Karnataka Congress: ಕಾಂಗ್ರೆಸ್‌ ಶಾಸಕರು ರೆಸಾರ್ಟ್‌ಗೆ ಶಿಫ್ಟ್‌; ಏನು ಕಾರಣ

Bangalore: 135 ಸ್ಥಾನಗಳನ್ನು ಬಹುಮತದಿಂದ ಅಧಿಕಾರ ಪಡೆದ ಕಾಂಗ್ರೆಸ್‌ ಸರಕಾರ ಇದೀಗ ರಾಜ್ಯದಲ್ಲಿ ತನ್ನ ಎಲ್ಲಾ ಶಾಸಕರನ್ನು ಎರಡು ದಿನಗಳ ಕಾಲ ರೆಸಾರ್ಟ್‌ಗೆ ಶಿಫ್ಟ್‌ ಮಾಡಲು ನಿರ್ಧಾರ ಮಾಡಿರುವ ಕುರಿತು ವರದಿಯಾಗಿದೆ.

ಇದನ್ನೂ ಓದಿ: Aghori baba: ಪಿರಿಯಡ್ಸ್ ಆದ ಹೆಣ್ಣೊಂದಿಗೆ, ಹೆಣದೊಂದಿಗೆ ಸಂಭೋಗ ನಡೆಸುತ್ತಾರೆ ಅಘೋರಿಗಳು !!

ಫೆ.25 ರ ಭಾನುವಾರ ಕಾಂಗ್ರೆಸ್‌ನ ಎಲ್ಲಾ ಶಾಸಕರು ರೆಸಾರ್ಟ್‌ಗೆ ಶಿಫ್ಟ್‌ ಮಾಡಲಾಗುವುದು. ಫೆ.26 ರಂದು ಕಾಂಗ್ರೆಸ್‌ ಶಾಸಕಾಂಗ ಸಭೆಯನ್ನು ಖಾಸಗಿ ರೆಸಾರ್ಟ್‌ನಲ್ಲಿ ನಡೆಸಲಾಗುವ ಕುರಿತು ವರದಿಯಾಗಿದೆ. ಅನಂತರ ಫೆ.27 ರಂದು ಕಾಂಗ್ರೆಸ್‌ನ ಎಲ್ಲಾ ಶಾಸಕರು ನೇರವಾಗಿ ವಿಧಾನಸೌಧಕ್ಕೆ ಆಗಮಿಸಲಿದ್ದಾರೆ. ಈ ಕುರಿತು ಕಾಂಗ್ರೆಸ್‌ ಮುಖ್ಯ ಸಚೇತಕ ಅಶೋಕ ಪಟ್ಟಣ್‌ ಅವರು ತಮ್ಮ ಪಕ್ಷದ ಎಲ್ಲಾ ಶಾಸಕರಿಗೆ ಸೂಚನೆ ನೀಡಿದ್ದಾರೆ ಎಂದು ವರದಿಯಾಗಿದೆ.

ರೆಸಾರ್ಟ್‌ಗೆ ಶಿಫ್ಟ್‌ ಮಾಡಲು ಕಾರಣವೇನು?

ರಾಜ್ಯಸಭಾ ಚುನಾವಣಾ ರಣಕಣದ ಕುರಿತು ಚರ್ಚೆ ನಡೆಸಲಾಗುತ್ತಿದೆ. ವಿಧಾನಸಭಾ ಮೊಗಸಾಲೆಯಲ್ಲಿ ಕಾಂಗ್ರೆಸ್‌ ಅಭ್ಯರ್ಥಿ ಅಜಯ್‌ ಮಾಕನ್‌ ಅವರನ್ನು ಗೆಲ್ಲಿಸಲು ಸೂಚನೆ ನೀಡಲಾಗುತ್ತದೆ. ಹೀಗಾಗಿ ಶಾಸಕರ, ಸಚಿವರ ಮತಯಾಚನೆ ಮಾಡಲಾಗುತ್ತದೆ. ಈ ಸಂದರ್ಭದಲ್ಲಿ ಕಾಂಗ್ರೆಸ್‌ನ ಹಿರಿಯ ನಾಯಕರು ಕೂಡಾ ಭಾಗಿಯಾಗಲಿದ್ದಾರೆ. ಎಲ್ಲಾ ಶಾಸಕರಿಗೂ ರಾಜ್ಯಸಭೆ ಜೊತೆಗೆ ಲೋಕಸಭಾ ಚುನಾವಣಾ ಜವಾಬ್ದಾರಿಗಳನ್ನು ನೀಡಲಾಗುವುದು ಎಂಬ ಮಾಹಿತಿ ದೊರಕಿದೆಯೆಂದು ಮಾಧ್ಯಮವೊಂದು ಪ್ರಕಟ ಮಾಡಿದೆ.

Leave A Reply

Your email address will not be published.