Uttar Pradesh: ಟ್ರ್ಯಾಕ್ಟರ್ ಟ್ರಾಲಿಯೊಂದು ಕೊಳಕ್ಕೆ ಬಿದ್ದ ಪರಿಣಾಮ ಕನಿಷ್ಠ 15 ಜನರು ಸಾವನ್ನಪ್ಪಿರುವ ಘೋರ ದುರಂತವೊಂದು ಉತ್ತರಪ್ರದೇಶದ ಕಸ್ಗಂಜ್ ಜಿಲ್ಲೆಯಲ್ಲಿ ಶನಿವಾರ ಘಟಿಸಿದೆ.
Sponsoredಮಾಘ ಪೂರ್ಣಿಮೆಯ ಶುಭದಿನದಂದು ಭಕ್ತರನ್ನು ಪುಣ್ಯಸ್ನಾನಕ್ಕಾಗಿ ಗಂಗಾನದಿಗೆ ಮಹಿಳೆಯರು ಮತ್ತು ಮಕ್ಕಳು ಸೇರಿ ಗ್ರಾಮಸ್ಥರು ಹೋಗುತ್ತಿದ್ದ ಸಂದರ್ಭದಲ್ಲಿ ಎದುರಿನಿದ ಬಂದ ಕಾರಿಗೆ ಡಿಕ್ಕಿ ಹೊಡೆಯುವುದನ್ನು ತಪ್ಪಿಸಲು ಹೋದ ಟ್ರ್ಯಾಕ್ಟರ್ ಚಾಲಕನಿಗೆ ಗಾಡಿ ನಿಯಂತ್ರಣ ತಪ್ಪಿದ್ದು, ಟ್ರ್ಯಾಕ್ಟರ್‌ನ ಹಿಂಬದಿ ಟ್ರಾಲಿ ಕೆರೆಗೆ ಬಿದ್ದಿದೆ.
Marriage AdSponsoredಈ ಘೋರ ದುರಂತದಲ್ಲಿ ಎಂಟು ಮಕ್ಕಳು ಮತ್ತು ಏಳು ಮಹಿಳೆಯರು ಸೇರಿ 15 ಮಂದಿ ಸಾವಿಗೀಡಾಗಿದ್ದಾರೆ. ಹಲವು ಮಂದಿಯನ್ನು ರಕ್ಷಣೆ ಮಾಡಲಾಗಿದ್ದು, ಅವರನ್ನೆಲ್ಲ ಕಾಸ್ಗಂಜ್‌ನ ಜಿಲ್ಲಾ ಆಸ್ಪತ್ರೆಗೆ ರವಾನೆ ಮಾಡಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.





Comments are closed.