CM Siddaramaiah: ಸಿಎಂ ಸಿದ್ದರಾಮಯ್ಯನ ರಾಜಕೀಯ ನಿವೃತ್ತಿ?!

CM Siddaramaiah: ತೆರಿಗೆ ಹಂಚಿಕೆ ಕುರಿತು ಕೇಂದ್ರದ ವಿರುದ್ಧ ಪ್ರತಿಭಟನೆ ನಡೆಸುತ್ತಿರುವ ಸಿಎಂ ಸಿದ್ದರಾಮಯ್ಯನವರು ಇದೀಗ ಈ ಕುರಿತಂತೆ ರಾಜಕೀಯ ನಿವೃತ್ತಿ ಮಾತನಾಡಿದ್ದಾರೆ.

ಇದನ್ನೂ ಓದಿ: Good News To Farmers: ನೀರಾವರಿಗಾಗಿ ಈ ರೈತರಿಗೆ ಸಿಗಲಿದೆ ಉಚಿತ ವಿದ್ಯುತ್, ಭೂ ರಹಿತ ಕಾರ್ಮಿಕರಿಗೆ 10 ಸಾವಿರ ರೂ!!!

ಹೌದು, ತೆರಿಗೆ (Tax) ಹಂಚಿಕೆ ವಿಚಾರವಾಗಿ ರಾಜ್ಯಕ್ಕೆ ಅನ್ಯಾಯವಾಗಿರೋದು ಸತ್ಯ, ಸತ್ಯ. ಇದು ಸುಳ್ಳಲ್ಲ. ಕೇಂದ್ರ ಮಲತಾಯಿ ಧೋರಣೆ ಮಾಡುತ್ತಿದೆ. ಒಂದು ವೇಳೆ ನಾನು ಹೇಳಿದ್ದು ಸುಳ್ಳಾದ್ರೆ ರಾಜಕೀಯ ಬಿಡ್ತೀನಿ, ನಿವೃತ್ತಿ ಪಡೀತಿನಿ ಎಂದು ಸಿಎಂ ಸಿದ್ದರಾಮಯ್ಯ (Siddaramaiah) ಸವಾಲು ಹಾಕಿದ್ದಾರೆ.

ಅಲ್ಲದೆ ಇದುವರೆಗೂ ಕೆಂದ್ರ ಸರ್ಕಾರದಿಂದ (Union Government) ಒಂದೇ ಒಂದು ರೂಪಾಯಿ ಸಹ ಬಿಡುಗಡೆ ಮಾಡಿಲ್ಲ. ರಾಜ್ಯ ಬಿಜೆಪಿ ಲೀಡರ್‌ಗಳು ಅಮಿತ್ ಶಾ (Amit Shah) ಜೊತೆ ಮಾತನಾಡಿ ಅನುದಾನ ಬಿಡುಗಡೆ ಮಾಡಿಸಿಲ್ಲ. ನಮಗೆ ಅನ್ಯಾಯ ಆದ್ರೆ ಪ್ರತಿಭಟಿಸಬಾರದಾ? ಯಡಿಯೂರಪ್ಪರಂತೆ ಬಾಯಿ ಮುಚ್ಚಿಕೊಂಡು ಇರಬೇಕಾ? ರಾಜ್ಯದ ಮಾನ ಮರ್ಯಾದೆ ತೆಗೆದಿದ್ದಾರೆ ಎಂದು ಬಿ.ಎಸ್ ಯಡಿಯೂರಪ್ಪ (BS Yediyurappa) ಹೇಳಿದ್ದಾರೆ. ನಾನೂ ಅವರಂತೆ ಹೇಳಿದ್ದಕ್ಕೆಲ್ಲಾ ತಲೆ ಅಲ್ಲಾಡಿಸಬೇಕಾ? ಎಂದು ಹರಿಹಾಯ್ದಿದ್ದಾರೆ.

Leave A Reply

Your email address will not be published.