Rajasthan: ICU ನಲ್ಲಿ ಚಿಕಿತ್ಸೆ ಪಡೆಯುತ್ತಿದ್ದ 24ರ ಯುವತಿ ಮೇಲೆ ನರ್ಸ್ ಸಿಬ್ಬಂದಯಿಂದ ಅತ್ಯಾಚಾರ !!

Rajasthan: ಖಾಸಗಿ ಆಸ್ಪತ್ರೆಯೊಂದರ ಐಸಿಯುಗೆ ದಾಖಲಾಗಿದ್ದ 24 ವರ್ಷದ ಮಹಿಳೆಯೊಬ್ಬರ ಮೇಲೆ ನರ್ಸಿಂಗ್ ಸಹಾಯಕ ಅತ್ಯಾಚಾರವೆಸಗಿರವ ಅಘಾತಕಾರಿ ಘಟನೆಯೊಂದು ಬೆಳಕಿಗೆ ಬಂದಿದೆ.

ಇದನ್ನೂ ಓದಿ: Bengaluru: ಹಿರಿಯ ಐಪಿಎಸ್ ಅಧಿಕಾರಿಯ ವಿರುದ್ಧ ಮಾನಹಾನಿಕರ ಮಾಧ್ಯಮ ವರದಿ ಪ್ರಕಟಿಸದಂತೆ ತಡೆಯಾಜ್ಞೆ ನೀಡಿದ ಬೆಂಗಳೂರಿನ ಸಿವಿಲ್ ನ್ಯಾಯಾಲಯ

ಹೌದು, ರಾಜಸ್ಥಾನದ(Rajasthan) ಅಲ್ವಾರ್ ಜಿಲ್ಲೆಯಲ್ಲಿ ಮಂಗಳವಾರ ಖಾಸಗಿ ಆಸ್ಪತ್ರೆಯಲ್ಲಿ ಮನಮಿಡಿಯುವ ಘಟನೆಯೊಂದು ಬೆಳಕಿಗೆ ಬಂದಿದ್ದು, ಶ್ವಾಸಕೋಶದ ಸೋಂಕಿನಿಂದ ಮಹಿಳೆಯನ್ನು ಆಸ್ಪತ್ರೆಗೆ ದಾಖಲಿಸಲಾಗಿದ್ದು, ಐಸಿಯುನಲ್ಲಿ ಚಿಕಿತ್ಸೆ ನೀಡಲಾಗುತ್ತಿತ್ತು. ಈ ವೇಳೆ ಚಿರಾಗ್ ಯಾದವ್ ಮುಂಜಾನೆ 4 ಗಂಟೆ ಸುಮಾರಿಗೆ ಆಕೆಯ ಮೇಲೆ ಅತ್ಯಾಚಾರ ಎಸಗಿದ್ದಾನೆ ಎನ್ನಲಾಗಿದೆ.

ಅಂದಹಾಗೆ ಪತಿ ಮೊಬೈಲ್‌ಗೆ ಕರೆ ಮಾಡಿದ ನಂತರ ಮಹಿಳೆಗೆ ಪ್ರಜ್ಞೆ ಬಂದಿದೆ. ನಂತರ ಆಕೆ ತನ್ನ ಕುಟುಂಬಕ್ಕೆ ಮಾಹಿತಿ ನೀಡಿದ್ದಾರೆ. ಸಿಸಿಟಿವಿ ದೃಶ್ಯಾವಳಿಗಳನ್ನು ಪರಿಶೀಲಿಸಿದಾಗ, ಆರೋಪಿ ಹಾಸಿಗೆಗೆ ಹೋಗಿ ಕರ್ಟನ್‌ನಿಂದ ಮುಚ್ಚಿರುವುದು ಕಂಡುಬಂದಿದೆ. ಬಳಿಕ ಆರೋಪಿಯನ್ನು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದು, ಎಫ್‌ಐಆರ್ ದಾಖಲಾಗಿದ್ದು, ತನಿಖೆ ನಡೆಯುತ್ತಿದೆ ಎಂದು ಪೋಲೀಸರು ಹೇಳಿದ್ದಾರೆ.

Leave A Reply

Your email address will not be published.