BJP : ಬಿಜೆಪಿಯ ಈ 100 ಹಾಲಿ ಸಂಸದರಿಗೆ ಲೋಕಸಭಾ ಟಿಕೆಟ್ ಇಲ್ಲ!!

Share the Article

 

BJP: ಲೋಕಸಭಾ ಚುನಾವಣೆಯಲ್ಲಿ ಈ ಬಾರಿ ಹಲವು ಹಾಲಿ ಸಂಸದರಿಗೆ ಟಿಕೆಟ್‌ ಸಿಗಲ್ಲ ಎಂಬ ಚರ್ಚೆ ನಡೆಯುತ್ತಿದೆ. ಈ ಬೆನ್ನಲ್ಲೇ ಬಿಜೆಪಿ(BJP) 100 ಹಾಲಿ ಸಂಸದರಿಗೆ ಟಿಕೆಟ್ ಇಲ್ಲ ಎಂಬ ಸುದ್ದಿಯೂ ಭಾರೀ ಸದ್ದುಮಾಡುತ್ತಿದೆ.

ಹೌದು, ಗುರುವಾರ ರಾತ್ರಿ ಬಿಜೆಪಿ ಕೇಂದ್ರ ಕಚೇರಿಯಲ್ಲಿ ಪ್ರಧಾನಿ ನರೇಂದ್ರ ಮೋದಿ (Narendra Modi) ಮತ್ತು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ (JP Nadda) ನೇತೃತ್ವದಲ್ಲಿ ಕೇಂದ್ರ ಚುನಾವಣಾ ಸಮಿತಿ ಸಭೆ (ಸಿಇಸಿ) ನಡೆದಿದ್ದು, 5 ವರ್ಷದ ಅವಧಿಯಲ್ಲಿ ಸಾಧನೆ ಮಾಡದೇ ಇರುವ ಸಂಸದರಿಗೆ ಮತ್ತೆ ಟಿಕೆಟ್‌ ನೀಡದೇ ಇರುವ ತೀರ್ಮಾನಕ್ಕೆ ಬರಲಾಗಿದೆ ಎಂದು ವರದಿಯಾಗಿದೆ.

ಅಂದಹಾಗೆ ಪ್ರಧಾನಿ ಮೋದಿ ರಾತ್ರಿ 11 ಗಂಟೆಗೆ ಕೇಂದ್ರ ಕಚೇರಿಗೆ ಬಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಮತ್ತು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ ಅವರ ಜೊತೆ ಬೆಳಗಿನ ಜಾವ 3:30 ರ ತನಕ ಚಿಂತನ ಮಂಥನ ನಡೆಸಿದರು ಎನ್ನಲಾಗಿದೆ. ಈ ಸಭೆಯಲ್ಲಿ ಬಿಜೆಪಿಯ ಮೊದಲ ಪಟ್ಟಿಯ ಅಂತಿಮ ರೂಪುರೇಷೆ ನೀಡಲಾಗಿದ್ದು, ಇಂದು ಅಥವಾ ನಾಳೆ ಮೊದಲ ಪಟ್ಟಿ ಬಿಡುಗಡೆ ಆಗುವ ನಿರೀಕ್ಷೆ ಇದೆ.

Leave A Reply