Accident: ಲಕ್ನೋದಲ್ಲಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಇಬ್ಬರ ದುರ್ಮರಣ

UP Accident: ಉತ್ತರ ಪ್ರದೇಶದ ಮುಖ್ಯಮಂತ್ರಿಗಳ ಬೆಂಗಾವಲು ಪಡೆಯ ಮಾರ್ಗದ ಭದ್ರತೆಗೆ ನಿಯೋಜಿಸಲಾಗಿದ್ದ ಲಕ್ನೋ ಜಿಲ್ಲಾಡಳಿತದ ವಾಹನವು ಬೀಡಾಡಿ ದನಕ್ಕೆ ಡಿಕ್ಕಿ ಹೊಡೆದು ಪಲ್ಟಿಯಾಗಿ 11 ಜನ ಗಾಯಗೊಂಡಿದ್ದರು ಅದರಲ್ಲಿ ಇಬ್ಬರು ಚಿಕಿತ್ಸೆಯ ಸಮಯದಲ್ಲಿ ಸಾವನ್ನಪ್ಪಿದ್ದಾರೆ.

 

ಅಪಘಾತದಲ್ಲಿ ಮೃತಪಟ್ಟವರನ್ನು ಮಹಿಳೆ ಮತ್ತು ಬಾಲಕಿ ಎಂದು ಗುರುತಿಸಲಾಗಿದೆ. ಇಬ್ಬರು ಮೃತರ ಕುಟುಂಬಗಳಿಗೆ ತಲಾ 2 ಲಕ್ಷ ರೂಪಾಯಿ ಮತ್ತು ಗಾಯಗೊಂಡವರಿಗೆ 50,000 ರೂಪಾಯಿ ಪರಿಹಾರ ನೀಡಲು ಮುಖ್ಯಮಂತ್ರಿ ಆದೇಶಿಸಿದ್ದಾರೆ.

ಗಾಯಗೊಂಡ 11 ಜನರಲ್ಲಿ ಐವರು ಪೊಲೀಸ್ ಸಿಬ್ಬಂದಿ ಮತ್ತು ಆರು ನಾಗರಿಕರು ಸೇರಿದ್ದಾರೆ. ಶನಿವಾರ ರಾತ್ರಿ ನಗರದ ಅರ್ಜುನಗಂಜ್ ಪ್ರದೇಶದಲ್ಲಿ ವಾಹನವು ರಸ್ತೆಯಲ್ಲಿ ಅಡ್ಡ ಬಂದ ಬೀಡಾಡಿ ದನಕ್ಕೆ ಡಿಕ್ಕಿ ಹೊಡೆದ ನಂತರ ಈ ಅಪಘಾತ ಸಂಭವಿಸಿದೆ ಎಂದು ಮೂಲಗಳು ತಿಳಿಸಿವೆ.

Leave A Reply

Your email address will not be published.