PSI Exam: PSI ರೀ ಎಕ್ಸಾಂ ರಿಸಲ್ಟ್ ಮಾಹಿತಿ
ಬೆಂಗಳೂರು: ಕರ್ನಾಟಕ ಪರೀಕ್ಷಾ ಪ್ರಾಧಿಕಾರ(ಕೆಇಎ) ನಡೆಸಿದ್ದ ಪಿಎಸ್ಐ ಮರು ಪರೀಕ್ಷೆಯ ಫಲಿತಾಂಶ ಶುಕ್ರವಾರ ಪ್ರಕಟಗೊಂಡಿದೆ.
ಇದನ್ನೂ ಓದಿ: Supreme Court: ಸಂಸದರು, ಶಾಸಕರ ಮೇಲೆ ಡಿಜಿಟಲ್ ನಿಗಾ; ಸುಪ್ರೀಂಕೋರ್ಟ್ ಮಹತ್ವದ ತೀರ್ಪು
ಒಟ್ಟು 35,823 ಮಂದಿ ಪರೀಕ್ಷೆ ತೆಗೆದುಕೊಂಡಿದ್ದರು. ಅವರಲ್ಲಿ ವಿವಿಧ ಕಾರಣಗಳಿಂದಾಗಿ 33 ಮಂದಿಯ ಒಎಂಆರ್ ಪ್ರತಿಗಳು ತಿರಸ್ಕೃತಗೊಂಡಿವೆ ಎಂದು ಕೆಇಎ ಕಾರ್ಯನಿರ್ವಾಹಕ ನಿರ್ದೇಶಕಿ ಎಸ್.ರಮ್ಯಾ ತಿಳಿಸಿದ್ದಾರೆ. ಅಭ್ಯರ್ಥಿಗಳು ತೆಗೆದುಕೊಂಡಿರುವ ಅಂಕಗಳನ್ನು ವೆಬ್ ಸೈಟ್ ನಲ್ಲಿ ಪ್ರಕಟಿಸಿದ್ದು,
ಈ ಬಗ್ಗೆ ಆಕ್ಷೇಪಗಳಿದ್ದಲ್ಲಿ ಮಾ.5ರೊಳಗೆ ಕೆಇಎಗೆ ಇ-ಮೇಲ್ ಮೂಲಕ ಸಲ್ಲಿಸಬೇಕು. ಅದರ ನಂತರ ಅಂತಿಮ ಪಟ್ಟಿಯನ್ನು ಪ್ರಕಟಿಸಿ, ನಂತರ ಗೃಹ ಇಲಾಖೆಗೆ ಸಲ್ಲಿಸಲಾಗುವುದು ಎಂದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಬೆಂಗಳೂರಿನ 117 ಪರೀಕ್ಷಾ ಕೇಂದ್ರಗಳಲ್ಲಿ ಜನವರಿ 23ರಂದು ಮರು ಪರೀಕ್ಷೆ ನಡೆದಿತ್ತು. ಫೆ.23ರಂದು ಕೀ ಉತ್ತರಗಳನ್ನು ಬಿಡುಗಡೆ ಮಾಡಲಾಗಿತ್ತು.