Dr Manjunath: ಲೋಕಸಭಾ ಚುನಾವಣೆಯಲ್ಲಿ ಸ್ಪರ್ಧೆ – ಡಾ. ಮಂಜುನಾಥ್ ಕೊಟ್ರು ಬಿಗ್ ಅಪ್ಡೇಟ್
Dr Manjunath: ಮುಂಬರುವ ಲೋಕಸಭಾ ಚುಣಾವಣೆಯಲ್ಲಿ(Parliament election)ಜಯದೇವ ಆಸ್ಪತ್ರೆಯ ಮಾಜಿ ನಿರ್ದೇಶಕ ಡಾ. ಮಂಜುನಾಥ್ ಅವರನ್ನ ಕಣಕ್ಕಿಳಿಸುವ ಕುರಿತು ಚರ್ಚೆಗಳು ನಡೆಯುತ್ತಿವೆ. ಇದೀಗ ಈ ಬಗ್ಗೆ ಸ್ವತಃ ಮಂಜುನಾಥ್ ಅವರೇ ಬಿಗ್ ಅಪ್ಡೇಟ್ ನೀಡಿದ್ದಾರೆ.
ಇದನ್ನೂ ಓದಿ: Onion price: ಈರುಳ್ಳಿ ಬೆಲೆಯಲ್ಲಿ ಏಕಾಏಕಿ ಭಾರೀ ಏರಿಕೆ !!
ಡಾ. ಮಂಜುನಾಥ್(Dr manjunath) ಅವರು ಕೆಲವು ದಿನಗಳ ಹಿಂದಷ್ಟೇ ಜಯದೇವ ಹೃದ್ರೋಗ ಸಂಸ್ಥೆಯ ನಿರ್ದೇಶಕ ಸ್ಥಾನದಿಂದ ನಿವೃತ್ತಿ ಹೊಂದಿದ್ದರು. ವೈಧ್ಯಕೀಯ ಕ್ಷೇತ್ರದಲ್ಲಿ ಉತ್ತಮ ಸೇವೆ ಸಲ್ಲಿಸಿದ್ದು, ಎಲ್ಲಾ ಪಕ್ಷದ ನಾಯಕರಿಗೂ ಡಾ ಮಂಜುನಾಥ್ ಅವರು ಚಿರಪರಿಚಿತರು. ಡಾ. ಸಿಎನ್ ಮಂಜುನಾಥ್ ಅವರನ್ನು ರಾಷ್ಟ್ರ ರಾಜಕಾರಣಕ್ಕೆ ಕರೆತರಲು ದಳಪತಿಗಳು ಪ್ಲಾನ್ ನಡೆಸಿದ್ದು ಬಿಜೆಪಿ-ಜೆಡಿಎಸ್ ಮೈತ್ರಿ ಅಭ್ಯರ್ಥಿಯಾಗಿ ಕಣಕ್ಕಿಳಿಸಲು ಪ್ಲಾನ್ ಮಾಡಿದ್ದರು. ಇದೀಗ ಈ ಬಗ್ಗೆ ಮಂಜುನಾಥ್ ಅವರು ಪ್ರತಿಕ್ರಿಯಿಸಿ ಜನರು ನನ್ನ ಲೋಕಸಭಾ ಚುನಾವಣೆ (Lok Sabha Election) ಸ್ಪರ್ಧೆ ಬಗ್ಗೆ ಮಾತನಾಡುತ್ತಾ ಇದ್ದಾರೆ. ನಾನು ಕೂಡ ಅದೇ ಆಲೋಚನೆಯಲ್ಲಿದ್ದೀನಿ. ಆದರೆ ನಾನು ಇನ್ನೂ ಅದರ ಬಗ್ಗೆ ತೀರ್ಮಾನ ಮಾಡಿಲ್ಲ ಎಂದು ತಿಳಿಸಿದ್ದಾರೆ.
ಅಂದಹಾಗೆ ಲೋಕಸಭಾ ಚುನಾವಣೆ ಸ್ಪರ್ಧೆ ಬಗ್ಗೆ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ರಾಜಕೀಯಕ್ಕೆ ಬರಬೇಕಾ?, ಲೋಕಸಭಾಗೆ ನಿಲ್ಲಬೇಕೆಂದು ನಿರ್ಧಾರ ಮಾಡಿಲ್ಲ. ಹಲವು ಕಡೆ ಜನರು ಒತ್ತಡ ಹಾಕುತ್ತಾ ಇದ್ದಾರೆ. ಆದರೆ, ನಾನು ಮುಂದಿನ ದಿನಗಳಲ್ಲಿ ಸ್ಪರ್ಧೆಯ ಬಗ್ಗೆ ತೀರ್ಮಾನ ಮಾಡಿದರೆ ಹೇಳುತ್ತೇನೆ. ನಾನು ಈಗಲೂ ಅದೇ ಆಲೋಚನೆಯಲ್ಲಿಯೇ ಇದ್ದೀನಿ. ಲೋಕಸಭೆ ಪ್ರವೇಶ ಮಾಡುವುದು ಕೇವಲ ರಾಜಕೀಯ ಮೂಲಕವೇ ಅಲ್ಲ. ಲೋಕಸಭೆನೆ ಬೇರೆ, ರಾಜಕೀಯವೇ ಬೇರೆ ಎಂಬುದು ನನ್ನ ಅರ್ಥವಾಗಿದೆ. ಸದ್ಯದಲ್ಲೇ ತೀರ್ಮಾನ ತಿಳಿಸುತ್ತೇನೆ ಎಂದಿದ್ದಾರೆ.