Home Interesting Electoral Bonds: ಎಲೆಕ್ಟೋರಲ್ ಬಾಂಡ್ ಯೋಜನೆ ಅಂದ್ರೆ ಏನು??ಸುಪ್ರೀಂ ಕೋರ್ಟ್ ರದ್ದುಗೊಳಿಸಲು ಕಾರಣವೇನು??

Electoral Bonds: ಎಲೆಕ್ಟೋರಲ್ ಬಾಂಡ್ ಯೋಜನೆ ಅಂದ್ರೆ ಏನು??ಸುಪ್ರೀಂ ಕೋರ್ಟ್ ರದ್ದುಗೊಳಿಸಲು ಕಾರಣವೇನು??

Electoral Bonds

Hindu neighbor gifts plot of land

Hindu neighbour gifts land to Muslim journalist

Electoral Bond Scheme: ಎಲೆಕ್ಟೋರಲ್ ಬಾಂಡ್ ಯೋಜನೆಯ ಸಿಂಧುತ್ವವನ್ನು ಪ್ರಶ್ನೆ ಮಾಡಿ ಸಲ್ಲಿಸಿದ್ದ ಅರ್ಜಿಗಳ ಕುರಿತ ತೀರ್ಪನ್ನು ಸುಪ್ರೀಂ ಕೋರ್ಟ್ ಗುರುವಾರ ನೀಡಿದೆ.

ಎಲೆಕ್ಟೋರಲ್ ಬಾಂಡ್ ಯೋಜನೆ ಇದು.

ಎಲೆಕ್ಟೋರಲ್ ಬಾಂಡ್ ಯೋಜನೆ ರದ್ದು

ಎಲೆಕ್ಟೋರಲ್ ಬಾಂಡ್ ಯೋಜನೆ ಎಂದರೇನು?

ಇದನ್ನೂ ಓದಿ: Section 80TTB: ಉಳಿತಾಯದಿಂದ ದೊರೆಯುವ ಬಡ್ಡಿ ಮೇಲೆ ಹಿರಿಯ ನಾಗರಿಕರಿಗೆ ತೆರಿಗೆ ವಿನಾಯಿತಿ!!

What Is Electoral Bond Scheme: ಎಲೆಕ್ಟೋರಲ್ ಬಾಂಡ್ ಯೋಜನೆಯನ್ನು ಸುಪ್ರೀಂ ಕೋರ್ಟ್ ಈಗ ರದ್ದುಗೊಳಿಸಿದೆ. ಎಲೆಕ್ಟೋರಲ್ ಬಾಂಡ್ ಯೋಜನೆಯ ಸಿಂಧುತ್ವವನ್ನು ಪ್ರಶ್ನೆ ಮಾಡಿ ಸಲ್ಲಿಸಲಾಗಿದ್ದ ಅರ್ಜಿಗಳ ಕುರಿತು ಸುಪ್ರೀಂ ಕೋರ್ಟ್ ಗುರುವಾರ ಮಹತ್ವದ ತೀರ್ಪು ಹೊರಬಿದ್ದಿದೆ. ಕಪ್ಪುಹಣವನ್ನು ತಡೆಗಟ್ಟುವ ಉದ್ದೇಶದಿಂದ ಮಾಹಿತಿ ಹಕ್ಕು ಉಲ್ಲಂಘನೆ ಸಮರ್ಥನೀಯವಲ್ಲ, ಎಲೆಕ್ಟೋರಲ್ ಬಾಂಡ್ ಯೋಜನೆಯು ಮಾಹಿತಿ ಹಕ್ಕು ಮತ್ತು ಸ್ವಾತಂತ್ರ್ಯದ ಉಲ್ಲಂಘನೆಯಾಗಿದ್ದು, ರಾಜಕೀಯ ಪಕ್ಷಗಳಿಂದ ಹಣಕಾಸಿನ ಮಾಹಿತಿಯನ್ನು ಬಹಿರಂಗಪಡಿಸದಿರುವುದು ಇದಕ್ಕೆ ವಿರುದ್ಧ ಎಂದು ಹೇಳಿದೆ.

