Accident: ಮಧ್ಯಪ್ರದೇಶದಲ್ಲಿ ಪಿಕ್ ಅಪ್ ವಾಹನ ಪಲ್ಟಿ : 14 ಮಂದಿ ಭೀಕರ ಸಾವು
ಮಧ್ಯಪ್ರದೇಶದ ದಿಂಡೋರಿಯಲ್ಲಿ ಬುಧವಾರ ರಾತ್ರಿ ಪಿಕಪ್ ವಾಹನವೊಂದು ಪಲ್ಟಿಯಾದ ಪರಿಣಾಮ ಹದಿನಾಲ್ಕು ಜನರು ಸಾವನ್ನಪ್ಪಿದ್ದು, 21 ಮಂದಿ ಗಾಯಗೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಡಿಂಡೋರಿ ಜಿಲ್ಲೆಯ ಬಡ್ಜಾರ್ ಗ್ರಾಮದ ಬಳಿ ಮುಂಜಾನೆ 1:30 ರ ಸುಮಾರಿಗೆ ಗ್ರಾಮಸ್ಥರ ಗುಂಪೊಂದು ಕಾರ್ಯಕ್ರಮಕ್ಕೆ ತೆರಳಿ ವಾಪಸ್ ದೇವರಿ ಗ್ರಾಮಕ್ಕೆ ಬರುತ್ತಿದ್ದಾಗ ಈ ಅಪಘಾತ ಸಂಭವಿಸಿದೆ.
ಇದನ್ನೂ ಓದಿ: Crime News: ಸ್ವಂತ ಅತ್ತೆಯನ್ನೇ ಹತ್ಯೆಗೈದ ಬಿಟೆಕ್ ವಿದ್ಯಾರ್ಥಿ : ಗೋವಾದಲ್ಲಿ ಸ್ನೇಹಿತರೊಂದಿಗೆ ಪಾರ್ಟಿ
ಚಾಲಕನ ನಿಯಂತ್ರಣ ಕಳೆದುಕೊಂಡ ಕಾರಣ ಪಿಕಪ್ ವಾಹನವು ಪಲ್ಟಿಯಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಗಾಯಾಳುಗಳನ್ನು ಸ್ಥಳೀಯರು ಮತ್ತು ಪೊಲೀಸರು ಚಿಕಿತ್ಸೆಗಾಗಿ ಹತ್ತಿರದ ಸಮುದಾಯ ಆರೋಗ್ಯ ಕೇಂದ್ರಕ್ಕೆ ಕರೆದೊಯ್ದಿದ್ದಾರೆ. ಸುದ್ದಿ ತಿಳಿದ ಬಳಿಕ ಜಿಲ್ಲಾಧಿಕಾರಿ ಮತ್ತು ಪೊಲೀಸ್ ವರಿಷ್ಠಾಧಿಕಾರಿ ಕೂಡಲೇ ಸ್ಥಳಕ್ಕೆ ಆಗಮಿಸಿ ಪರಿಶೀಲನೆ ನಡೆಸಿದ್ದಾರೆ.
ಮುಖ್ಯಮಂತ್ರಿ ಡಾ. ಮೋಹನ್ ಯಾದವ್ ಅವರು ದಿಂಡೋರಿ ಜಿಲ್ಲೆಯಲ್ಲಿ ಸಂಭವಿಸಿದ ವಾಹನ ಅಪಘಾತದ ಕುರಿತು ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ. ಅಗಲಿದ ಆತ್ಮಗಳಿಗೆ ದೇವರು ಶಾಂತಿ ನೀಡಲಿ ಮತ್ತು ಕುಟುಂಬ ಸದಸ್ಯರಿಗೆ ಈ ಆಘಾತವನ್ನು ತಡೆದುಕೊಳ್ಳುವ ಶಕ್ತಿಯನ್ನು ನೀಡಲಿ ಎಂದು ಪ್ರಾರ್ಥಿಸಿದರು. ಘಟನೆಯಲ್ಲಿ ಗಾಯಗೊಂಡವರ ಕುಟುಂಬಗಳಿಗೆ ತಲಾ 4 ಲಕ್ಷ ರೂಪಾಯಿಗಳ ಆರ್ಥಿಕ ನೆರವು ನೀಡಲಾಗುವುದು ಎಂದು ಮುಖ್ಯಮಂತ್ರಿಗಳು ತಿಳಿಸಿದ್ದಾರೆ.