MLC election: ಕಾಂಗ್ರೆಸ್ ಅಭ್ಯರ್ಥಿ ಪರ ಬಿಜೆಪಿ ಶಾಸಕ ಕ್ಯಾಂಪೇನ್ !!

MLC Election: ರಾಜ್ಯದಲ್ಲಿ ವಿಧಾನ ಪರಿಷತ್ ಉಪ ಚುನಾವಣೆ ಘೋಷಣೆಯಾಗಿದ್ದು ಅಭ್ಯರ್ಥಿಗಳ ಹೆಸರು ಕೂಡ ಬಿಡುಗಡೆಯಾಗಿದೆ. ಈ ಬೆನ್ನಲ್ಲೇ ಬಿಜೆಪಿ ಶಾಸಕರು ಕಾಂಗ್ರೆಸ್ ಅಭ್ಯರ್ಥಿಯ ಪರ ಮತಯಾಚನೆ ನಡೆಸುತ್ತಿದ್ದಾರೆ.

ಇದನ್ನೂ ಓದಿ: Gold price: ಚಿನ್ನದ ಬೆಲೆಯಲ್ಲಿ ಭರ್ಜರಿ ಇಳಿಕೆ !!

ಹೌದು, ಬಿಜೆಪಿ(BJP) ಶಾಸಕರಾಗಿದ್ದರೂ ಬಿಜೆಪಿಯಿಂದ ಅಂತರ ಕಾಯ್ದುಕೊಂಡಿರುವ ಶಾಸಕ ಎಸ್ ಟಿ ಸೋಮಶೇಖರ್(ST Somshekhar) ಅವರು ವಿಧಾನಪರಿಷತ್ತಿನ ಶಿಕ್ಷಕರ ಕ್ಷೇತ್ರದ ಉಪ ಚುನಾವಣೆಲ್ಲಿ ಕಾಂಗ್ರೆಸ್ ಅಭ್ಯರ್ಥಿ ಕಾಂಗ್ರೆಸ್(Congress)ಅಭ್ಯರ್ಥಿ ಪುಟ್ಟಣ್ಣ(Puttanna) ಪರ ಕ್ಯಾಂಪೇನ್ ಮಾಡಿ, ಪುಟ್ಟನಿಗೇ ಮತ ನೀಡಬೇಕೆಂದು ಮನವಿ ಮಾಡಿದ್ದಾರೆ.

ಅಂದಹಾಗೆ ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದಾಗಿನಿಂದಲೂ ಸೋಮಶೇಖರ್ ಅವರು ಬಿಜೆಪಿ ಜೊತೆ ಅಂತರ ಕಾಯ್ದುಕೊಂಡಿದ್ದಾರೆ. ಹಲವು ಸಭೆಗಳಿಗೂ ಗೈರಾಗಿದ್ದಾರೆ.

Leave A Reply

Your email address will not be published.