Mumbai: ಲೈವ್ ಮಾಡುವಾಗಲೇ ಶಿವಸೇನಾ ಮುಖಂಡನಿಗೆ ಗುಂಡು ಹಾರಿಸಿ ಹತ್ಯೆ!! ಭಯಾನಕ ವಿಡಿಯೋ ವೈರಲ್

Share the Article

Mumbai: ಮುಂಬೈನ ದಹಿಸರ್ ಪ್ರದೇಶದಲ್ಲಿ ಶಿವಸೇನೆ (ಯುಬಿಟಿ) ಮುಖಂಡನೊಬ್ಬನ ಫೇಸ್‌ಬುಕ್ ಲೈವ್‌ ಮಾಡುತ್ತಿದ್ದಾಗ ಗುಂಡು ಹಾರಿಸಿ ಹತ್ಯೆ ಮಾಡಲಾಗಿದೆ. ಅಲ್ಲದೆ ಶೂಟ್ ಮಾಡಿದವ ತಾನೂ ಗುಂಡುಹಾರಿಸಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ.

https://x.com/ss_suryawanshi/status/1755638901480583349?t=PuuPsqBFySwYEhHTYjnDBw&s=08

ಹೌದು, ಉದ್ದವ್ ಠಾಕ್ರೆ ಬಣದ ಶಿವಸೇನೆಯ ಯುಬಿಟಿ ನಾಯಕನ ಮಗ ಅಭಿಷೇಕ್ ಘೋಸಲ್ಕರ್ ಫೇಸ್‌ಬುಕ್ ಲೈವ್‌ನಲ್ಲಿದ್ದಾಗಲೇ (Facebook Live) ಗುಂಡು ಹೊಡೆದು ಹತ್ಯೆ ಮಾಡಿದ ಘಟನೆ ಗುರುವಾರ ಮುಂಬೈನಲ್ಲಿ (Mumbai) ನಡೆದಿದೆ. ವಿಚಿತ್ರ ಎಂದರೆ ಅವರೊಂದಿಗೆ ಫೇಸ್‌ಬುಕ್ ಲೈವ್ ಮಾಡುತ್ತಿದ್ದ ವ್ಯಕ್ತಿಯೇ ಅವರಿಗೆ ಶೂಟ್ ಮಾಡಿದ್ದಾನೆ. ಬಳಿಕ ತಾನು ಶೂಟ್ ಮಾಡಿಕೊಂಡು ಸಾವಿಗೀಡಾಗಿದ್ದಾನೆ.

ಅಂದಹಾಗೆ ಮೃತ ಅಭಿಷೇಕ್ ಅವರು ಶಿವಸೇನೆಯ ಉದ್ಧವ್ ಠಾಕ್ರೆ ಬಣದ ಮಾಜಿ ಕೌನ್ಸಿಲರ್ ವಿನೋದ್ ಘೋಸಲ್ಕರ್ ಅವರ ಪುತ್ರರಾಗಿದ್ದಾರೆ. ಮುಂಬೈನ ದಹಿಸರ್ ಪ್ರದೇಶದ ಎಂಎಚ್‌ಬಿ ಕಾಲೋನಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ದೊರೆತ ಮಾಹಿತಿ ಪ್ರಕಾರ ಘೋಸಲ್ಕರ್ ಅವರು ಮಾರಿಸ್ ಭಾಯ್ ಅವರೊಂದಿಗೆ ಫೇಸ್‌ಬುಕ್ ಲೈವ್‌ಸ್ಟ್ರೀಮ್ ಮಾಡುತ್ತಿದ್ದರು. ಮಾರಿಸ್ ಭಾಯ್ ನಂತರ ಲೈವ್‌ಸ್ಟ್ರೀಮ್ ಅನ್ನು ತೊರೆದರು ಮತ್ತು ನಂತರ ಘೋಸಲ್ಕರ್ ಮೇಲೆ ಮೂರು ಬಾರಿ ಗುಂಡು ಹಾರಿಸಿದರು. ಇದಾದ ನಂತರ ಮಾರಿಸ್ ಭಾಯ್ ಗುಂಡು ಹಾರಿಸಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ. ಸದ್ಯ ಈ ಕುರಿತ ಭಯಾನಕ ವಿಡಿಯೋ ವೈರಲ್ ಆಗಿದೆ.

ಅಭಿಷೇಕ್ ಘೋಸಲ್ಕರ್ ಮತ್ತು ಮೋರಿಸ್ ಒಬ್ಬರಿಗೊಬ್ಬರು ಪರಿಚಯಸ್ಥರು ಎಂದು ತಿಳಿದುಬಂದಿದೆ. ಇಬ್ಬರು ಕೆಲವು ವೈಯಕ್ತಿಕ ವಿವಾದಗಳನ್ನು ಹೊಂದಿದ್ದರು. ವಿವಾದಗಳನ್ನು ಪರಿಹರಿಸಿದ ನಂತರ ಅವರು ಒಟ್ಟಿಗೆ ಸೇರಿದರು. ಮೋರಿಸ್ ಅಭಿಷೇಕ್ ಅವರನ್ನು ತಮ್ಮ ಕಚೇರಿಗೆ ಕರೆಸಿ ಫೇಸ್ ಬುಕ್ ಲೈವ್ ಮಾಡಿದ್ದಾರೆ. ಆಗ ಇಬ್ಬರೂ ಒಬ್ಬರಿಗೊಬ್ಬರು ಹೊಗಳಿಕೆಯ ಮಾತುಗಳನ್ನಾಡಿದ್ದು ಕಂಡುಬಂದಿತ್ತು. ಮೋರಿಸ್ ತನ್ನ ಫೇಸ್‌ಬುಕ್ ಖಾತೆಯಿಂದ ಶೂಟಿಂಗ್ ಅನ್ನು ಲೈವ್ ಸ್ಟ್ರೀಮ್ ಮಾಡಿದ್ದಾರೆ ಎಂದು ತಿಳಿದುಬಂದಿದೆ.

Leave A Reply

Your email address will not be published.