Parliament Election: ಬಿಜೆಪಿಯ 100 ಅಭ್ಯರ್ಥಿಗಳ ಮೊದಲ ಪಟ್ಟಿ ಪ್ರಕಟ

ಆಧುನಿಕ ತಂತ್ರಜ್ಞಾನ, ನಮೋ ಆ್ಯಪ್‌ನಲ್ಲಿ ಕ್ಷೇತ್ರದ ಜನರ ಅಭಿಪ್ರಾಯ ಸಂಗ್ರಹ, ಕಾರ್ಯಕರ್ತರ ಸಲಹೆಗಳನ್ನು ಆಧರಿಸಿದ ಮಾನದಂಡಗಳ ಮೂಲಕ ರೂಪಿಸಲಾದ ಆಯ್ಕೆ ಪ್ರಕ್ರಿಯೆಗಳ ಮೂಲಕ ಮುಂಬರುವ ಲೋಕಸಭಾ ಚುನಾವಣೆಗೆ 100 ಅಭ್ಯರ್ಥಿಗಳ ಮೊದಲ ಪಟ್ಟಿಯನ್ನು ಅಂತಿಮಗೊಳಿಸಿರುವ ಬಿಜೆಪಿ, ಮುಂದಿನ ಒಂದೆರೆಡು ದಿನದಲ್ಲಿ ಅಧಿಕೃತವಾಗಿ ಪ್ರಕಟಿಸಲು ನಿರ್ಧರಿಸಿದೆ ಎನ್ನಲಾಗಿದೆ.

ಇದನ್ನೂ ಓದಿ: Bengaluru: ವಿಮಾನದಲ್ಲಿ ಬೆಂಗಳೂರಿನ ಉದ್ಯಮಿಗೆ ಎಕ್ಸ್ ಪೈರ್ ಆದ ಮಿಲ್ಕ್ ಶೇಕ್ ನೀಡಿದ ವಿಮಾನಯಾನ ಸಂಸ್ಥೆ : 60,000 ದಂಡ ವಿಧಿಸಿದ ನ್ಯಾಯಲಯ

ಹೊಸದಿಲ್ಲಿಯ ಬಿಜೆಪಿ ಕೇಂದ್ರ ಕಚೇರಿಯಲ್ಲಿ ಶುಕ್ರವಾರ ನಸುಕಿನವರೆಗೂ ನಡೆದ ಪಕ್ಷದ ಕೇಂದ್ರೀಯ ಚುನಾವಣಾ ಸಮಿತಿ ಸಭೆಯಲ್ಲಿ ಸುದೀರ್ಘ ಸಮಾಲೋಚನೆ ಬಳಿಕ ಅಭ್ಯರ್ಥಿಗಳ ಪಟ್ಟಿಯನ್ನು ಅಖೈರುಗೊಳಿಸಿದೆ ಎಂದು ಮೂಲಗಳು ತಿಳಿಸಿವೆ.

ಪ್ರಧಾನಿ ಮೋದಿ ನೇತೃತ್ವದಲ್ಲಿ ನಡೆದ ಮ್ಯಾರಥಾನ್ ಸಭೆಯಲ್ಲಿ ಲೋಕಸಭೆ ಅಭ್ಯರ್ಥಿಗಳ ಆಯ್ಕೆ ಬಗ್ಗೆ ಚರ್ಚೆ ನಡೆಸಲಾಯಿತು. ಬಿಜೆಪಿ ಅಧ್ಯಕ್ಷ ನಡ್ಡಾ, ಗೃಹ ಸಚಿವ ಅಮಿತ್ ಶಾ, ರಕ್ಷಣಾ ಸಚಿವ ರಾಜನಾಥ್ ಸಿಂಗ್ ಸೇರಿದಂತೆ ಹಲವು ನಾಯಕರು ಸಭೆಯಲ್ಲಿ ಪಾಲ್ಗೊಂಡಿದ್ದರು. ಮೂಲಗಳ ಪ್ರಕಾರ ವಾರಾಣಸಿಯಿಂದ ಮೋದಿ, ಗುಜರಾತ್‌ನ ಗಾಂಧಿನಗರದಿಂದ ಅಮಿತ್ ಶಾ, ಲಖನೌದಿಂದ ರಾಜನಾಥ್ ಸಿಂಗ್, ಅಮೇಠಿಯಿಂದ ಸ್ಮೃತಿ ಇರಾನಿ ಕಣಕ್ಕಿಳಿಯುವುದು ಬಹುತೇಕ ನಿಶ್ಚಿತವಾಗಿದೆ.

ರಾಜ್ಯಸಭೆ ಸದಸ್ಯರಾಗಿದ್ದ ಕೆಲವು ಸಚಿವರನ್ನು ಲೋಕಸಭಾ ಅಖಾಡಕ್ಕಿಳಿಸಲು ಬಿಜೆಪಿ ನಿರ್ಧರಿಸಿದೆ. ಸಚಿವರಾದ ನಿರ್ಮಲಾ ಸೀತಾರಾಮನ್, ಭೂಪೇಂದ್ರ ಯಾದವ್, ಎಸ್.ಜೈಶಂಕರ್, ಮನ್ಸುಖ್ ಮಂಡಾವೀಯಾ, ಜ್ಯೋತಿರಾದಿತ್ಯ ಸಿಂಧಿಯಾ, ಸರಬಾನಂದ್ ಸೋನಾವಾಲ್, ವಿ.ಮುರಳೀಧರನ್ ಅವರನ್ನು ಕಣಕ್ಕಳಿಸುವ ಬಗ್ಗೆ ಗುರುವಾರದ ಸಭೆಯಲ್ಲಿ ಚರ್ಚಿಸಲಾಗಿದೆ.

Leave A Reply

Your email address will not be published.