್ವೆಗಳ ಪ್ರಕಾರ ಜೆಡಿಎಸ್‌ ಗೆ ಒಕ್ಕಲಿಗರ ಕೋಟೆಯಲ್ಲಿ ಹೆಚ್ಚು ಪ್ರಾಬಲ್ಯವಿದೆ ಎಂಬುದು ತಿಳಿದು ಬಂದಿದೆ. ಈ ಹಿನ್ನೆಲೆಯಲ್ಲಿ ಮಂಡ್ಯ, ಹಾಸನ, ಕೋಲಾರ ಮತ್ತು ಚಿಕ್ಕಬಳ್ಳಾಪುರ ಕ್ಷೇತ್ರವನ್ನ ಬಿಟ್ಟುಕೊಡಲು ನಿರ್ಧರಿಸಿದೆ ಎನ್ನಲಾಗಿದೆ.

1 Comment
Leave A Reply

Your email address will not be published.