Bantwala: ಅಪ್ರಾಪ್ತ ಬಾಲಕಿ ಜೊತೆ ಅನುಚಿತ ವರ್ತನೆ ತೋರಿದ ಹೋಟೆಲ್ ಮಾಲಿಕ; ಬಂಧನ

Bantwala: ಅಪ್ರಾಪ್ತ ಶಾಲಾ ಬಾಲಕಿಗೆ ದೈಹಿಕ ಹಿಂಸೆ ನೀಡಿದ ಘಟನೆಯೊಂದು ಸಜೀಪ ನಡು ಗ್ರಾಮದಲ್ಲಿ ನಡೆದಿದ್ದು, ಇದೀಗ ಆರೋಪಿ ಮೇಲೆ ಪೋಕ್ಸೋ ಪ್ರಕರಣ ದಾಖಲಾಗಿರುವ ಕುರಿತು ವರದಿಯಾಗಿದೆ. ಈ ಘಟನೆ ತಡವಾಗಿ ಬೆಳಕಿಗೆ ಬಂದಿದೆ.
ಇದನ್ನೂ ಓದಿ: Kagney Linn karter: ಖ್ಯಾತ ನೀಲಿ ಚಿತ್ರ ತಾರೆ ಆತ್ಮಹತ್ಯೆಗೆ ಶರಣು -ಕಾರಣ ಭಯಾನಕ!!
ಸಜೀಪ ನಡು ಗ್ರಾಮದ ಅಬ್ದುಲ್ಲಾ ಎಂಬುವವರೇ ಆರೋಪಿಯಾಗಿದ್ದು, ಅಪ್ರಾಪ್ತ ಶಾಲಾ ಬಾಲಕಿಗೆ ದೈಹಿಕ ಹಿಂಸೆಯಾದ ಕುರಿತು ಬಾಲಕಿಯ ತಾಯಿ ಗ್ರಾಮಾಂತರ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ. ಬಂಟ್ವಾಳ ಗ್ರಾಮಾಂತರ ಠಾಣಾ ಎಸ್.ಐ.ಮೂರ್ತಿ ಹಾಗೂ ಸಿಬ್ಬಂದಿಗಳು ಬಂಧನ ಮಾಡಿದ್ದಾರೆ ಎಂದು ವರದಿಯಾಗಿದೆ.