Harish poonja: ತೆರಿಗೆ ವಿಚಾರಕ್ಕೆ ಮತ್ತೆ ಗರಂ ಶಾಸಕ ಹರೀಶ್ ಪೂಂಜ- ‘ದಕ್ಷಿಣ ಕನ್ನಡದ ಟ್ಯಾಕ್ಸ್ ಮುಸ್ಲಿಮರಿಗೆ’ ಪೋಸ್ಟ್ ವೈರಲ್

Harish poonja: ಕೆಲವು ದಿನಗಳ ಹಿಂದಷ್ಟೇ ಹಿಂದೂಗಳ ತೆರಿಗೆಯನ್ನು ಹಿಂದೂಗಳಿಗೆ ಅಭಿವೃದ್ಧಿ ಮಾಡಿ ಎಂದು ಪೋಸ್ಟ್ ಹರಿಬಿಡುವ ಮೂಲಕ ಸಾಕಷ್ಟು ಚರ್ಚೆಗೆ ಕಾರಣವಾಗಿದ್ದ ಬೆಳ್ತಂಗಡಿ ಶಾಸಕ ಹರೀಶ್ ಪೂಂಜ(Harish poonja) ಇದೀಗ ಮತ್ತೆ ರಾಜ್ಯ ಸರ್ಕಾರ ಮಂಡಿಸಿದ ಬಜೆಟ್ ವಿರುದ್ಧ ಇದೇ ಅಸ್ತ್ರವನ್ನು ಪ್ರಯೋಗಿಸಿದ್ದಾರೆ.

ಇದನ್ನೂ ಓದಿ: Karnataka Budget 2024: ಮೀನುಗಾರರ ಮುಖದಲ್ಲಿ ಸಂತಸ ತಂದ ಬಜೆಟ್‌; ಈ ಕ್ಷೇತ್ರಕ್ಕೆ ಸಿಕ್ಕಿದ್ದೇನು?

https://www.facebook.com/share/p/sPe4gXFpNkg6Scki/?mibextid=oFDknk

DAILY PRIZE DRAW
23:59:59
Daily Prize
Enter Now and Earn $50
View this ad to enter today's drawing
1,453 entries today

ಹೌದು, ʻಕರ್ನಾಟಕದ ಮಾದರಿʼ ಬಜೆಟ್‌ನಲ್ಲಿ ಸಿಎಂ ಸಿದ್ದರಾಮಯ್ಯ(CM Siddaramaiah)ರಾಜ್ಯದ ವಕ್ಫ್ ಆಸ್ತಿ ಸಂರಕ್ಷಣೆಗೆ 100 ಕೋಟಿ ರೂ. ಹಾಗೂ ಮಂಗಳೂರಿನ ಹಜ್ ಭವನ ನಿರ್ಮಾಣಕ್ಕೆ 10 ಕೋಟಿ ರೂ. ಅನುದಾನ ಘೋಷಣೆ ಮಾಡಿದ್ದಾರೆ. ಈ ಬೆನ್ನಲ್ಲೇ ಆಕ್ರೋಶ ವ್ಯಕ್ತಪಡಿಸಿರುವ ಹರೀಶ್ ಪೂಂಜ ‘ದಕ್ಷಿಣ ಕನ್ನಡದ ತೆರಿಗೆ ಮುಸ್ಲಿಮರ ಮನೆಗೆ’ ಎಂದು ಮತ್ತೆ ರಾಜ್ಯ ಸರ್ಕಾರದ ವಿರುದ್ಧ ಕಿಡಿಕಾರಿದ್ದಾರೆ.

ಅಲ್ಲದೆ ‘ನಮ್ಮ ತೆರಿಗೆ ನಮ್ಮ ಹಕ್ಕು, ನಮ್ಮ ತೆರಿಗೆ ನಮಗೆ ಕೊಡಿ. ದಕ್ಷಿಣ ಕನ್ನಡದ ತೆರಿಗೆ ದಕ್ಷಿಣ ಕನ್ನಡಕ್ಕೆ ನೀಡಿ. ದಕ್ಷಿಣ ಕನ್ನಡದ ತೆರಿಗೆ ಮುಸ್ಲಿಮರ ಮನೆಗೆ’ ಎಂದು ಸೋಶಿಯಲ್ ಮೀಡಿಯಾದಲ್ಲಿ ಬರೆದುಕೊಂಡು ಆಕ್ರೋಶ ವ್ಯಕ್ತಪಡಿಸಿದ್ದಾರೆ.

Leave A Reply

Your email address will not be published.