ಎಲೆಕ್ಟೋರಲ್ ಬಾಂಡ್ ಗಳನ್ನು ತಕ್ಷಣವೇ ನಿಲ್ಲಿಸುವಂತೆ ನ್ಯಾಯಾಲಯ ಆದೇಶ ನೀಡಿದೆ. ‘ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ಎಲೆಕ್ಟೋರಲ್ ಬಾಂಡ್ ಗಳ ಮೂಲಕ ಇದುವರೆಗೆ ನೀಡಿರುವ ಎಲ್ಲಾ ಕೊಡುಗೆಗಳ ಬಗ್ಗೆ ವಿವರಗಳನ್ನು ಮಾರ್ಚ್ 31 ರೊಳಗೆ ಚುನಾವಣಾ ಆಯೋಗಕ್ಕೆ ನೀಡುವುದು ಕಡ್ಡಾಯ’ ಎಂದು ಕೋರ್ಟ್ ಸೂಚನೆ ನೀಡಿದೆ. ಏಪ್ರಿಲ್ 13 ರ ಒಳಗೆ ತನ್ನ ಅಧಿಕೃತ ವೆಬ್‌ಸೈಟ್‌ನಲ್ಲಿ ಮಾಹಿತಿಯನ್ನು ಹಂಚಿಕೊಳ್ಳಲು ಚುನಾವಣಾ ಆಯೋಗಕ್ಕೆ ನ್ಯಾಯಾಲಯವು ಸೂಚನೆ ನೀಡಿದೆ.

ಎಲೆಕ್ಟೋರಲ್ ಬಾಂಡ್ ಯೋಜನೆಯಲ್ಲಿ ಆರ್ಟಿಕಲ್ 19(1)(ಎ) ಉಲ್ಲಂಘನೆಯಾಗಿದೆ ಎಂದು ಸುಪ್ರೀಂ ಕೋರ್ಟ್ ಹೇಳಿಕೆ ನೀಡಿದೆ. ಇದನ್ನು ಅಸಂವಿಧಾನಿಕ ಎಂದು ಪರಿಗಣಿಸಿರುವ ನ್ಯಾಯಾಲಯ ಎಲೆಕ್ಟೋರಲ್ ಬಾಂಡ್ ಯೋಜನೆಯನ್ನು ಸುಪ್ರೀಂ ಕೋರ್ಟ್ ರದ್ದುಗೊಳಿಸಿದೆ.

ಎಲೆಕ್ಟೋರಲ್ ಬಾಂಡ್ ಎಂದರೇನು?

2017 ರಲ್ಲಿ ಭಾರತ ಸರ್ಕಾರವು ಎಲೆಕ್ಟೋರಲ್ ಬಾಂಡ್ ಯೋಜನೆಯನ್ನು ಘೋಷಣೆ ಮಾಡಿತು. ಈ ಯೋಜನೆಯನ್ನು ಸರ್ಕಾರವು ಜನವರಿ 29 2018 ರಂದು ಕಾನೂನುಬದ್ಧವಾಗಿ ಜಾರಿಗೆ ತಂದಿತು. ಸರಳವಾಗಿ ಹೇಳುವುದಾದರೆ, ಎಲೆಕ್ಟೋರಲ್ ಬಾಂಡ್ ರಾಜಕೀಯ ಪಕ್ಷಗಳಿಗೆ ದೇಣಿಗೆ ನೀಡುವ ಆರ್ಥಿಕ ಸಾಧನವಾಗಿದೆ. ಇದು ಪ್ರಾಮಿಸರಿ ನೋಟ್‌ನಂತಿದೆ

ಭಾರತದ ನಾಗರಿಕ, ಕಂಪನಿಯು ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾದ ಆಯ್ದ ಶಾಖೆಗಳಿಂದ ಇದನ್ನು ಖರೀದಿ ಮಾಡಬಹುದಾಗಿದೆ. ತಮ್ಮ ಆಯ್ಕೆಯ ಯಾವುದೇ ರಾಜಕೀಯ ಪಕ್ಷಕ್ಕೆ ಅನಾಮಧೇಯವಾಗಿ ದೇಣಿಗೆ ನೀಡಬಹುದಾಗಿದೆ.

KYC ವಿವರಗಳಗಳು ಹೊಂದಿರುವ ಬ್ಯಾಂಕ್ ಖಾತೆಯನ್ನು ಹೊಂದಿರುವ ಯಾರು ಬೇಕಾದರೂ ಎಲೆಕ್ಟೋರಲ್ ಬಾಂಡ್‌ಗಳನ್ನು ಖರೀದಿ ಮಾಡಬಹುದಾಗಿದೆ. ಎಲೆಕ್ಟೋರಲ್ ಬಾಂಡ್‌ಗಳು ಪಾವತಿಸುವವರ ಹೆಸರನ್ನು ಹೊಂದಿರುವುದಿಲ್ಲ. ಈ ಯೋಜನೆಯಡಿಯಲ್ಲಿ, ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾದ ನಿರ್ದಿಷ್ಟ ಶಾಖೆಗಳಿಂದ ರೂ 1,000, ರೂ 10,000, ರೂ 1 ಲಕ್ಷ, ರೂ 10 ಲಕ್ಷ ಮತ್ತು ರೂ 1 ಕೋಟಿಯ ಯಾವುದೇ ಮುಖಬೆಲೆಯ ಎಲೆಕ್ಟೋರಲ್ ಬಾಂಡ್‌ಗಳನ್ನು ಖರೀದಿಸಬಹುದು.

