Mangaluru: ಮಂಗಳೂರಿನ ಖಾಸಗಿ ಕಾಲೇಜಿನ ಹಾಸ್ಟೆಲ್‌ನಲ್ಲಿ ಫುಡ್‌ಪಾಯಿಸನ್‌; 30ಕ್ಕೂ ಅಧಿಕ ವಿದ್ಯಾರ್ಥಿಗಳು ಅಸ್ವಸ್ಥ

Share the Article

Mangaluru: ಖಾಸಗಿ ಕಾಲೇಜಿನ ಹಾಸ್ಟೆಲ್‌ ನ ಸುಮಾರು 30 ಕ್ಕೂ ಹೆಚ್ಚು ವಿದ್ಯಾರ್ಥಿಗಳಿಗೆ ಫುಡ್‌ ಪಾಯಿಸನ್ ಉಂಟಾಗಿದ್ದು, ಕೆಲ ವಿದ್ಯಾರ್ಥಿಗಳನ್ನು ಹೆಚ್ಚಿನ ಚಿಕಿತ್ಸೆಗಾಗಿ ತುಂಬೆ ಬಳಿಯ ಖಾಸಗಿ ಆಸ್ಪತ್ರೆಗೆ ದಾಖಲು ಮಾಡಲಾಗಿದೆ.

ಇದನ್ನೂ ಓದಿ: Vitla: ಅಡ್ಯನಡ್ಕ ಕರ್ನಾಟಕ ಬ್ಯಾಂಕ್‌ಗೆ ನುಗ್ಗಿದ ಕಳ್ಳರು; ನಗ-ನಗದು ಕಳವು

ಈ ಘಟನೆ ವಳಚ್ಚಿಲ್‌ ಬಳಿಯ ಖಾಸಗಿ ಕಾಲೇಜಿನ ಹಾಸ್ಟೆಲ್‌ನಲ್ಲಿ ನಡೆದಿದೆ. ಫೆ.7 ರಂದು (ಬುಧವಾರ) ರಾತ್ರಿ ವೇಳೆ ವಿದ್ಯಾರ್ಥಿಗಳಿಗೆ ವಾಂತಿ ಭೇದಿ ಉಂಟಾದ ಕಾರಣ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಆರೋಗ್ಯ ಇಲಾಖೆ ಅಧಿಕಾರಿಗಳು ಹಾಸ್ಟೆಲ್‌ಗೆ ತೆರಳಿ ಪರಿಶೀಲನೆ ನಡೆಸಿದ್ದೇವೆ ಎಂದು ತಿಳಿಸಿರುವುದಾಗಿ ವರದಿಯಾಗಿದೆ.

Leave A Reply