Shobha Karandlaje: ಗೋ ಬ್ಯಾಕ್ ಶೋಭಾ ಕರಂದ್ಲಾಜೆ ಪೋಸ್ಟರ್ ಅಭಿಯಾನ; ಯುವಕರ ವಿರುದ್ಧ FIR


Chikmagalur: ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ (Shobha Karandlaje) ವರ್ಸಸ್ ಮಾಜಿ ಶಾಸಕ ಸಿ.ಟಿ.ರವಿ ನಡುವೆ ಚಿಕ್ಕಮಗಳೂರು ಉಡುಪಿ ಲೋಕಸಭಾ ಕ್ಷೇತ್ರದ ಟಿಕೆಟ್ ಮಧ್ಯೆ ಫೈಟ್ ಜೋರಾಗಿದೆ. ಇದೀಗ ಗೋಬ್ಯಾಕ್, ಶೋಭಾ ಹಾಠಾವೋ ಎಂದು ಸಿಟಿ ರವಿ ಬೆಂಬಲಿಗರು ಇದೀಗ ಅಭಿಯಾನ ನಡೆಸಿದ್ದಾರೆ.

ಇದೀಗ ಈ ಅಭಿಯಾನ ಸಂಬಂಧ ಪೋಸ್ಟ್ ಅಂಟಿಸಿದ್ದ ನಾಲ್ವರು ಯುವಕರು ವಿರುದ್ಧ ಎಫ್‌ಐಆರ್ ದಾಖಲಾಗಿದೆ. ಶೋಭಾ ಅವರ ವಿರುದ್ಧ ಗೋ ಬ್ಯಾಕ್ ಶೋಭಾ, ಶೋಭಾ ಹಠಾವೋ ಬಿಜೆಪಿ ಬಚಾವೋ ಅಭಿಯಾನ ನಡೆಯುತ್ತಿದ್ದು, ಟಿಕೆಟ್ ನೀಡದಂತೆ ಕ್ಯಾಂಪೇನ್ ನಡೆಸಲಾಗಿದೆ. ಇದು ಬಿಜೆಪಿ ಕೆಂಗಣ್ಣಿಗೂ ಗುರಿಯಾಗಿದೆ.
ಇದೀಗ ಗೋಬ್ಯಾಕ್ ಕರಂದ್ಲಾಜೆ ಅಭಿಯಾನ ವಿಚಾರ ಸಂಬಂಧ ಪೋಸ್ಟರ್ ಅಂಟಿಸಿದ್ದ ನಾಲ್ವರ ಯುವಕರ ವಿರುದ್ಧ ಎಫ್‌ಐಆರ್ ದಾಖಲಾಗಿದೆ. ಬಸವನಳ್ಳಿ ಪೊಲೀಸರಿಂದ ಪೋಸ್ಟರ್ ಕುರಿತು ತನಿಖೆ ಆರಂಭವಾಗಿದೆ.
