APL-BPL Card: ಹೊಸ ಪಡಿತರ ಕಾರ್ಡ್‌ಗೆ ಎ.1 ಅರ್ಜಿ ಆಹ್ವಾನ; ಯಾರು ಅರ್ಜಿ ಸಲ್ಲಿಸಬಹುದು?
APL-BPL Card: ಎ.1 ರಿಂದ ಹೊಸ ರೇಷನ್ ಕಾರ್ಡ್‌ಗಳಿಗೆ ಅರ್ಜಿ ಸ್ವೀಕಾರ ಪ್ರಾರಂಭವಾಗಿಲಿದೆ ಎಂಬ ಸಿಹಿ ಸುದ್ದಿಯನ್ನು ಸಚಿವ ಕೆ.ಎಚ್.ಮುನಿಯಪ್ಪ ಹೇಳಿಕೆಯನ್ನು ನೀಡಿದ್ದಾರೆ. ಈಗಾಗಲೇ ಬಿಪಿಎಲ್ ಹಾಗೂ ಎಪಿಎಲ್ ಕಾರ್ಡ್‌ಗಳಿಗೆ ಸಲ್ಲಿಕೆಯಾಗಿರುವ 2.95 ಲಕ್ಷ ಅರ್ಜಿಗಳನ್ನು ಮಾ.31 ರೊಳಗೆ ವಿಲೇವಾರಿ ಮಾಡಲು ಸೂಚಿಸಲಾಗಿದೆ.
ಹಾಗೆನೇ ಎ.1 ರಿಂದ ಹೊಸ ಕಾರ್ಡ್‌ಗಳಿಗೆ ಅರ್ಜಿ ಸ್ವೀಕಾರ ಮಾಡಲಾಗುವುದು ಎಂಬ ಆಶ್ವಾಸನೆ ನೀಡಿದ್ದಾರೆ.
ಅರ್ಹತೆ ಮತ್ತು ಮಾನದಂಡ
ಗ್ರಾಮೀಣ ಪ್ರದೇಶಗಳಲ್ಲಿ ಮೂರು ಹೆಕ್ಟೇರ್ ಕೃಷಿ ಭೂಮಿ, ನಗರ ಪ್ರದೇಶದಲ್ಲಿ 1000 ಚದರ ಅಡಿಗಿಂತ ಹೆಚ್ಚು ವಿಸ್ತೀರ್ಣದ ಪಕ್ಕಾ ಮನೆ ಇರುವವರಿಗೆ ಬಿಪಿಎಲ್ ಕಾರ್ಡ್ ನೀಡಲಾಗುವುದಿಲ್ಲ.
ಸರಕಾರಿ ಹಾಗೂ ಅನುದಾನಿತ ಸಂಸ್ಥೆಗಳಲ್ಲಿನ ಖಾಯಂ ನೌಕರರು, ಆದಾಯ ತೆರಿಗೆ, ಸೇವಾ ತೆರಿಗೆ, ಜಿಎಸ್‌ಟಿ, ವೃತ್ತಿ ತೆರಿಗೆ ಪಾವತಿಸುವ ಕುಟುಂಬಗಳಿಗೆ ಇವು ಲಭ್ಯವಿಲ್ಲ.
ಜೀವನೋಪಾಯಕ್ಕಾಗಿ ಟ್ರ್ಯಾಕ್ಟರ್, ಮ್ಯಾಕ್ಸಿಕ್ಯಾಬ್, ಟ್ಯಾಕ್ಸಿ ಚಲಾಯಿಸುವವರನ್ನು ಹೊರತು ಪಡಿಸಿ ನಾಲ್ಕು ಚಕ್ರದ ವಾಹನ ಹೊಂದಿರುವ ಕುಟುಂಬಕ್ಕೂ ಬಿಪಿಎಲ್ ಕಾರ್ಡ್ ಪಡೆಯುವ ಅರ್ಹತೆ ಇಲ್ಲ ಎಂದು ಸಚಿವ ಮುನಿಯಪ್ಪ ಅವರು ಹೇಳಿದ್ದಾರೆ.