West bengal: ಪೋಲೀಸ್ ಲಾಠಿ ಚಾರ್ಜ್‌ನಲ್ಲಿ ಬಿಜೆಪಿ ರಾಜ್ಯಾಧ್ಯಕ್ಷರಿಗೆ ಗಂಭೀರ ಗಾಯ – ಆಸ್ಪತ್ರೆಗೆ ದಾಖಲು !!

Share the Article

West bengal: ಪಶ್ವಿಮ ಬಂಗಾಳದಲ್ಲಿ (West Bengal) ಬಿಜೆಪಿ ವರ್ಸಸ್ ಪೊಲೀಸರ ಸಂಘರ್ಷ ಜೋರಾಗಿದೆ. ಪೊಲೀಸ್ ಲಾಠಿಚಾರ್ಜ್ ವೇಳೆ ತಳ್ಳಾಟ ನೂಕಾಟ ನಡೆದಿದ್ದು, ಈ ವೇಳೆ ಪಶ್ಚಿಮ ಬಂಗಾಳ ಬಿಜೆಪಿ ರಾಜ್ಯಾಧ್ಯಕ್ಷ ಸುಕಾಂತ್ ಮಜೂಂದಾರ್ ಗಂಭೀರವಾಗಿ ಗಾಯಗೊಂಡಿದ್ದಾರೆ. ಅಸ್ವಸ್ಥರಾದ ಅವರನ್ನು ತಕ್ಷಣ ಆಸ್ಪತ್ರೆಗೆ ದಾಖಲಿಸಲಾಗಿದೆ.

https://x.com/ANI/status/1757699810365182020?t=aCVIbV7qI0lP_nmO58quqQ&s=08

West bengal

ಹೌದು, ಪಶ್ಚಿಮ ಬಂಗಾಳದಲ್ಲಿ(West bengal) ಸರ್ಕಾರ ಹಾಗೂ ಟಿಎಂಸಿ ವಿರುದ್ದ ಬಿಜೆಪಿ(BJP) ನಡೆಸುತ್ತಿರುವ ಹೋರಾಟ ತೀವ್ರಗೊಳ್ಳುತ್ತಿದೆ. ಸಂದೇಶ್‌ಖಾಲಿ ದ್ವೀಪ ಪ್ರದೇಶದ ಮಹಿಳೆಯರು ತಮ್ಮ ಮೇಲೆ ನಡೆಯುತ್ತಿರುವ ದೌರ್ಜನ್ಯದ ವಿರುದ್ಧ ಬೀದಿಗಿಳಿದು ಹೋರಾಟ ಮಾಡುತ್ತಿದ್ದರೆ ಬಿಜೆಪಿ ಕೂಡ ಇದೇ ವಿಚಾರವನ್ನು ಮುಂದಿಟ್ಟುಕೊಂಡು ಟಿಎಂಸಿ ಹಾಗೂ ಸರ್ಕಾರದ ವಿರುದ್ಧ ಹೋರಾಟ ಆರಂಭಿಸಿದೆ. ಆದರೆ ಪ್ರತಿಭಟನಾ ನಿರತರನ್ನು ತಡೆಯಲು ಪೊಲೀಸರು ಲಾಠಿ ಚಾರ್ಜ್ ಮಾಡಿದ್ದಾರೆ. ಈ ಲಾಠಿ ಚಾರ್ಜ್‌ನಲ್ಲಿ ಪಶ್ಚಿಮ ಬಂಗಾಳ ಬಿಜೆಪಿ ಅಧ್ಯಕ್ಷ ಸುಕಾಂತ ಮಜುಮ್ದಾರ್ ತೀವ್ರವಾಗಿ ಗಾಯಗೊಂಡಿದ್ದಾರೆ. ತಕ್ಷಣವೇ ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ. ಬಳಿಕ ಹೆಚ್ಚಿನ ಚಿಕಿತ್ಸೆಗೆ ಕೋಲ್ಕತ್ತಾದ ಅಪೊಲೋ ಆಸ್ಪತ್ರೆಗೆ ದಾಖಲಿಸಲಾಯಿತು.

ಅಂದಹಾಗೆ ಸುಕಾಂತ ಮಜುಮ್ದಾರ್ ಜೊತೆಗೆ ಹಲವು ಬಿಜೆಪಿ ಕಾರ್ಯಕರ್ತರು ಗಾಯಗೊಂಡಿದ್ದಾರೆ. ತಲೆಯಿಂದ ರಕ್ತ ಸುರಿಯುತ್ತಿರುವ ದೃಶ್ಯಗಳು ಎಲ್ಲೆಡೆ ಕಾಣುತ್ತಿದೆ.

Leave A Reply

Your email address will not be published.