Karnataka Politics: ಕಾಂಗ್ರೆಸ್ ತೊರೆದು ಬಿಜೆಪಿಯತ್ತ ಮುಖ ಮಾಡಿ ಮಾಜಿ ಶಾಸಕ!
ಲೋಕಾಯುಕ್ತರ ಬಲೆಗೆ ಬಿದ್ದಿದ್ದ ಮಾಡಾಳ್ ವಿರೂಪಾಕ್ಷಪ್ಪ ಪುತ್ರ ಮಲ್ಲಿಕಾರ್ಜುನ ಇಂದು ಬಿಜೆಪಿ ಪಕ್ಷವನ್ನು ಸೇರಲಿದ್ದಾರೆ. ಮತ್ತೋರ್ವ ಕಾಂಗ್ರೆಸ್ ಮಾಜಿ ಶಾಸಕರೊಬ್ಬರು ಬಿಜೆಪಿಗೆ ಸೇರ್ಪಡೆಗೊಳ್ಳಲು ರೆಡಿಯಾಗಿದ್ದಾರೆ.
ಲೋಕಾಯುಕ್ತರ ಬಲೆಗೆ ಬಿದ್ದಿದ್ದ ಮಾಡಾಳ್ ವಿರೂಪಾಕ್ಷಪ್ಪ ಪುತ್ರ ಮಲ್ಲಿಕಾರ್ಜುನ ಇಂದು ಬಿಜೆಪಿ ಪಕ್ಷವನ್ನು ಸೇರಲಿದ್ದಾರೆ. ಮತ್ತೋರ್ವ ಕಾಂಗ್ರೆಸ್ ಮಾಜಿ ಶಾಸಕರೊಬ್ಬರು ಬಿಜೆಪಿಗೆ ಸೇರ್ಪಡೆಗೊಳ್ಳಲು ರೆಡಿಯಾಗಿದ್ದಾರೆ. ಈ ಮಧ್ಯೆ ಕಾಂಗ್ರೆಸ್ ಮಾಜಿ ಶಾಸಕ ಎಚ್. ಪಿ. ರಾಜೇಶ್ ಬಿಜೆಪಿಯ ಕಡೆಗೆ ಮುಖ ಮಾಡಿದ್ದಾರೆ.
ಇದನ್ನೂ ಓದಿ: Prakash Raj: ಬಹುಭಾಷಾ ನಟ ಪ್ರಕಾಶ್ ರಾಜ್ ಕಾಪು ಮಾರಿಯಮ್ಮ ದೇವಸ್ಥಾನಕ್ಕೆ ಭೇಟಿ; ʼಗೋ ಮೂತ್ರ ಸಿಂಪಡಿಸಿʼ ಅಂದ ನೆಟ್ಟಿಗರು
ದಾವಣಗೆರೆಯ ಜಗಳೂರು ಪರಿಶಿಷ್ಟ ಪಂಗಡಕ್ಕೆ ಮೀಸಲಿರುವ ಕ್ಷೇತ್ರವಾಗಿದೆ. ಈಗ ರಾಜೇಶ್ ಬಿಜೆಪಿ ಸೇರಲು ನಿರ್ಧರಿಸಿದ್ದಾರೆ. ಆದರೆ ಇವರು ಸೇರುವ ದಿನ ನಿಗದಿಯಾಗಿಲ್ಲ. ಕಳೆದ ಚುನಾವಣೆಯಲ್ಲಿ ಕಾಂಗ್ರೆಸ್ ನಿಂದ ಟಿಕೇಟ್ ಸಿಗದೆ ಸ್ವತಂತ್ರ ಅಭ್ಯರ್ಥಿಯಾಗಿ ಸೋತಿದ್ದರು. ಈ ಹಿಂದೆ 2008 ರಲ್ಲಿ ಬಿಜೆಪಿ ಇಂದ ಸ್ಪರ್ದೆ ಮಾಡಿ ಸೋತಿದ್ದರು. ಬಳಿಕ 2013ರ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ನಿಂದ ಸ್ಪರ್ಧಿಸಿ ಗೆಲುವು ಸಾಧಿಸಿದ್ದರು. 2018ರಲ್ಲಿ ಕಾಂಗ್ರೆಸ್ ನಿಂಡ ಸ್ಪರ್ಧಿಸಿ ಸೋಲು ಕಂಡರೂ, 2023ರಲ್ಲಿ ನಡೆದ ವಿಧಾನಸಭಾ ಚುನಾವಣೆಯಲ್ಲಿ ಟಿಕೆಟ್ ಸಿಗದ ಕಾರಣ ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸಿ ಸೋಲನ್ನು ಅನುಭವಿಸಿದ್ದರು.
ಇಂದು ಮಾಡಲ್ ಪುತ್ರ ಬಿಜೆಪಿ ಗೆ ಸೇರ್ಪಡೆ
ಇಂದು ಬೆಂಗಳೂರಿನಲ್ಲಿ ಬಿಜೆಪಿ ಯನ್ನು ಮಲ್ಲಿಕಾರ್ಜುನ ಸೇರಲಿದ್ದಾರೆ. ಯಡಿಯೂರಪ್ಪ ಸಮ್ಮಖದಲ್ಲಿ ಪದಗ್ರಹಣ ನಡೆಯಲಿದೆ. ಕಳೆದ ವರ್ಷ ನಾನಾ ಕಾರಣಗಳಿಂದ ಸ್ಪರ್ಧಿಸಲು ಆಗಿಲ್ಲ. ಬಳಿಕ ಅವರ ಪುತ್ರ ಮಲ್ಲಿಕಾರ್ಜುನ್ ವಿಧಾನಸಭೆ ಟಿಕೆಟ್ ಆಕಾಂಕ್ಷಿಯಾಗಿದ್ದರು. ಆದರೆ ಬಿಜೆಪಿ ಯಿಂದ ಟಿಕೇಟ್ ಸಿಗಲಿಲ್ಲ. ನಂತರ ಇವರು ಬಂಡಾಯ ಅಭ್ಯರ್ಥಿಯಾಗಿ ಕಣಕ್ಕಿಳಿದರು. ನಂತರ ಬಿಜೆಪಿ ಅವರನ್ನು ಪಕ್ಷದಿಂದ ಹೊರ ಹಾಕಿತು. ನಂತರ ಬಸವರಾಜ್ ವಿರುದ್ದ ಸೋಲು ಕಂಡರು..