CM Siddaramaiah: ಮಾಂಸ ತಿಂದು ಸುತ್ತೂರು ಗದ್ದುಗೆ ಒಳಗೆ ಹೋದ ಸಿಎಂ ಸಿದ್ದರಾಮಯ್ಯ !!

Share the Article

 

CM Siddaramaiah: ಸಿಎಂ ಸಿದ್ದರಾಮಯ್ಯನವರು ಮಾಂಸಾಹಾರ ಸೇವನೆ ಮಾಡಿ ಸುತ್ತೂರು ಜಾತ್ರೆಯಲ್ಲಿ ಪಾಲ್ಗೊಂಡಿದ್ದಲ್ಲದೆ, ಸುತ್ತೂರು ಜಗದ್ಗುರುಗಳ ಗದ್ದುಗೆಗೂ ಭೇಟಿ ಮಾಡಿ ಮತ್ತೆ ವಿವಾದದ ಸುಳಿಯಲ್ಲಿ ಸಿಲುಕಿದ್ದಾರೆ.

ಹೌದು, ಕಳೆದ ಬಾರಿ ಮುಖ್ಯಮಂತ್ರಿ ಆದಾಗ ಸಿದ್ದರಾಮಯ್ಯ(CM Siddaramaiah)ಅವರು ಮಾಂಸದ ಊಟ ಮಾಡಿ ಧರ್ಮಸ್ಥಳಕ್ಕೆ ತೆರಳಿ ಮಂಜುನಾಥನ ಧರ್ಶನ ಮಾಡಿದ ಆಪಾದನೆಯಿಂದ ವಿವಾದಕ್ಕೆ (Non veg Food Row) ಒಳಖಾಗಿದ್ದರು. ಇದೀಗ ಅಂಥಹುದೇ ಒಂದು ವಿವಾದ ಸಿದ್ದರಾಮಯ್ಯ ಅವರನ್ನು ಸುತ್ತಿಕೊಂಡಿದೆ. ಅವರು ಮತ್ತು ಇತರ ಕಾಂಗ್ರೆಸ್‌ ನಾಯಕರು ಮಾಂಸಾಹಾರ ಸೇವನೆ ಮಾಡಿ ಮೈಸೂರು ಜಿಲ್ಲೆ ನಂಜನಗೂಡು ತಾಲೂಕಿನಲ್ಲಿ ನಡೆದ ಸುತ್ತೂರು ಜಾತ್ರೆಯಲ್ಲಿ ಪಾಲ್ಗೊಂಡಿದ್ದಾರೆ, ಸುತ್ತೂರು ಜಗದ್ಗುರುಗಳ ಗದ್ದುಗೆ ಭೇಟಿ ಮಾಡಿದ್ದಾರೆ.

ಅಂದಹಾಗೆ ಸಿದ್ದರಾಮಯ್ಯ ಅವರು ಬುಧವಾರ ದಿಲ್ಲಿಯಲ್ಲಿ ಕೇಂದ್ರದ ವಿರುದ್ಧ ರಾಜ್ಯ ಸರ್ಕಾರದ ಹಮ್ಮಿಕೊಂಡಿದ್ದ ಪ್ರತಿಭಟನೆಯಲ್ಲಿ ಭಾಗಿಯಾಗಿದ್ದರು. ಅಲ್ಲಿ ಮಧ್ಯಾಹ್ನ ಮಾಂಸದ ಊಟ ಮಾಡಿ ವಿಮಾನದಲ್ಲಿ ಬಂದು ನೇರವಾಗಿ ಸುತ್ತೂರು ಜಾತ್ರೆಯಲ್ಲಿ ಭಾಗವಹಿಸಿದ್ದರು. ಹೀಗೆ ಮಾಂಸದೂಟ ಮಾಡಿದ ಬೆನ್ನಿಗೇ ಸುತ್ತೂರು ಜಾತ್ರೆಯಲ್ಲಿ ಭಾಗಿಯಾಗಿದ್ದು, ಗದ್ದುಗೆ ಭೇಟಿ ಮಾಡಿದ ವಿಚಾರ ಮತ್ತೆ ಸಿದ್ದರಾಮಯ್ಯ ಅವರ ಕೊರಳಿಗೆ ಸುತ್ತಿಕೊಂಡಿದೆ. ಈ ವಿಚಾರ ತಿಳಿಯುತ್ತಿದ್ದಂತೆ ಬಿಜೆಪಿ ನಾಯಕರು ಭಾರೀ ಆಕ್ರೋಶ ವ್ಯಕ್ತಪಡಿಸಿದ್ದಾರೆ.

Leave A Reply