Vijayadharani: ಬಿಜೆಪಿ ಸೇರಿದ ಕಾಂಗ್ರೆಸ್ ಶಾಸಕಿ !!

 

Vijayadharani: ಲೋಕಸಭಾ ಚುನಾವಣೆ ಹೊತ್ತಲ್ಲಿ ತಮಿಳುನಾಡಿನ ವಿಳವಂಕೋಡ್ ಕ್ಷೇತ್ರದ ಕಾಂಗ್ರೆಸ್ ಮಹಿಳಾ ಶಾಸಕಿ ಎಸ್​ ವಿಜಯಧರಣಿ (Vijayadharani) ಇಂದು ಬಿಜೆಪಿಗೆ ಸೇರ್ಪಡೆಯಾಗಿದ್ದಾರೆ.

ಹೌದು, ತಮಿಳುನಾಡಿನ(Tamilunadu) ಹಾಲಿ ಶಾಸಕಿ ಎಸ್.ವಿಜಯಾಧರಣಿ ಕಾಂಗ್ರೆಸ್ ಪಕ್ಷ ತೊರೆದು ಶನಿವಾರ ದೆಹಲಿ ಬಿಜೆಪಿ ಪ್ರಧಾನ ಕಚೇರಿಯಲ್ಲಿ ಪಕ್ಷದ ಪ್ರಧಾನ ಕಾರ್ಯದರ್ಶಿ ಅರುಣ್ ಸಿಂಗ್ ಮತ್ತು ಕೇಂದ್ರ ರಾಜ್ಯ ಸಚಿವ ಎಲ್.ಮುರುಗನ್ ನೇತೃತ್ವದಲ್ಲಿ ಪಕ್ಷಕ್ಕೆ ಸೇರ್ಪಡೆಯಾಗಿದ್ದರು.

ವಿಜಯಾಧರಣಿ ಕನ್ಯಾಕುಮಾರಿ ಲೋಕಸಭಾ ಕ್ಷೇತ್ರದ ವ್ಯಾಪ್ತಿಯ ವಿಲವನ್‌ಕೋಡ್‌ ಕ್ಷೇತ್ರದಲ್ಲಿ ಕಾಂಗ್ರೆಸ್​ನಿಂದ ಮೂರು ಬಾರಿ ಶಾಸಕರಾಗಿ ಆಯ್ಕೆಯಾಗಿದ್ದಾರೆ. ಈ ಹಿಂದೆ ವಿಲವನ್‌ಕೋಡ್‌ ಕ್ಷೇತ್ರದಲ್ಲಿ ಬಿಜೆಪಿ ಸಹ ಗೆಲುವು ಸಾಧಿಸಿತ್ತು ಎಂಬುದು ಗಮನಾರ್ಹವಾಗಿದೆ.

ಅಂದಹಾಗೆ ಈಚಿನ ದಿನಗಳಲ್ಲಿ ವಿಜಯಧರಣಿ ಅವರು ಕಾಂಗ್ರೆಸ್ ನಾಯಕತ್ವದ ವಿರುದ್ಧ ವಿಜಯಧರಣಿ ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದರು. ಈ ಬಗ್ಗೆ ಕೇಳಿದಾಗ, ‘ಪಕ್ಷದ ಆಂತರಿಕ ರಾಜಕೀಯವು ಕಾಂಗ್ರೆಸ್ ಪಕ್ಷದ ಪ್ರಮುಖ ದೌರ್ಬಲ್ಯಗಳಲ್ಲಿ ಒಂದಾಗಿದೆ ಎಂದು ಆರೋಪಿಸಿದ್ದರು.

 

1 Comment
  1. Hudson Stuart says

    Hudson Stuart

Leave A Reply

Your email address will not be published.