Mithun Chakraborty: ಬಾಲಿವುಡ್ ನಟ ಮಿಥುನ್ ಚಕ್ರವರ್ತಿಗೆ ಎದೆನೋವು! ಆಸ್ಪತ್ರೆಗೆ ದಾಖಲು

Share the Article

ಬಾಲಿವುಡ್ ಹಿರಿಯ ನಟ ಮತ್ತು ರಾಜಕಾರಣಿ ಮಿಥುನ್ ಚಕ್ರವರ್ತಿ ಅವರನ್ನು ಇಂದು ಫೆಬ್ರವರಿ 10, ಶನಿವಾರ ಕೋಲ್ಕತ್ತಾದ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ವರದಿಯಾಗಿದೆ. ಇಂದು ಬೆಳಗ್ಗೆ ನಟನಿಗೆ ಎದೆನೋವು ಕಾಣಿಸಿಕೊಂಡಿದ್ದು, ನಂತರ ಅವರನ್ನು ಲಕಾಟಾದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಅವರನ್ನು ಅಪೋಲೋ ಆಸ್ಪತ್ರೆಗೆ ಕರೆದೊಯ್ಯಲಾಯಿತು. ಸದ್ಯ ಅವರು ಚಿಕಿತ್ಸೆ ಪಡೆಯುತ್ತಿದ್ದಾರೆ.

ಇದನ್ನೂ ಓದಿ: Remote Control Ceiling Fans: ಬೇಸಿಗೆಯ ಸೆಕೆ ತಡೆದುಕೊಳ್ಳಲು ಆಗುತ್ತಿಲ್ಲವೇ? ಇಲ್ಲಿದೆ ಬೆಸ್ಟ್ ರಿಮೋಟ್ ಕಂಟ್ರೋಲ್ ಫ್ಯಾನ್!

ಆದರೆ, ಆಸ್ಪತ್ರೆಗೆ ದಾಖಲಾದ ಸುದ್ದಿ ಕುರಿತು ನಟನ ಕುಟುಂಬ ಸದಸ್ಯರು ಯಾವುದೇ ಪ್ರತಿಕ್ರಿಯೆ ನೀಡಿಲ್ಲ. ಆಸ್ಪತ್ರೆಯು ಇನ್ನೂ ಯಾವುದೇ ಹೇಳಿಕೆ ನೀಡಿಲ್ಲ. ಈ ಸುದ್ದಿಯ ನಂತರ, ನಟನ ಅಭಿಮಾನಿಗಳು ಚಿಂತಿತರಾಗಿದ್ದು, ಮತ್ತು ಅವರ ಆರೋಗ್ಯಕ್ಕೆ ಸಂಬಂಧಿಸಿದ ಮಾಹಿತಿಗಾಗಿ ಕಾಯುತ್ತಿದ್ದಾರೆ ಮತ್ತು ಶೀಘ್ರದಲ್ಲೇ ಅವರು ಚೇತರಿಸಿಕೊಳ್ಳಲಿ ಎಂದು ಪ್ರಾರ್ಥಿಸುತ್ತಿದ್ದಾರೆ.

 

ಮಿಥುನ್ ಚಕ್ರವರ್ತಿ ಅವರಿಗೆ ಇತ್ತೀಚೆಗೆ ಪ್ರತಿಷ್ಠಿತ ಪದ್ಮಭೂಷಣ ಪ್ರಶಸ್ತಿಯನ್ನು ನೀಡಲಾಗಿತ್ತು.

Leave A Reply