ಎಲೆಕ್ಟೋರಲ್ ಬಾಂಡ್‌ಗಳನ್ನು ಜನವರಿ, ಏಪ್ರಿಲ್, ಜುಲೈ ಮತ್ತು ಅಕ್ಟೋಬರ್ ತಿಂಗಳುಳಲ್ಲಿ 10 ದಿನಗಳ ಅವಧಿಗೆ ಖರೀದಿಸಲು ಲಭ್ಯವಾಗುತ್ತವೆ. ಲೋಕಸಭೆ ಚುನಾವಣೆಯ ವೇಳೆ ಕೇಂದ್ರ ಸೂಚಿಸಿದ 30 ದಿನಗಳ ಹೆಚ್ಚುವರಿ ಅವಧಿಯಲ್ಲಿ ನೀಡಬಹುದಾಗಿದೆ.

ಎಲೆಕ್ಟೋರಲ್ ಬಾಂಡ್‌ ಹೇಗೆ ಕಾರ್ಯನಿರ್ವಹಿಸುತ್ತವೆ?

ಎಲೆಕ್ಟೋರಲ್ ಬಾಂಡ್‌ಗಳನ್ನು ಬಳಸುವುದು ತುಂಬಾ ಸುಲಭ. ನೀವು ಇವುಗಳನ್ನು ಎಸ್‌ಬಿಐನ ಕೆಲವು ಶಾಖೆಗಳಲ್ಲಿ ಪಡೆದುಕೊಳ್ಳುತ್ತೀರಿ. ನೀವು ಈ ಬಾಂಡ್‌ನ್ನು ರಾಜಕೀಯ ಪಕ್ಷಕ್ಕೆ ದೇಣಿಗೆ ನೀಡಿದ ಬಳಿಕ ರಿಸೀವರ್ ಅದನ್ನು ನಗದು ಆಗಿ ಪರಿವರ್ತಿಸಬಹುದು. ಪಕ್ಷದ ಖಾತೆಯನ್ನು ಪರಿಶೀಲಿಸಿ ಎನ್‌ಕ್ಯಾಶ್ ಮಾಡಲು ಬಳಕೆಯಾಗುತ್ತದೆ. ಎಲೆಕ್ಟೋರಲ್ ಬಾಂಡ್‌ಗಳು 15 ದಿನಗಳವರೆಗೆ ಮಾತ್ರ ಮಾನ್ಯವಾಗಿರುತ್ತವೆ.

ಯಾರು ಚುನಾವಣಾ ಬಾಂಡ್ ಪಡೆಯುತ್ತಾರೆ?

ದೇಶದ ಎಲ್ಲಾ ನೋಂದಾಯಿತ ರಾಜಕೀಯ ಪಕ್ಷಗಳು ಈ ಬಾಂಡ್ ಅನ್ನು ಪಡೆಯುತ್ತವೆ, ಆದರೆ ಇದಕ್ಕೆ ಷರತ್ತು ಎಂದರೆ ಕಳೆದ ಸಾರ್ವತ್ರಿಕ ಚುನಾವಣೆಯಲ್ಲಿ ಆ ಪಕ್ಷವು ಕನಿಷ್ಠ ಒಂದು ಶೇಕಡಾ ಅಥವಾ ಹೆಚ್ಚಿನ ಮತಗಳನ್ನು ಪಡೆದಿರಬೇಕು. ಅಂತಹ ನೋಂದಾಯಿತ ಪಕ್ಷವು ಚುನಾವಣಾ ಬಾಂಡ್‌ಗಳ ಮೂಲಕ ದೇಣಿಗೆಗಳನ್ನು ಸ್ವೀಕರಿಸಲು ಅರ್ಹವಾಗಿರುತ್ತದೆ.

2017 ರಲ್ಲಿ, ಕೇಂದ್ರ ಸರ್ಕಾರವು ಹಣಕಾಸು ಮಸೂದೆಯ ಮೂಲಕ ಸಂಸತ್ತಿನಲ್ಲಿ ಎಲೆಕ್ಟೋರಲ್ ಬಾಂಡ್ ಯೋಜನೆಯನ್ನು ಮೊದಲು ಪರಿಚಯ ಮಾಡಿತು.