Dhamasthala sowjanya case: ಧರ್ಮಸ್ಥಳ ಸೌಜನ್ಯ ಕೊಲೆ ಪ್ರಕರಣಕ್ಕೆ ಬಿಗ್ ಟ್ವಿಸ್ಟ್- ಮರು ತನಿಖೆ ಕುರಿತು ಸರ್ಕಾರಕ್ಕೆ ಕೋರ್ಟ್ ನಿಂದ ನೋಟಿಸ್ !!
Dharmasthala sowjanya case: 12 ವರ್ಷಗಳ ಹಿಂದೆ ಧರ್ಮಸ್ಥಳದ ನೇತ್ರಾವತಿ ಬಳಿ ಅತ್ಯಾಚಾರವಾಗಿ ಅನುಮಾನಸ್ಪದವಾಗಿ ಸಾವಿಗೀಡಾದ ಹಾಗೂ ನಾಡಿನಾದ್ಯಂತ ಸಂಚಲನ ಸೃಷ್ಟಿಸಿದ ಸೌಜನ್ಯಳ(Dharmasthala sowjanya case) ಅತ್ಯಾಚಾರ ಮತ್ತು ಕೊಲೆ ಪ್ರಕರಣಕ್ಕೆ ಬಿಗ್ ಟ್ವಿಸ್ಟ್ ಸಿಕ್ಕಿದೆ.
ಇದನ್ನೂ ಓದಿ: IRCTC App: ತತ್ಕಾಲ್ ಟಿಕೆಟ್ ಬುಕ್ ಮಾಡಲು ಇಲ್ಲಿದೆ ಕ್ಷಣಾರ್ಧದ ಉಪಾಯ
ಹೌದು, ಸೌಜನ್ಯಳ ಕುಟುಂಬದವರು ಹಾಗೂ ಸೌಜನ್ಯ ಪರ ಹೋರಾಟಗಾರರು ಈ ಪ್ರಕರಣವನ್ನು ಮರು ತನಿಖೆ ನಡೆಸಬೇಕೆಂದು ಭಾರೀ ಹೋರಾಟ ನಡೆಸುತ್ತಿದ್ದರು. ಈ ಕುರಿತಂತೆ ಕೋರ್ಟ್ ಮೆಟ್ಟಿಲನ್ನೂ ಏರಿದ್ದರು. ಇದೀಗ ಮರು ತನಿಖೆ ನಡೆಸಲು ಆದೇಶಿಸುವಂತೆ ಕೋರಿ ಮೃತಳ ತಂದೆ ಸಲ್ಲಿಸಿರುವ ಅರ್ಜಿ ಸಂಬಂಧ ಹೈಕೋರ್ಟ್ ರಾಜ್ಯ ಸರ್ಕಾರ ಮತ್ತು ಸಿಬಿಐಗೆ ನೋಟಿಸ್ ಜಾರಿ ಮಾಡಿದೆ.
ಅಂದಹಾಗೆ ಮೃತಳ ತಂದೆ ಸೌರ್ಜನ್ಯ ಚಂದಪ್ಪ ಗೌಡ ಸಲ್ಲಿಸಿದ್ದ ತಕರಾರು ಅರ್ಜಿ, ನ್ಯಾಯಮೂರ್ತಿ ಕೆ.ನಟರಾಜನ್ ಅವರ ನ್ಯಾಯಪೀಠದ ಮುಂದೆ ವಿಚಾರಣೆಗೆ ಬಂದಿತ್ತು. ಈ ವೇಳೆ ಕೆಲ ಕಾಲ ಅರ್ಜಿದಾರರ ಪರ ವಕೀಲರ ವಾದ ಆಲಿಸಿದ ನಂತರ ಅರ್ಜಿಯಲ್ಲಿ ಪ್ರತಿವಾದಿಯಾಗಿರುವ ರಾಜ್ಯ ಗೃಹ ಇಲಾಖೆ ಕಾರ್ಯದರ್ಶಿ, ರಾಜ್ಯ ಪೊಲೀಸ್ ಮಹಾ ನಿರ್ದೇಶಕರು, ಸಿಐಡಿ ಎಡಿಜಿಪಿ, ಅಪರಾಧ ಮತ್ತು ತಾಂತ್ರಿಕ ಸೇವಗಳ ವಿಭಾಗದ ಎಡಿಜಿಪಿ, ದಕ್ಷಿಣ ಕನ್ನಡ ಪೊಲೀಸ್ ವರಿಷ್ಠಾಧಿಕಾರಿ, ಸಿಐಡಿ ಉಪ ಪೊಲೀಸ್ ವರಿಷ್ಠಾಧಿಕಾರಿ, ಬೆಳ್ತಂಗಡಿ ಪೊಲೀಸ್ ಠಾಣಾಧಿಕಾರಿ ಮತ್ತು ಸಿಬಿಐಗೆ ನೋಟಿಸ್ ಜಾರಿಗೊಳಿಸಿತು.
ಇದರೊಂದಿಗೆ ಸಂತೋಷ್ ರಾವ್ ಅನ್ನು ಖುಲಾಸೆಗೊಳಿಸಿ ವಿಚಾರಣಾ ನ್ಯಾಯಾಲಯ ನೀಡಿರುವ ತೀರ್ಪು ಪ್ರಶ್ನಿಸಿ ಸಿಬಿಐ ಸಲ್ಲಿಸಿರುವ ಕ್ರಿಮಿನಲ್ ಮೇಲ್ಮನವಿಯನ್ನು ವಿಭಾಗೀಯ ಪೀಠದ ಮುಂದೆ ವಿಚಾರಣೆಗೆ ನಿಗದಿಪಡಿಸಬೇಕು ಎಂದು ಅರ್ಜಿದಾರರು ಪರ ವಕೀಲರು ಮನವಿ ಮಾಡಿದರು.ಅದನ್ನು ಪರಿಗಣಿಸಿರುವ ನ್ಯಾಯಪೀಠ, ರೋಸ್ಟರ್ ಪ್ರಕಾರ ಸೂಕ್ತ ವಿಭಾಗೀಯ ಪೀಠದ ಮುಂದೆ ಈ ಅರ್ಜಿಯನ್ನು ವಿಚಾರಣೆಗೆ ನಿಗದಿಪಡಿಸಲು ಮುಖ್ಯ ನ್ಯಾಯಮೂರ್ತಿಗಳಿಂದ ಅನುಮತಿ ಪಡೆಯುವಂತೆ ರಿಜಿಸ್ಟ್ರಿಗೆ ನ್ಯಾಯಪೀಠ ಸೂಚಿಸಿದೆ.