Rape News: ಜಾರ್ಖಂಡ್ ದುಮಕಾದಲ್ಲಿ ಸ್ಪೇನ್ ಮೂಲದ ವಿದೇಶಿ ಪ್ರವಾಸಿಗರ ಮೇಲೆ ಸಾಮೂಹಿಕ ಅತ್ಯಾಚಾರ

ಜಾರ್ಖಂಡ್ನ ದುಮ್ಕಾ ಜಿಲ್ಲೆಯಲ್ಲಿ ಶುಕ್ರವಾರ ರಾತ್ರಿ ಸ್ಪೇನ್ ನ ವಿದೇಶಿ ಪ್ರವಾಸಿಗರ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಹಂಸ್ದಿಹಾ ಪೊಲೀಸ್ ಠಾಣಾ ಪ್ರದೇಶದ ಕುರುಮಹತ್ ನಲ್ಲಿ ಈ ಘಟನೆ ಸಂಭವಿಸಿದೆ, ಅಲ್ಲಿ ಪ್ರವಾಸಿ ದಂಪತಿಗಳು ತಾತ್ಕಾಲಿಕ ಟೆಂಟ್ ನಲ್ಲಿ ರಾತ್ರಿ ಮಲಗಿದ್ದ ವೇಳೆ ಈ ಘಟನೆ ನಡೆದಿದೆ ಎಂದು ಮೂಲಗಳು ತಿಳಿಸಿವೆ.

 

ಘಟನೆಯ ಬಗ್ಗೆ ಹೆಚ್ಚಿನ ವಿವರಗಳನ್ನು ತನಿಖೆಯ ನಂತರ ನೀಡಲಾಗುವುದು ಎಂದು ಜರಮುಂಡಿ ಉಪವಿಭಾಗದ ಪೊಲೀಸ್ ಅಧಿಕಾರಿ ಸಂತೋಷ್ ಕುಮಾರ್ ತಿಳಿಸಿದ್ದಾರೆ.

ಈ ದಂಪತಿಗಳು ಬಾಂಗ್ಲಾದೇಶದಿಂದ ದ್ವಿಚಕ್ರ ವಾಹನದಲ್ಲಿ ಆಗಮಿಸಿ ಬಿಹಾರದ ಮೂಲಕ ನೇಪಾಳಕ್ಕೆ ತೆರಳುತ್ತಿದ್ದರು ಎಂದು ವರದಿಯಾಗಿದೆ.

ಅಧಿಕಾರಿಯೊಬ್ಬರು, ಹೇಳಿರುವಂತೆ ಏಳರಿಂದ ಎಂಟು ಸ್ಥಳೀಯ ಯುವಕರು ಈ ಅಪರಾಧದಲ್ಲಿ ಭಾಗಿಯಾಗಿದ್ದು, ಅವರಲ್ಲಿ ಮೂವರನ್ನು ಬಂಧಿಸಲಾಗಿದೆ. ಉಳಿದ ಶಂಕಿತರ ಶೋಧ ಕಾರ್ಯ ನಡೆಯುತ್ತಿದೆ ಎಂದು ಅಧಿಕಾರಿ ತಿಳಿಸಿದ್ದಾರೆ. ಸಂತ್ರಸ್ತೆಯನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ತಿಳಿದು ಬಂದಿದೆ.

“ಈ ಘಟನೆಯ ಸಂಪೂರ್ಣ ಮಾಹಿತಿ ನನಗೆ ತಿಳಿದಿಲ್ಲ, ಈ ಅಪರಾಧದಲ್ಲಿ ಭಾಗಿಯಾಗಿರುವ ಎಲ್ಲಾ ದುಷ್ಕರ್ಮಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲು ಸರ್ಕಾರ ಬದ್ಧವಾಗಿದೆ” ಎಂದು ಎಂದು ರಾಜ್ಯ ಆರೋಗ್ಯ ಸಚಿವ ಬನ್ನಾ ಗುಪ್ತಾ ಸುದ್ದಿಗಾರರಿಗೆ ತಿಳಿಸಿದರು.

Leave A Reply

Your email address will not be published.