CM Siddaramaiah: ಸಿಎಂ ಸಿದ್ದರಾಮಯ್ಯರಿಗೆ 10ಸಾವಿರ ದಂಡ ವಿಧಿಸಿದ ಕೋರ್ಟ್‌

CM Siddaramaiah: ಸಾರ್ವಜನಿಕ ಆಸ್ತಿಪಾಸ್ತಿ ನಷ್ಟ (Loss of public property) ಪ್ರಕರಣ ಸಂಬಂಧ ಸಿಎಂ ಸಿದ್ದರಾಮಯ್ಯ ಅವರಿಗೆ ಜನಪ್ರತಿನಿಧಿಗಳ ವಿಶೇಷ ಕೋರ್ಟ್‌ ಹತ್ತು ಸಾವಿರ ರೂಪಾಯಿ ದಂಡವನ್ನು ನೀಡಿ ಆದೇಶ ಹೊರಡಿಸಿದೆ.

ಇದನ್ನು ಓದಿ: Congress : ಲೋಕಸಭಾ ಚುನಾವಣೆ- ಕಾಂಗ್ರೆಸ್’ನಿಂದ 15 ಕ್ಷೇತ್ರಗಳ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ !!

ಬಿಜೆಪಿ ಸರಕಾರದ ಅವಧಿಯಲ್ಲಿ ಗುತ್ತಿಗೆದಾರ ಸಂತೋಷ್‌ ಆತ್ಮಹತ್ಯೆ ಪ್ರಕರಣ ನಡೆದದ ಸಂದಭ ಆಗ ಸಚಿವ ಸ್ಥಾನದಲ್ಲಿದ್ದ ಕೆ.ಎಸ್‌.ಈಶ್ವರಪ್ಪ ಅವರ ವಿರುದ್ಧ ಕಾಂಗ್ರೆಸ್‌ ಬೃಹತ್‌ ಪ್ರತಿಭಟನೆಯನ್ನು ನಡೆಸಿತ್ತು. ಸಿದ್ದರಾಮಯ್ಯ ಅವರು ಪ್ರತಿಭಟನೆಯ ನೇತೃತ್ವ ವಹಿಸಿದ್ದು, ಈ ವೇಳ ಸಾರ್ವಜನಿಕ ಮುಕ್ತ ಸಂಚಾರಕ್ಕೆ ಅಡ್ಡಿ ಪಡಿಸಿದ, ಕಾನೂನು ಸುವ್ಯವಸ್ಥೆಗೆ ಧಕ್ಕ ಉಂಟು ಮಾಡಿದ ಆರೋಪದಲ್ಲಿ ಹೈಗ್ರೌಂಡ್ಸ್‌ ಠಾಣಾ ಪೊಲೀಸರು ದೂರು ದಾಖಲು ಮಾಡಿಕೊಂಡಿದ್ದರು.

42ನೆ ಎಸಿಎಂಎಂ ನ್ಯಾಯಾಲಯ ಜಾರಿ ಮಾಡಿದ್ದ ಎನ್‌ಬಿಡಬ್ಲ್ಯೂ ಹಾಗೂ ವಿಶೇಷ ನ್ಯಾಯಾಲಯದಲ್ಲಿ ವಿಚಾರಣಾ ಪ್ರಕ್ರಿಯೆಯನ್ನು ರದ್ದುಪಡಿಸಲು ಕೋರಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಜೊತೆ ಕೆಲವು ಸೇರಿ ಅರ್ಜಿ ಸಲ್ಲಿಸಿದ್ದರು. ಆದರೆ ಕೋರ್ಟ್‌ ಈ ಅರ್ಜಿಯನ್ನು ವಜಾಗೊಳಿಸಿ, ಮಾರ್ಚ್‌ 6 ರಂದು ಸಿದ್ದರಾಮಯ್ಯ ಅವರ ವಿಶೇಷ ಕೋರ್ಟ್‌ ಮುಂದೆ ಹಾಜರಾಗಬೇಕು ಎಂದು ಆದೇಶ ನೀಡಿದೆ.

ಮಾರ್ಚ್ 7 ರಂದು ರಾಮಲಿಂಗಾರೆಡ್ಡಿ, ಮಾರ್ಚ್ 11 ರಂದು ರಣದೀಪ್ ಸುರ್ಜೇವಾಲಾ, ಮಾರ್ಚ್ 15ರಂದು ಎಂ.ಬಿ.ಪಾಟೀಲ್ ಅವರಿಗೆ ಹಾಜರಾಗಲು ಕೋರ್ಟ್‌ ಸೂಚನೆ ನೀಡಿದೆ. ಸಿಎಂ ಸಿದ್ದರಾಮಯ್ಯ ಮತ್ತಿತರರಿಗೆ 10 ಸಾವಿರ ರೂಪಾಯಿ ದಂಡ ವಿಧಿಸಿದ ಹೈಕೋರ್ಟ್, ಅನಗತ್ಯವಾಗಿ ಪಿಎಸ್‌ಐ ಕು. ಜಹಿದಾ ಪ್ರತಿವಾದಿಯಾಗಿಸಿದ ಕಾರಣಕ್ಕೆ ದಂಡವನ್ನು ವಿಧಿಸಲಾಗಿದೆ ಎಂದು ಮಾಧ್ಯಮವೊಂದು ವರದಿ ಮಾಡಿದೆ.

1 Comment
  1. […] ಇದನ್ನೂ ಓದಿ: CM Siddaramaiah: ಸಿಎಂ ಸಿದ್ದರಾಮಯ್ಯರಿಗೆ 10ಸಾವಿರ ದಂ… […]

Leave A Reply

Your email address will not be published.