Mangaluru Congress Convention: ಮಂಗಳೂರಿನಲ್ಲಿ ಫೆ.17 ರಂದು ಲೋಕಸಭಾ ಚುನಾವಣೆ ಸಿದ್ಧತೆಯಾಗಿ ಕಾಂಗ್ರೆಸ್‌ ಸಮಾವೇಶ

Share the Article

Mangaluru: ಲೋಕಸಭಾ ಚುನಾವಣೆಗೆ ಸಿದ್ಧತೆಗಾಗಿ ಫೆ.17 ರಂದು ಅಡ್ಯಾರ್‌ನಲ್ಲಿ ಸಹ್ಯಾದ್ರಿ ಕಾಲೇಜು ಮೈದಾನದಲ್ಲಿ ರಾಜ್ಯ ಮಟ್ಟದ ಕಾಂಗ್ರೆಸ್‌ ಸಮಾವೇಶ ಆಯೋಜಿಸಲಾಗಿದೆ ಎಂದು ಜಿಲ್ಲಾ ಕಾಂಗ್ರೆಸ್‌ ಅಧ್ಯಕ್ಷ ಹರೀಶ್‌ ಕುಮಾರ್‌ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದ್ದಾರೆ.

ಇದನ್ನೂ ಓದಿ: Pre Wedding Shoot: ಪ್ರಿವೆಡ್ಡಿಂಗ್‌ ಶೂಟ್‌ ಎಡವಟ್ಟು; ಸರಕಾರಿ ಆಸ್ಪತ್ರೆಯ ಆಪರೇಷನ್‌ ಥಿಯೇಟರ್‌ನಲ್ಲಿ ನಡೆಯಿತು ವೀಡಿಯೋ ಶೂಟ್‌

ಮಧ್ಯಾಹ್ನ ಎರಡು ಗಂಟೆಗೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅಧ್ಯಕ್ಷತೆಯಲ್ಲಿ ಸಮಾವೇಶ ಆರಂಭಗೊಳ್ಳುವುದಾಗಿಯೂ, ಒಟ್ಟು ಹಲವು ಮುಖಂಡರು ಸೇರಿ 25 ಸಾವಿರ ಮಂದಿ ಈ ಸಮಾವೇಶದಲ್ಲಿ ಭಾಗವಹಿಸುವ ನಿರೀಕ್ಷೆ ಇದೆ ಎಂದು ಅವರು ಹೇಳಿದರು.

ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಗಳ ಕಾರ್ಯಕರ್ತರ ಭಾಗವಹಿಸುವಿಕೆಯೊಂದಿಗೆ ಈ ಕಾರ್ಯಕ್ರಮದ ಯಶಸ್ವಿಗಾಗಿ ಏಳು ಸಮಿತಿಗಳನ್ನು ರಚಿಸಲಾಗಿದ್ದು, ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್‌ ಗುಂಡೂರಾವ್‌ ಜಿಲ್ಲೆಯ ಘಟಕಗಳ ಮುಖ್ಯಸ್ಥ ಜೊತೆ ಸರಣೆ ಸಭೆ ನಡೆಸಲಿದ್ದಾರೆ.

ಫೆ. 11 ರಂದು ಸಲೀಂ ಅಹ್ಮದ್‌, ಮಾಜಿ ಸಚಿವ ಬಿ ರಮಾನಾಥ ರೈ ನೇತೃತ್ವದಲ್ಲಿ ಪಕ್ಷದ ಕಾರ್ಯಕರ್ತರನ್ನು ಒಗ್ಗೂಡಿಸುವ ಕೆಲಸ ನಡೆಯಲಿದೆ ಎಂದು ಅವರು ಈ ಸಂದರ್ಭದಲ್ಲಿ ಹೇಳಿದರು.

Leave A Reply