Congress: ಕಾಂಗ್ರೆಸ್ ನಿಂದ ಮಾಜಿ ಸಿಎಂ ಔಟ್ !!
Congress : ದೇಶದಲ್ಲಿ ಕಾಂಗ್ರೆಸ್ ಬುಡ ಸಂಪೂರ್ಣವಾಗಿ ಅಲುಗಾಡುತ್ತಿದೆ. ಯಾಕೆಂದರೆ ಘಟಾನುಘಟಿ ನಾಯಕರೇ ಪಕ್ಷ ತೊರೆಯುತ್ತಿದ್ದಾರೆ. ಅಂತೆಯೇ ಇದೀಗ ಮಹಾರಾಷ್ಟ್ರದಲ್ಲೂ ಕಾಂಗ್ರೆಸ್(Congress)ಪಾರ್ಟಿಗೆ ಮಹಾ ಅಘಾತ ಉಂಟಾಗಿದ್ದು ಮಾಜಿ ಮುಖ್ಯಮಂತ್ರಿ ಅಶೋಕ್ ಚೌಹಾಣ್ ಅವರು ಪಕ್ಷಕ್ಕೆ ಹಾಗೂ ತಮ್ಮ ಶಾಸಕ ಸ್ಥಾನಕ್ಕೂ ರಾಜೀನಾಮೆ ನೀಡಿ ಕೈ ಪಡೆಗೆ ಬಾಯ್ ಬಾಯ್ ಹೇಳಿದ್ದಾರೆ.
ಹೌದು, ಮಹಾರಾಷ್ಟ್ರ ರಾಜಕೀಯದಲ್ಲಿ ಭಾರೀ ಸಂಚಲನ ಉಂಟಾಗಿದ್ದು ಮಹಾರಾಷ್ಟ್ರದ (Maharashtra) ಮಾಜಿ ಮುಖ್ಯಮಂತ್ರಿ ಅಶೋಕ್ ಚವಾಣ್ (Ashok Chavan) ಕಾಂಗ್ರೆಸ್ ಪಕ್ಷದ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ (Resignation) ನೀಡಿದ್ದಾರೆ. ಇಷ್ಟೇ ಅಲ್ಲದೆ ತಮ್ಮ ಶಾಸಕ ಸ್ಥಾನಕ್ಕೂ ರಾಜೀನಾಮೆ ನೀಡಿದ್ದಾರೆ.
ಇಷ್ಟೇ ಅಲ್ಲದೆ ಅಶೋಕ್ ಚವಾಣ್ ಜೊತೆಗೆ ಮಹಾರಾಷ್ಟ್ರ ವಿಧಾನ ಪರಿಷತ್ತಿನ ಮಾಜಿ ಸದಸ್ಯ ಅಮರನಾಥ್ ರಾಜೂರ್ಕರ್ ಅವರು ಕಾಂಗ್ರೆಸ್‌ನ ಎಲ್ಲಾ ಹುದ್ದೆಗಳಿಗೆ ಅವರೂ ರಾಜೀನಾಮೆ ನೀಡಿದ್ದಾರೆ. ಮೂಲಗಳ ಪ್ರಕಾರ, 10-12 ಶಾಸಕರು ಚವಾಣ್ ಜೊತೆಗಿದ್ದು ಸೂಕ್ತ ಸಮಯದಲ್ಲಿ ಅವರು ಪಕ್ಷವನ್ನು ಬದಲಿಸಬಹುದು ಎನ್ನಲಾಗುತ್ತಿದೆ. ಒಟ್ಟಿನಲ್ಲಿ ಈ ಪಡೆ ಮುಂದೆ ಬಿಜೆಪಿ ಸೇರಬಹುದು ಎಂಬ ಸುದ್ದಿಯೂ ವೈರಲ್ ಆಗುತ್ತಿದೆ.
ಇನ್ನು ಈ ಬಗ್ಗೆ ಪ್ರತಿಕ್ರಿಯಿಸಿದ ಅಶೋಕ್ ಅವರು ಶಾಸಕನಾಗಿ ವಿಧಾನಸಭೆ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ್ದೇನೆ. ನಾನು ಸಭಾಪತಿಗೆ ರಾಜೀನಾಮೆ ಸಲ್ಲಿಸಿದ್ದೇನೆ. ನಾನು ಕಾಂಗ್ರೆಸ್ ಕಾರ್ಯಕಾರಿ ಸಮಿತಿ ಮತ್ತು ಕಾಂಗ್ರೆಸ್ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ್ದೇನೆ. ನಾನು ಯಾವುದೇ ಪಕ್ಷ ಸೇರುವ ನಿರ್ಧಾರ ಮಾಡಿಲ್ಲ. ಎರಡು ದಿನಗಳ ನಂತರ ಪಕ್ಷ ಸೇರುವ ನನ್ನ ನಿಲುವನ್ನು ಸ್ಪಷ್ಟಪಡಿಸುತ್ತೇನೆ ಎಂದು ಅವರು ಹೇಳಿದ್ದಾರೆ. ಅಂದಹಾಗೆ ಮಹಾರಾಷ್ಟ್ರದ ಕಾಂಗ್ರೆಸ್ ಶಾಸಕರ ಜತೆ ಇದುವರೆಗೆ ಯಾವುದೇ ಚರ್ಚೆ ನಡೆಸಿಲ್ಲ ಎಂದು ಹೇಳಿದ್ದಾರೆ.