S T somshekhar: ರಾಜ್ಯಸಭೆ ಚುನಾವಣೆ- ಬಿಜೆಪಿ ಬಿಗ್ ಶಾಕ್ ಕೊಟ್ಟ ಎಸ್ ಟಿ ಸೋಮಶೇಖರ್

S T somshekhar: ಬಿಜೆಪಿಯ ಶಾಸಕರಾದರೂ ಕಾಂಗ್ರೆಸ್‌ ನಾಯಕರ ಜೊತೆ ಕಾಣಿಸಿಕೊಳ್ಳುತ್ತ ಸುದ್ದಿಯಾಗುವ ಯಶವಂತಪುರ ಬಿಜೆಪಿ ಶಾಸಕ ಎಸ್‌ಟಿ ಸೋಮಶೇಖರ್(S T Somshekhar)ಅವರು ರಾಜ್ಯಸಭೆ ಅಡ್ಡ ಮತದಾನ ಮೂಲಕ ಬಿಜೆಪಿ ಹಾಗೂ ಜೆಡಿಎಸ್‌ ಬಿಗ್‌ ಶಾಕ್‌ ನೀಡಿದ್ದಾರೆ.

ಇದನ್ನೂ ಓದಿ: Uttarpradesh: 17ರ ಹುಡುಗಿಗೆ ವಿವಾಹಿತನೊಂದಿಗೆ ಸಂಬಂಧ – ವಿಷ್ಯ ಗೊತ್ತಾಗುತ್ತಿದ್ದಂತೆ ಮಗಳನ್ನು ಕೊಂದೇ ಬಿಟ್ಟ ಅಪ್ಪ-ಅಮ್ಮ

ಹೌದು, ರಾಜ್ಯಸಭಾ ಚುನಾವಣೆಯಲ್ಲಿ(Rajyasabhe election)ಬಿಜೆಪಿ ಶಾಸಕ ಎಸ್‌ ಸಿ ಸೋಮಶೇಖರ್‌ ಕಾಂಗ್ರೆಸ್‌ ಅಭ್ಯರ್ಥಿ ಜಿ.ಸಿ.ಚಂದ್ರಶೇಖರ್‌(G C Chandrashekhar) ಗೆ ಮತ ಚಲಾಯಿಸಿದ್ದಾರೆಂದು ತಿಳಿದುಬಂದಿದೆ. ಇನ್ನೂ ಎಸ್‌ ಟಿ ಸೋಮಶೇಖರ್‌ ಅವರು ಕಾಂಗ್ರೆಸ್‌ ಗೆ ಅಡ್ಡ ಮತದಾನ ಮಾಡಿದ್ದಾರೆ ಎಂದು ಬಿಜೆಪಿ ಚುನಾವಣಾ ಏಜೆಂಟ್‌ರೊಬ್ಬರು ಖಚಿತಪಡಿಸಿದ್ದಾರೆ. ಈ ಮೂಲಕ ಕಾಂಗ್ರೆಸ್ ಅಭ್ಯರ್ಥಿಗೆ ಮತ ಹಾಕಿ ಬಿಜೆಪಿ ಶಾಸಕರೇ ಬಿಜೆಪಿಯ ವಿಪ್ ಉಲ್ಲಂಘಟನೆ ಮಾಡಿದ್ದಾರೆ.

ಮತದಾನಕ್ಕೂ ಮೊದಲು ಮಾಧ್ಯಮಗಳ ಜೊತೆ ಮಾತನಾಡಿದ ಅವರು ’11 ವರ್ಷದಿಂದ ಎಲ್ಲರಿಗೂ ಮತ ಹಾಕಿದ್ದೇನೆ. ಆದರೆ, ರಾಜ್ಯಸಭೆಗೆ ಆಯ್ಕೆ ಆದವರು ಒಂದು ರೂಪಾಯಿ ಅನುದಾನವನ್ನೂ ಕೊಟ್ಟಿಲ್ಲ. ಕಳೆದ ಬಾರಿ (ಹಾಲಿ ಹಣಕಾಸು ಸಚಿವೆ) ನಿರ್ಮಲಾ ಸೀತಾರಾಮನ್ ಅವರಿಗೆ ಮತ ಹಾಕಿದ್ದೆ. ಆಮೇಲೆ ನಿರ್ಮಲಾ ಸೀತಾರಾಮನ್ ನನಗೆ ಭೇಟಿಗೆ ಅಪಾಯಿಟ್ಮೆಂಟ್ ಕೂಡ ಕೊಡಲೇ ಇಲ್ಲ. ಹೀಗಾಗಿ ಈ ಸಲ ನೇರ ನೇರ ಹೇಳುತ್ತೇನೆ, ನಾನು ಈ ಬಾರಿ ಆತ್ಮಸಾಕ್ಷಿಯಂತೆ ಮತ ಹಾಕುತ್ತೇನೆ.’ ಎಂದು ಹೇಳಿದ್ದಾರೆ.

Leave A Reply

Your email address will not be published.