CM Siddaramaiah: ಬೆಂಗಳೂರಿನ ರಾಮೇಶ್ವರಂ ಕೆಫೆಯಲ್ಲಿ ಸ್ಪೋಟ ಪ್ರಕರಣ- ಸಿಎಂ ಸಿದ್ಧರಾಮಯ್ಯ ಸ್ಪೋಟಕ ಮಾಹಿತಿ ಬಹಿರಂಗ !!

Share the Article

 

CM Siddaramaiah: ಬೆಂಗಳೂರಿನ ರಾಮೇಶ್ವರಂ ಕೆಫೆಯಲ್ಲಿ ನಡೆದ ಸ್ಪೋಟಕ ಕುರಿತು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಅಚ್ಚರಿ ವಿಚಾರ ಬಹಿರಂಗಪಡಿಸಿದ್ದು, ಕೆಫೆಯಲ್ಲಿ ಬಾಂಬ್ ಸ್ಫೋಟ ಸಂಭವಿಸಿದೆ ಎಂದು ದೃಢಪಡಿಸಿದ್ದಾರೆ.

ಹೌದು, ಬೆಂಗಳೂರಿನ(Bengaluru) ಕುಂದಲಹಳ್ಳಿ ಗೇಟ್‌ ಸಮೀಪ ಇರುವ ರಾಮೇಶ್ವರಂ ಕೆಫೆಯಲ್ಲಿ ನಡೆದ ಸ್ಫೋಟ ಪ್ರಕರಣ ದಲ್ಲಿ ಐಇಡಿ ಬಳಕೆ ಮಾಡಿರುವುದನ್ನು ಸಿಎಂ ಸಿದ್ದರಾಮಯ್ಯ(CM Siddaramaiah)ಸ್ಪಷ್ಟಪಡಿಸಿದ್ದಾರೆ. ಅಲ್ಲದೆ ಕಡಿಮೆ ತೀವ್ರತೆಯ ಸುಧಾರಿತ ಸ್ಫೋಟಕ ಸಾಧನ ಬಾಂಬ್ ಸ್ಪೋಟಗೊಂಡಿದೆ ಎಂದು ಹೇಳಿದ್ದಾರೆ.

ಈ ಕುರಿತು ಮಾತನಾಡಿದ ಅವರು ಇಂತಹ ಘಟನೆಗಳು ಎಂದಿಗೂ ನಡೆಯಬಾರದು. ಎಲ್ಲಾ ಕಾಲದಲ್ಲಿಯೂ ನಡೆಯುತ್ತದೆ. ನಡೆಯಬಾರದು ನಮ್ಮ ಸರ್ಕಾರದ ಅವಧಿಯಲ್ಲಿ ಮೊದಲ ಬಾರಿಗೆ ಇಂತಹ ಘಟನೆ ನಡೆದಿದೆ. ಸ್ಪೋಟದ ಸ್ಥಳದಲ್ಲಿ ನೆಟ್‌ ಬೋಲ್ಟ್‌ ಪತ್ತೆಯಾಗಿದೆ. ಯಾವುದೇ ಗಂಭೀರ ಹಾನಿಯಾಗಿಲ್ಲ. ಅದೃಷ್ಟವಶಾತ್‌ ಯಾವುದೇ ಪ್ರಾಣಪಾಯ ಹಾನಿಯಾಗಿಲ್ಲ ಎಂದಿದ್ದಾರೆ.

ಅಲ್ಲದೆ ಆರಂಭಿಕ ವರದಿಗಳು ಚೀಲದಲ್ಲಿದ್ದ ವಸ್ತುವು ಕೆಫೆಯಲ್ಲಿ ಸ್ಫೋಟಕ್ಕೆ ಕಾರಣವಾಯಿತು ಎಂದು ಸೂಚಿಸಿತ್ತು. ಪರಿಸ್ಥಿತಿಯನ್ನು ಪರಿಶೀಲಿಸಲು ರಾಜ್ಯ ಗೃಹ ಸಚಿವರು ಕೆಫೆಗೆ ತೆರಳುತ್ತಿದ್ದಾರೆ. ನಾನು ಕೂಡ ಅಧಿಕಾರಿಗಳಲ್ಲಿ ಮಾಹಿತಿ ಪಡೆದಿದ್ದೇನೆ. ಪರಿಶೀಲನೆ ನಡೆಸಿ ತನಿಖೆ ಆರಂಭಿಸಿದ್ಧಾರೆ ಎಂದು ಹೇಳಿದ್ದಾರೆ.

Leave A Reply

Your email address will not be published.