Belthangady: ವಿಷ ಸೇವಿಸಿ ಆಸ್ಪತ್ರೆಗೆ ದಾಖಲಾದ ವಿದ್ಯಾರ್ಥಿನಿ ಸಾವು

Belthangady: ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನ ಮಾಡಿ, ಗಂಭೀರ ಸ್ಥಿತಿಯಲ್ಲಿದ್ದ ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿನಿಯೋರ್ವಳು ಚಿಕಿತ್ಸೆಗೆ ಸ್ಪಂದಿಸದೆ ಮೃತ ಹೊಂದಿರುವ(Belthangady )ಘಟನೆಯೊಂದು ನಡೆದಿದೆ.

ತ್ರಿಶಾ (16) ಎಂಬಾಕೆಯೇ ಮೃತ ವಿದ್ಯಾರ್ಥಿನಿ. ಫೆ.7 ರಂದು ಈಕೆ ವಿಷ ಸೇವಿಸಿದು, ಕೂಡಲೇ ಆಕೆಯನ್ನು ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ನಂತರ ಹೆಚ್ಚಿನ ಚಿಕಿತ್ಸೆಗೆಂದು ಬೆಂಗಳೂರಿನ ವಿಕ್ಟೋರಿಯಾ ಆಸ್ಪತ್ರೆಗೆ ಎರಡು ದಿನಗಳ ಹಿಂದೆ ಸ್ಥಳಾಂತರ ಮಾಡಲಾಗಿತ್ತು. ಆದರೆ ಸೋಮವಾರ ಮುಂಜಾನೆ ವಿದ್ಯಾರ್ಥಿನಿ ಚಿಕಿತ್ಸೆ ಫಲಿಸದೆ ಸಾವಿಗೀಡಾಗಿರುವ ಕುರಿತು ವರದಿಯಾಗಿದೆ.

ತನ್ನ ಬಗ್ಗೆ ಇಲ್ಲಸಲ್ಲದ ಆರೋಪ ಮಾಡಿದ ಚಿತ್ರಕಲಾ ಶಿಕ್ಷಕ ಮೆಸೇಜ್‌ ಮಾಡಿ ಅವಮಾನಿಸಿದ್ದಕ್ಕೆ ಮನನೊಂದು ಈಕೆ ಆತ್ಮಹತ್ಯೆ ಮಾಡಿಕೊಂಡಿದ್ದಳು.

ಧರ್ಮಸ್ಥಳದ ನಿವಾಸಿ, ಖಾಸಗಿ ಶಿಕ್ಷಣ ಸಂಸ್ಥೆಯ ಎಸ್‌ಎಸ್‌ಎಲ್‌ಸಿ ವಿದ್ಯರ್ಥಿನಿಯಾಗಿರುವ ಈಕೆಯ ಶಾಲೆಯ ಚಿತ್ರಕಲಾ ಶಿಕ್ಷಕ ರೂಪೇಶ್‌ ಪೂಜಾರಿ ಮೃತಪಟ್ಟ ವಿದ್ಯಾರ್ಥಿನಿಯ ಬಗ್ಗೆ ಮತ್ತೊಬ್ಬ ವಿದ್ಯಾರ್ಥಿನಿಗೆ ಅವಮಾನ ಮಾಡುವ ರೀತಿಯಲ್ಲಿ ಮೆಸೇಜ್‌ ಮಾಡಿದ್ದರು ಎಂಬ ಆರೋಪ ಕೇಳಿ ಬಂದಿದೆ. ಈ ಕುರಿತು ತಾಯಿ ಮಗಳೊಂದಿಗೆ ಶಾಲೆಗೆ ತೆರಳಿ ವಿಚಾರಣೆ ಮಾಡಿದ್ದಾರೆ.

ನಂತರ ಫೆ.7 ರಂದು ವಿದ್ಯಾರ್ಥಿನಿ ಶಾಲೆಗೆ ಬರುಬಾಗ ಬಿಸ್ಕೆಟ್‌ ಪ್ಯಾಕೆಟ್‌ ಜೊತೆ ಇಲಿ ಪಾಷಾಣವನ್ನು ಅಂಗಡಿಯಿಂದ ಖರೀದಿ ಮಾಡಿದ್ದಾಳೆ. ನಂತರ ಶಾಲೆಯಲ್ಲಿ ಇಲಿ ಪಾಷಾಣ ತಿಂದಿದ್ದಾಳೆ. ಈಕೆ ಅಸ್ವಸ್ಥಳಾದುದನ್ನು ಕಂಡು ಶಿಕ್ಷಕರು ಆಕೆಯನ್ನು ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲು ಮಾಡಿದ್ದರು. ನಂತರ ಹೆಚ್ಚಿನ ಚಿಕಿತ್ಸೆಗೆ ಬೆಂಗಳೂರಿನ ವಿಕ್ಟೋರಿಯಾ ಆಸ್ಪತ್ರೆಗೆ ಸ್ಥಳಾಂತರ ಮಾಡಲಾಗಿತ್ತು. ಆದರೆ ಲಿವರ್‌ ಮತ್ತು ಕಿಡ್ನಿ ನಿಷ್ಟ್ರಿಯವಾಗಿದ್ದು ಫೆ.12 ರ ಮುಂಜಾನೆ 5.30 ರ ಸುಮಾರಿಗೆ ಚಿಕಿತ್ಸೆ ಫಲಿಸದೆ ಮೃತ ಹೊಂದಿದ್ದಾಳೆ.

ಶಿಕ್ಷಕ ರೂಪೇಶ್‌ ಪೂಜಾರಿಯ ವಿರುದ್ಧ ವಿದ್ಯಾರ್ಥಿನಿಯ ತಾಯಿ ನೀಡಿದ ದೂರಿನ ಮೇರೆಗೆ ಪ್ರಕರಣ ದಾಖಲಾಗಿತ್ತು. ಶಿಕ್ಷಕ ರೂಪೇಶ್‌ ಪೂಜಾರಿಯನ್ನು ಬಂಧಿಸಿ ಮಂಗಳೂರು ನ್ಯಾಯಾಲಯಕ್ಕೆ ಧರ್ಮಸ್ಥಳ ಪೊಲೀಸರು ಹಾಜರುಪಡಿಸಿದ್ದು, ನ್ಯಾಯಾಲಯ ಮಧ್ಯಂತರ ಜಾಮೀನು ನೀಡಿದೆ. ಶಾಲೆಯ ಆಡಳಿತ ಮಂಡಳಿ ಆರೋಪಿ ಶಿಕ್ಷಕ ರೂಪೇಶ್‌ ಪೂಜಾರಿ ವಿರುದ್ಧ ಶಿಸ್ತು ಕ್ರಮ ಕೈಗೊಂಡಿದೆ.

ಇದನ್ನೂ ಓದಿ : Bantwala: ಲಾರಿ-ರಿಕ್ಷಾ ಅಪಘಾತ, ರಿಕ್ಷಾ ಜಖಂ, ಚಾಲಕ ಆಸ್ಪತ್ರೆಗೆ ದಾಖಲು

Leave A Reply

Your email address will not be published.