Parliment election: ಬಿಜೆಪಿ ಅಭ್ಯರ್ಥಿಗಳ ಪಟ್ಟಿ ರಿಲೀಸ್ ಆದ್ರೂ ಕರ್ನಾಟಕದ ಯಾವ ಕ್ಷೇತ್ರಕ್ಕೂ ಅಭ್ಯರ್ಥಿ ಘೋಷಣೆ ಇಲ್ಲ !!

Parliment election: ಲೋಕಸಭಾ ಚುನಾವಣೆಗೆ ಕೆಲವು ವಾರಗಳು ಮಾತ್ರ ಬಾಕಿಯಿದ್ದು, ಪಕ್ಷಗಳು ಚುನಾವಣೆಗೆ ಭರ್ಜರಿ ತಯಾರಿ ಆರಂಭಿಸಿವೆ. ಅಂತೆಯೇ ಬಿಜೆಪಿ(BJP) ತನ್ನ ಅಭ್ಯರ್ಥಿಗಳ ಮೊದಲ ಪಟ್ಟಿಯನ್ನು ಬಿಡುಗಡೆ ಮಾಡಿದ್ದು 195 ಕ್ಷೇತ್ರಗಳಿಗೆ ಅಭ್ಯರ್ಥಿಗಳನ್ನು ಘೋಷಿಸಿದ್ದು ಹಲವು ಕಡೆ ಅಚ್ಚರಿ ಅಭ್ಯರ್ಥಿಗಳನ್ನು ಕಣಕ್ಕಿಳಿಸಿದೆ. ಆದರೆ, ಕರ್ನಾಟಕದ ಒಂದು ಕ್ಷೇತ್ರಕ್ಕೂ ಕೂಡ ಅಭ್ಯರ್ಥಿಗಳನ್ನು ಘೋಷಿಸದೇ ಬಿಜೆಪಿ ಅಚ್ಚರಿ ಮೂಡಿಸಿದೆ.

ಇದನ್ನೂ ಓದಿ: Mangalore: ರಾತ್ರೋರಾತ್ರಿ ಪಿಲಿಚಾಮಂಡಿ ದೈವದ ಗುಡಿ ಧ್ವಂಸ ಮಾಡಿದ ಕಿಡಿಗೇಡಿಗಳು !!

ಹೌದು, ಬಿಜೆಪಿಯ ಮೊದಲ ಪಟ್ಟಿಯಲ್ಲಿ ಹಿರಿಯ ನಾಯಕರು, ಕೇಂದ್ರದ ಸಚಿವರ ಹೆಸರುಗಳಿವೆ. ಆದರೆ ಕರ್ನಾಟಕದ 28 ಲೋಕಸಭಾ ಕ್ಷೇತ್ರಗಳಿಗೆ( ಒಬ್ಬರೇ ಹೆಸರನ್ನು ಘೋಷಿಸಿಲ್ಲ. ಅದರಲ್ಲೂ ಕೇಂದ್ರದಲ್ಲಿ ಸಚಿವರಾಗಿರುವ ಪ್ರಲ್ಹಾದ ಜೋಶಿ, ಶೋಭಾ ಕರಂದ್ಲಾಜೆ, ಭಗವಂತ ಖೂಬಾ, ಎ. ನಾರಾಯಣಸ್ವಾಮಿ ಅವರಲ್ಲಿ ಇಬ್ಬರ ಹೆಸರಾದರೂ ಘೋಷಣೆಯಾಗಬಹುದು ಎನ್ನುವ ಲೆಕ್ಕಾಚಾರಗಳಿದ್ದವು. ಒಂದೇ ಒಂದು ಹೆಸರನ್ನೂ ವರಿಷ್ಠರು ಪರಿಗಣಿಸಿಲ್ಲ. ಇದಕ್ಕೆ ಹತ್ತಾರು ಕಾರಣಗಳನ್ನು ಬಿಜೆಪಿ ಕರ್ನಾಟಕದ ಮುಖಂಡರು ವ್ಯಾಖ್ಯಾನಿಸುತ್ತಿದ್ದಾರೆ.

ಹೀಗೆ ಕರ್ನಾಟಕದಲ್ಲಿ(Karnataka) ಬಿಜೆಪಿ ತನ್ನ ಮೊದಲ ಪಟ್ಟಿಯಲ್ಲಿ ಯಾವುದೇ ಅಭ್ಯರ್ಥಿ ಹೆಸರನ್ನು ಫೈನಲ್ ಮಾಡದೇ ಇರಲು ಕಾರಣ ಜೆಡಿಎಸ್(JDS) ಜೊತೆಗಿನ ಮೈತ್ರಿ ಲೆಕ್ಕಾಚಾರ ಎನ್ನಲಾಗಿದೆ. ಇನ್ನೂ ಕೂಡ ಸೀಟು ಹಂಚಿಕೆ ಇತ್ಯರ್ಥ ಆಗದಿರುವುದೇ ಇದಕ್ಕೆ ಕಾರಣ ಎನ್ನಲಾಗಿದೆ. ಅಲ್ಲದೆ ಕಳೆದ ವಿಧಾನಸಭೆ ಚುನಾವಣೆಯಲ್ಲಿ ಅನುಭವಿಸಿದ ಕಹಿಯ ಪಾಠವನ್ನು ವರಿಷ್ಠರು ಇನ್ನೂ ಮರೆತಂತೆ ಕಾಣುತ್ತಿಲ್ಲ. ಆಂತರಿಕ ತಿಕ್ಕಾಟ ಕಾರಣ ಬಿಜೆಪಿ ಕರ್ನಾಟಕದಲ್ಲಿ ಅಧಿಕಾರ ಕಳೆದುಕೊಂಡಿತ್ತು ಎಂಬ ಆರೋಪ ಇತ್ತು. ಹೀಗಾಗಿ ಇದೀಗ ಕರ್ನಾಟಕದಲ್ಲಿ ಎಲ್ಲರನ್ನೂ ವಿಶ್ವಾಸಕ್ಕೆ ಪಡೆದು ನಂತರ, ಲೋಕಸಭೆ ಚುನಾವಣೆಗೆ ಅಭ್ಯರ್ಥಿಗಳ ಪಟ್ಟಿ ಘೋಷಿಸಬಹುದು ಎನ್ನಲಾಗುತ್ತಿದೆ.

Leave A Reply

Your email address will not be published.