Home Karnataka State Politics Updates BJP: ಬಿಜೆಪಿ ವರಿಷ್ಠರ ಕೈಗೆ ಕರ್ನಾಟಕದ ಅಭ್ಯರ್ಥಿಗಳ ಪಟ್ಟಿ !!

BJP: ಬಿಜೆಪಿ ವರಿಷ್ಠರ ಕೈಗೆ ಕರ್ನಾಟಕದ ಅಭ್ಯರ್ಥಿಗಳ ಪಟ್ಟಿ !!

BJP

Hindu neighbor gifts plot of land

Hindu neighbour gifts land to Muslim journalist

BJP: ಲೋಕಸಭಾ ಚುನಾವಣೆ ನಿಮಿತ್ತ ರಾಜ್ಯ ಬಿಜೆಪಿಯು ಕರ್ನಾಟಕದ 28 ಕ್ಷೇತ್ರಗಳಿಗೆ ಸಂಭಾವ್ಯ ಅಭ್ಯರ್ಥಿಗಳನ್ನು ಆಯ್ಕೆ ಮಾಡಿ ಪಟ್ಟಿಯನ್ನು ದೆಹಲಿಯ ಹೈಕಮಾಂಡ್ ಗೆ ಕಳಿಸಿಕೊಟ್ಟಿದೆ.

ಇದನ್ನೂ ಓದಿ: Dakshina Kannada: ಕಡಬದ ಸರಕಾರಿ ಕಾಲೇಜು ಆವರಣದಲ್ಲಿ ವಿದ್ಯಾರ್ಥಿಗಳಿಗೆ ಆಸಿಡ್‌ ದಾಳಿ; ವಿದ್ಯಾರ್ಥಿನಿಯರು ಆಸ್ಪತ್ರೆಗೆ ದಾಖಲು

ಹೌದು, ಲೋಕಸಭಾ ಚುನಾವಣೆಗೆ(Parliament election)ಕೆಲವು ವಾರಗಳು ಮಾತ್ರ ಬಾಕಿಯಿದ್ದು, ಪಕ್ಷಗಳು ಚುನಾವಣೆಗೆ ಭರ್ಜರಿ ತಯಾರಿ ಆರಂಭಿಸಿವೆ. ನಿನ್ನೆ ತಾನೆ ಬಿಜೆಪಿ(BJP) ತನ್ನ ಅಭ್ಯರ್ಥಿಗಳ ಮೊದಲ ಪಟ್ಟಿಯನ್ನು ಬಿಡುಗಡೆ ಮಾಡಿದ್ದು 195 ಕ್ಷೇತ್ರಗಳಿಗೆ ಅಭ್ಯರ್ಥಿಗಳನ್ನು ಘೋಷಿಸಿದ್ದು ಹಲವು ಕಡೆ ಅಚ್ಚರಿ ಅಭ್ಯರ್ಥಿಗಳನ್ನು ಕಣಕ್ಕಿಳಿಸಿದೆ. ಆದರೆ, ಕರ್ನಾಟಕದ ಒಂದು ಕ್ಷೇತ್ರಕ್ಕೂ ಕೂಡ ಅಭ್ಯರ್ಥಿಗಳನ್ನು ಘೋಷಿಸದೇ ಬಿಜೆಪಿ ಅಚ್ಚರಿ ಮೂಡಿಸಿತ್ತು. ಆದರೀಗ ಬೆನ್ನಲ್ಲೇ ರಾಜ್ಯ ಬಿಜೆಪಿ ಕೋರ್‌ ಕಮಿಟಿ ಸದಸ್ಯರು ಭಾನುವಾರ ದಿಢೀರ್‌ ಸಭೆ ನಡೆಸಿ ಚರ್ಚೆ ನಡೆಸಿದ್ದು, ಸಂಭಾವ್ಯ ಸಮರ್ಥ ಅಭ್ಯರ್ಥಿಗಳ ಹೆಸರನ್ನು ಒಂದೆರಡು ದಿನದಲ್ಲಿ ವರಿಷ್ಠರಿಗೆ ಸಲ್ಲಿಸಲು ನಿರ್ಧರಿಸಿದ್ದಾರೆ.

ಅಂದಹಾಗೆ ಬಿಜೆಪಿ ಪಕ್ಷದ ಪಕ್ಷದ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ನೇತೃತ್ವದಲ್ಲಿ ಭಾನುವಾರ ಸಭೆ ನಡೆದಿದ್ದು, ಚುನಾವಣಾ ನಿರ್ವಹಣಾ ಸಮಿತಿಯು ಮುಂಬರುವ ಲೋಕಸಭೆ ಚುನಾವಣೆಗೆ ಪಕ್ಷದ ಅಭ್ಯರ್ಥಿಗಳನ್ನು ಶಾರ್ಟ್‌ಲಿಸ್ಟ್ ಮಾಡಿದೆ. ಈ ಬಾರಿ ಹಾಲಿ ಸಂಸದರನ್ನು ಹೊರತುಪಡಿಸಿ ಹನ್ನೆರಡು ಹೊಸ ಮುಖಗಳಿಗೆ ಸ್ಥಾನ ನೀಡಿದೆ ಎಂದು ಮೂಲಗಳು ತಿಳಿಸಿವೆ.