Education News: ನಾಳೆ ಪರೀಕ್ಷೆ, ದ್ವಿತೀಯ ಪಿಯುಸಿ ವಿದ್ಯಾರ್ಥಿಗಳಿಗೆ ಮಹತ್ವದ ಸೂಚನೆ
2024 ರ ಸಾಲಿನ ದ್ವಿತೀಯ ಪಿ.ಯು.ಸಿ ವಾರ್ಷಿಕ ಪರೀಕ್ಷೆಗಳು ನಡೆಯುವ ಸಲುವಾಗಿ ಪರೀಕ್ಷಾ ಕೇಂದ್ರದ ಸುತ್ತಲೂ 200 ಮೀಟರ್ ವ್ಯಾಪ್ತಿಯಲ್ಲಿ ನಿಷೇಧಾಜ್ಞೆಯನ್ನು ಜಾರಿ ಮಾಡಲಾಗಿದೆ.
ರಾಜ್ಯಾದ್ಯಂತ ಮಾರ್ಚ್ 1 ರಿಂದ 22 ರಂದು ಪಿಯುಸಿ ಪರೀಕ್ಷೆಗಳನ್ನು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಲಿ ನಡೆಸಲಿದೆ. 10.30 ರಿಂದ 1.30 ರ ಅವಧಿಯಲ್ಲಿ ಪರೀಕ್ಷೆಗಳು ನಡೆಯಲಿವೆ. ಪರೀಕ್ಷಾ ಕೇಂದ್ರದಲ್ಲಿ ಯಾವುದೇ ಆಕ್ರಮ ನಡೆಯದಂತೆ ಕ್ರಮ ವಹಿಸಲಾಗಿದೆ.
ಪರೀಕ್ಷಾ ಕೇಂದ್ರದ 200 ಮೀಟರ್ ಒಳಗೆ ಎಸ್.ಟಿ.ಡಿ., ಮೊಬೈಲ್ ಪೇಜರ್, ಝರಾಕ್ಸ್, ಟೈಪಿಂಗ್ ಅಂಗಡಿಗಳನ್ನು ನಿಷೇಧ ಮಾಡಲಾಗಿದೆ. ಪರೀಕ್ಷಾ ಮೇಲ್ವಿಚಾರಕರು ಹಾಗೂ ಪಾಸ್ ಪಡೆದವರು ಮಾತ್ರ ಪರೀಕ್ಷಾ ಕೇಂದ್ರದೊಳಗೆ ಪ್ರವೇಶವನ್ನು ನಿಷೇಧ ಮಾಡಲಾಗಿದೆ. ಹೊರಗಿನಿಂದ ಯಾವುದೇ ಕಾಫಿ ಮಾಡುವ ಮಾದರಿಯ ವಸ್ತುಗಳನ್ನು ನಿಷೇಧಿಸಲಾಗಿದೆ. ಮಾರಕಾಸ್ತ್ರಗಳನ್ನು ಹಿಡಿದು ತಿರುಗಾಡುವುದನ್ನು ನಿಷೇಧಿಸಲಾಗಿದೆ. ಇದು ಮದುವೆ, ಶವ ಸಂಸ್ಕಾರ, ಧಾರ್ಮಿಕ ಕಾರ್ಯಗಳಿಗೆ ಅನ್ವಯ ಆಗುವುದಿಲ್ಲ ಎಂದು ಮಂಡಳಿ ತಿಳಿಸಿದೆ.
ಪರೀಕ್ಷೆ ಬರೆಯಲು ಹೋಗುವ ವಿದ್ಯಾರ್ಥಿಗಳಿಗೆ ಪರೀಕ್ಷೆ ಇರುವ ದಿನ ಬಿಎಂಟಿಸಿ, ಕೆಎಸ್ ಆರ್ ಟಿಸಿ, ಸಾಮಾನ್ಯ ಮತ್ತು ವೇಗದೂತ ಬಸ್ ಗಳಲ್ಲಿ ಉಚಿತ ಪ್ರಯಾಣ ಸೇವೆಯನ್ನು ನೀಡಲಾಗಿದೆ.
ದ್ವಿತೀಯ ಪಿಯುಸಿ ಪರೀಕ್ಷೆಯ ವೇಳಾಪಟ್ಟಿ ಕೆಳಗಿನಂತಿದೆ.
ಪರೀಕ್ಷಾ ಸಮಯ: ಬೆಳಗ್ಗೆ 10.15ಕ್ಕೆ ಪರೀಕ್ಷೆ ಆರಂಭವಾಗಿ 1.30ಕ್ಕೆ ಮುಕ್ತಾಯ
01-03-2024 ರಂದು ಶುಕ್ರವಾರ ಕನ್ನಡ ಹಾಗೂ ಅರೇಬಿಕ್ ಪರೀಕ್ಷೆ
04-03-2024 ರಂದು ಸೋಮವಾರ, ಗಣಿತ ಪರೀಕ್ಷೆ
05-03-2024 ರಂದು ರಾಜ್ಯ ಶಾಸ್ತ್ರ, ಸಂಖ್ಯಾಶಾಸ್ತ್ರ ಪರೀಕ್ಷೆ
06-03-2024 ರಂದು ಮಾಹಿತಿ ತಂತ್ರಜ್ಞಾನ, ರೀಟೈಲ್, ಆಟೋ ಮೊಬೈಲ್,ಪರೀಕ್ಷೆ
07-03-2024 ರಂದು ಇತಿಹಾಸ ಹಾಗೂ ಭೌತಶಾಸ್ತ್ರ ಪರೀಕ್ಷೆ
09-03-2024 ಐಚ್ಛಿಕ ಕನ್ನಡ,ಲೆಕ್ಕಶಾಸ್ತ್ರ, ಭೂಗರ್ಭ ಶಾಸ್ತ್ರ,ಗೃಹ ವಿಜ್ಞಾನ ಪರೀಕ್ಷೆ
11-03-2024 ರಂದು ತರ್ಕಶಾಸ್ತ್ರ,ವ್ಯವಹಾರ ಅಧ್ಯಯನ ಪರೀಕ್ಷೆ
13-03-2024 ರಂದು ಇಂಗ್ಲಿಷ್ ಪರೀಕ್ಷೆ
15-03-2024 ರಂದು ಹಿಂದೂಸ್ತಾನಿ ಸಂಗೀತ, ಮನಃಶಾಸ್ತ್ರ, ರಸಾಯನ ಶಾಸ್ತ್ರ, ಮೂಲಗಣಿತ ಪರೀಕ್ಷೆ
16-03-2024 ರಂದು ಅರ್ಥಶಾಸ್ತ್ರ ಪರೀಕ್ಷೆ
18-03-2024 ರಂದು ಭೂಗೋಳ ಶಾಸ್ತ್ರ, ಜೀವಶಾಸ್ತ್ರ ಪರೀಕ್ಷೆ
20-03-2024 ರಂದು ಸಮಾಜಶಾಸ್ತ್ರ, ವಿದ್ಯುನ್ಮಾನ ಶಾಸ್ತ್ರ, ಗಣಕ ವಿಜ್ಞಾನ ಪರೀಕ್ಷೆ
22-03-2024 ರಂದು ಹಿಂದಿ ಪರೀಕ್ಷೆ