Mangaluru: ಶ್ರೀರಾಮನಿಗೆ ಅವಹೇಳನ ಮಾಡಿದ ಶಾಲಾ ಶಿಕ್ಷಕಿ; ಆಡಳಿತ ಮಂಡಳಿಯಿಂದ ಶಿಕ್ಷಕಿ ಅಮಾನತು

Mangalore : ಸಂತ ಜೆರೋಸಾ ಶಾಲೆಯ ಶಿಕ್ಷಕಿ ಸಿಸ್ಟರ್‌ ಪ್ರಭಾ ಅವರನ್ನು ಆಡಳಿತ ಮಂಡಳಿ ಅಮಾನತು ಮಾಡಿದೆ ಎಂದು(Mangalore)ವರದಿಯಾಗಿದೆ. ಏಳನೇ ತರಗತಿ ಶಿಕ್ಷಕಿ ಸಿಸ್ಟರ್‌ ಪ್ರಭಾ ಅವರು ಅಯೋಧ್ಯೆ ರಾಮಮಂದಿರ ಹಾಗೂ ಶ್ರೀರಾಮನ ಕುರಿತು ಅವಹೇಳನ ಮಾಡಿ ಮಾತನಾಡಿರುವ ಕುರಿತು ವಿದ್ಯಾರ್ಥಿಗಳು ಪೋಷಕರ ಬಳಿ ಹೇಳಿದ್ದರು. ಇದು ಅನಂತರ ವಿವಾದಕ್ಕೆ ಕಾರಣವಾಗಿತ್ತು.

ಹಿಂದೂ ಸಂಘಟನೆಗಳು, ರಾಜಕೀಯ ಮುಖಂಡರ ಆಕ್ರೋಶ ವ್ಯಕ್ತಪಡಿಸಿ ಶಿಕ್ಷಕಿಯ ಅಮಾನತಿಗೆ ಆಗ್ರಹ ಮಾಡಿದ್ದರು. ಇಂದು ಕೂಡಾ ಶಾಲೆಯ ಮುಂಭಾಗ ನೂರಾರು ಆಕ್ರೋಶಿತರು ಶಾಲೆ ಮುಂದೆ ಜಮಾವಣೆಗೊಂಡಿದ್ದು, ಪೋಷಕರು ಶಿಕ್ಷಕಿ ವಿರುದ್ಧ ಧಿಕ್ಕಾರ ಕೂಗಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಸ್ಥಳಕ್ಕೆ ವೇದವ್ಯಾಸ್‌ ಕಾಮತ್‌ ಅವರು ಕೂಡಾ ಬಂದಿದ್ದು, ಶಾಲೆಗೆ ಮುತ್ತಿಗೆ ಹಾಕಲು ಯತ್ನಿಸಿರುವುದಾಗಿ ವರದಿಯಾಗಿದೆ.

ಈ ವೇಳೆ ಮುಂಭಾಗ ಶಾಸಕ ಮತ್ತು ಪೋಷಕರನ್ನು ಪೊಲೀಸರು ತಡೆದಿದ್ದಾರೆ. ಅನಂತರ ಸ್ಥಳಕ್ಕೆ ಬಂದ ಶಾಲಾ ಆಡಳಿತ ಮಂಡಳಿ ಸದಸ್ಯರು ಶಿಕ್ಷಕಿಯನ್ನು ಅಮಾನತು ಮಾಡಿರುವುದಾಗಿ ತಿಳಿಸಿದ್ದಾರೆ.

ಇದನ್ನೂ ಓದಿ : ಉಡುಪಿ ಪ್ರಸಿದ್ಧ ದೈವ ನರ್ತಕ ಸಾಧು ಪಾಣಾರ ಮಂಚಿಕೆರೆ ನಿಧನ

Leave A Reply

Your email address will not be published.