Bantwala: ಬಸ್‌ನಿಂದ ಆಯತಪ್ಪಿ ಬಿದ್ದ ಮಹಿಳೆ ಸಾವು

Share the Article

Bantwala: ಮಹಿಳೆಯೋರ್ವರು ಬಸ್ಸಿನಿಂದ ಹೊರಗೆಸೆಯಲ್ಪಟ್ಟು, ಗಂಭೀರವಾಗಿ ಗಾಯಗೊಂಡು, ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿರುವ ಘಟನೆಯೊಂದು  ಬಂಟ್ವಾಳ ತಾಲೂಕಿನ ಮಾಣಿ ಬಳಿ ಈ ದುರ್ಘಟನೆ ಸಂಭವಿಸಿತ್ತು. ಮೃತ ಮಹಿಳೆ ರಾಧಾ ಅವರು ಮೃತ ಹೊಂದಿದ್ದಾರೆ.

ಜ.31 ರಂದು ಈ ಘಟನೆ ನಡೆದಿದ್ದು, ಇದೀಗ ಬೆಳಕಿಗೆ ಬಂದಿದೆ. ಈ ಘಟನೆ ಕುರಿತ ಸಿಸಿಟಿವಿ ದೃಶ್ಯ ಇದೀಗ ವೈರಲ್‌ ಆಗಿದೆ.

ಬಸ್‌ನಲ್ಲಿ ಪ್ರಯಾಣ ಮಾಡುತ್ತಿದ್ದ ಸಂದರ್ಭ ಬಸ್‌ನಲ್ಲಿ ಮಗು ಎತ್ತಿಕೊಂಡಿದ್ದ ಮಹಿಳೆಯೊಬ್ಬರಿಗೆ ರಾಧ ಅವರು ತಮ್ಮ ಸೀಟು ಬಿಟ್ಟುಕೊಟ್ಟು ಎದ್ದು ನಿಂತಿದ್ದರು. ಈ ವೇಳೆ ಸರಳು ಹಿಡಿಯುವ ವೇಳೆ ಕೈ ಜಾರಿದ್ದು, ಬಾಗಿಲ ಬಳಿಯಲ್ಲಿ ಇದ್ದ ಅವರು ಬಸ್‌ನಿಂದ ಹೊರಗೆ ಬಿದ್ದಿದ್ದಾರೆ. ಕೂಡಲೇ ರಾಧ ಅವರನ್ನು ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತಾದರೂ ನಿನ್ನೆ ಚಿಕಿತ್ಸೆ ಫಲಕಾರಿಯಾಗದೆ ಮೃತ ಹೊಂದಿದ್ದಾರೆ.

ರಾಧ ಅವರ ಪುತ್ರಿ ಸುನಿತಾ ಎಂಬುವವರು ವಿಟ್ಲ ಪೊಲೀಸ್‌ ಠಾಣೆಯಲ್ಲಿ ಬಸ್‌ನ ಚಾಲಕ, ನಿರ್ವಾಹಕರ ವಿರುದ್ಧ ದೂರು ದಾಖಲು ಮಾಡಿದ್ದರು.

ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ರಾಧಾ (66) ಅವರಿಗೆ ಚಿಕಿತ್ಸೆ ನೀಡಲಾಗುತ್ತಿದ್ದರೂ ದೇಹಾರೋಗ್ಯದಲ್ಲಿ ಯಾವುದೇ ಬದಲಾವಣೆ ಕಾಣಿಸದ ಕಾರಣ ಬುಧವಾರ ಮನೆಗೆ ಕರೆತರಲಾಗಿತ್ತು. ಮನೆ ತಲುಪುತ್ತಿದ್ದಂತೆಯೇ ರಾಧಾ ಅವರು ಸಾವನ್ನಪ್ಪಿದ್ದಾರೆ ಎಂದು ತಿಳಿದು ಬಂದಿದೆ.

Leave A Reply